Editor

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹಾಲುಮಡ್ಡಿ ಮರ; ಸವಾರ ಗಂಭೀರ

ಸಮಗ್ರ ನ್ಯೂಸ್. ಚಲಿಸುತ್ತಿದ್ದ ಬೈಕ್ ಮೇಲೆ ಹಾಲು ಮಡ್ಡಿ (ಧೂಪ) ಮರ ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ(ಫೆ.4) ಸಂಜೆ ನಡೆದಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅದಾದ ಬಳಿಕ ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಒತ್ತಾಯಿಸಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ […]

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹಾಲುಮಡ್ಡಿ ಮರ; ಸವಾರ ಗಂಭೀರ Read More »

ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಚಿಕನ್ ಪಾಕ್ಸ್ ಹಾವಳಿ| ಆತಂಕದಲ್ಲಿ ಪೋಷಕರು

ಸಮಗ್ರ ನ್ಯೂಸ್: ದಕ್ಷಿಣಕನ್ನಡದಲ್ಲಿ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಸೋಂಕು ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ಒಂದೇ ತಾಲೂಕಿನ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಈ ಒಂದು ಚಿಕನ್ ಪಾಕ್ಸ್ ದೃಢಪಟ್ಟಿದೆ. ಹಾಗಾಗಿ ಮಕ್ಕಳ ಪೋಷಕರಲ್ಲಿ ಇದೀಗ ಆತಂಕ ಮನೆ ಮಾಡಿದೆ. ರೋಗ ಹರಡಿರುವ ಶಾಲೆಗಳ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೇ ಶಾಲೆಗಳಿಗೆ

ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಚಿಕನ್ ಪಾಕ್ಸ್ ಹಾವಳಿ| ಆತಂಕದಲ್ಲಿ ಪೋಷಕರು Read More »

ದ.ಕ ಜಿಲ್ಲಾ ಪಂಚಾಯತ್, ಕಡಬ ತಾ.ಪಂಚಾಯತ್, ಆಲಂಕಾರು ಗ್ರಾ.ಪಂ‌ಗೆ ನರೇಗಾ ಪ್ರಶಸ್ತಿ| ಹರ್ಷ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಮತ್ತು ಅಲಂಕಾರು ಗ್ರಾಮ ಪಂಚಾಯತ್‌ಗಳಿಗೆ 2023-24 ನೇ ಸಾಲಿನ ರಾಜ್ಯ ಮಟ್ಟದ ನರೇಗಾ ಪ್ರಶಸ್ತಿಗಳು ಲಭಿಸಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಮನ್ನಣೆಯು ಮಾನವ ಕೆಲಸದ ದಿನಗಳನ್ನು ಹೆಚ್ಚಿಸುವಲ್ಲಿ ಅತ್ಯುತ್ತಮ, ಮಹಿಳೆಯರ ಭಾಗವಹಿಸುವಿಕೆ, ಕೂಲಿ ಪಾವತಿ, ಕಾಮಗಾರಿ ಮುಕ್ತಾಯಗೊಳಿಸುವಿಕೆ, ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ಆಡಳಿತದಲ್ಲಿ ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ ಎಂದಿದ್ದಾರೆ.

ದ.ಕ ಜಿಲ್ಲಾ ಪಂಚಾಯತ್, ಕಡಬ ತಾ.ಪಂಚಾಯತ್, ಆಲಂಕಾರು ಗ್ರಾ.ಪಂ‌ಗೆ ನರೇಗಾ ಪ್ರಶಸ್ತಿ| ಹರ್ಷ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ Read More »

ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್​ 11 ರ ಸ್ಪರ್ಧಿಯಾಗಿ ರಾಜ್ಯಾದ್ಯಂತ ಸಖತ್ ಫೇಮಸ್ ಆಗಿದ್ದ ಗೋಲ್ಡ್ ಸುರೇಶ್ ಆಸ್ಪತ್ರೆಗೆ ಅಡ್ಮಿಟ್‌ ಆಗಿದ್ದಾರೆ. ಗೋಲ್ಡ್ ಸುರೇಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗೋಲ್ಡ್ ಸುರೇಶ್ ಆಸ್ಪತ್ರೆಯಲ್ಲಿ ಮಲಗಿರುವ ಫೋಟೋ ಹಾಗೂ ವಿಡಿಯೋ ವೈರಲ್‌ ಆಗಿವೆ. ಗೋಲ್ಡ್ ಸುರೇಶ್ ಅವರು ಕಾಲು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೇ ಗೋಲ್ಡ್ ಸುರೇಶ್ ಕಾಲಿಗೆ ಏಟಾಗಿತ್ತು. ಟಾಸ್ಕ್ ಆಡುವಾಗ ಪೆಟ್ಟು ಬಿದ್ದಿತ್ತು. ಕಾಲು ನೋವು ಹೆಚ್ಚಾಗಿದ್ದರಿಂದ ಗೋಲ್ಡ್

ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು Read More »

