ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮೇ.24ರಿಂದ ಭಾರೀ ಮಳೆ ಮುನ್ಸೂಚನೆ| ಕರಾವಳಿ,ಮಲೆನಾಡಿಗೆ ರೆಡ್ ಅಲರ್ಟ್
ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮೇ 24ರ ನಾಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು, […]