ಜಬ್ಬಾರ್ ಸಮೋಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ

ಸಮಗ್ರ ನ್ಯೂಸ್: ಹಿರಿಯ ವಿದ್ವಾಂಸ ದಿ| ಮುಳಿಯ ತಿಮ್ಮಪ್ಪಯ್ಯನವರ ನೆನಪಿನಲ್ಲಿ ನೀಡಲಾಗುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಯಕ್ಷಗಾನ ಅರ್ಥಧಾರಿ ಮತ್ತು ವೇಷಧಾರಿ ಜಬ್ಬಾರ್‌ ಸಮೋ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25 ಸಾ.ರೂ. ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ. ಫೆ.22ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್‌ ಶೆಟ್ಟಿ ತಿಳಿಸಿದ್ದಾರೆ. ಜಬ್ಟಾರ್‌ 1963ರಲ್ಲಿ ಎಸ್‌. ಮೊದೀನ್‌ ಕುಂಞಿ ಹಾಗೂ ಬೀಫಾತಿಮ ಅವರ ಪುತ್ರನಾಗಿ ಸಂಪಾಜೆಯಲ್ಲಿ ಜನಿಸಿದರು. ಶಾಲಾ ದಿನಗಳಲ್ಲಿ ಭಕ್ತ ಪ್ರಹ್ಲಾದ ಪ್ರಸಂಗದಲ್ಲಿ ಧನುಜ

ಜಬ್ಬಾರ್ ಸಮೋಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ Read More »

ಪುತ್ತೂರು: ಕಟ್ಟಡ ಧ್ವಂಸ ಆರೋಪ| ಶಾಸಕ ಅಶೋಕ್ ರೈ ವಿರುದ್ಧ ದೂರು

ಸಮಗ್ರ ನ್ಯೂಸ್: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ ಪೈಕಿ ಓರ್ವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್‌ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಉಜಿರೆ ನಿವಾಸಿ ದಿ| ಜಯಶ್ರೀ ಹೊಳ್ಳ ಅವರ ಪುತ್ರ ವಿಜಯ ರಾಘವೇಂದ್ರ ದೂರು ನೀಡಿದವರು. ಇವರ ಅಜ್ಜ ವಿಷ್ಣಯ್ಯ ಹೊಳ್ಳ ಎಂಬವರಿಗೆ ದೇಗುಲದಿಂದ ಬಾಡಿಗೆಗೆ ನೀಡಿದ ಸ್ಥಳದಲ್ಲಿ

ಪುತ್ತೂರು: ಕಟ್ಟಡ ಧ್ವಂಸ ಆರೋಪ| ಶಾಸಕ ಅಶೋಕ್ ರೈ ವಿರುದ್ಧ ದೂರು Read More »

ಗೋಕಳ್ಳತನ ಮಾಡಿದರೆ ಶೂಟೌಟ್- ಮಂಕಾಳ ವೈದ್ಯ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳತನ ಈ ಹಿಂದಿನಿಂದಲ್ಲೂ ನಡೆಯುತ್ತಾ ಬಂದಿದೆ. ಆದರೆ ಈಗ ನಾವು ಸುಮ್ಮನಿರಲು ಸಾಧ್ಯವಿಲ್ಲ. ಇನ್ನೇನಾದ್ರೂ ಈ ಪ್ರಕರಣ ಮುಂದುವರೆದರೆ ಗೋ ಕಳ್ಳರ ಮೇಲೆ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ಮಾಡಬೇಕಾಗುತ್ತದೆ ಎನ್ನುವ ಮೂಲಕ ಗೋ ಕಳ್ಳರಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ‌‌‌. ಜಿಲ್ಲೆಯಲ್ಲಿ ಗೋ ಕಳ್ಳತನ ಹೊಸದೆನು ಅಲ್ಲ. ಬಿಜೆಪಿ ಸರಕಾರದಲ್ಲೂ ಸಾಕಷ್ಟು ಗೋ ಕಳ್ಳತನ ಪ್ರಕರಣಗಳಾಗಿವೆ. ಆದರೆ ಅವರು ಸುಮ್ಮನಾಗಿದ್ದರು ಅಂತಾನಾವು ಸುಮ್ಮನಿರೋದಕ್ಕೆ ಆಗಲ್ಲ. ಎಂದಿದ್ದಾರೆ. ಅವರು ಜಿಲ್ಲಾಮಟ್ಟದ ಕೆಡಿಪಿ

ಗೋಕಳ್ಳತನ ಮಾಡಿದರೆ ಶೂಟೌಟ್- ಮಂಕಾಳ ವೈದ್ಯ Read More »

ಹರಿದ್ವಾರದಲ್ಲಿ ನಡೆಯಲಿರುವ 38ನೇ ರಾಷ್ಟ್ರೀಯ ಪುರುಷ ಕಬಡ್ಡಿ ಚಾಂಪಿಯನ್‌ಶಿಪ್ ಗೆ ಯೇನೆಕಲ್ಲಿನ ಮಿಥುನ್ ಗೌಡ ಆಯ್ಕೆ

ಸಮಗ್ರ ನ್ಯೂಸ್: 38ನೇ Beach national games 2025 ರಾಷ್ಟ್ರೀಯ ಪುರುಷ ಕಬಡ್ಡಿ ಚಾಂಪಿಯನ್‌ಶಿಪ್ ಪಂದ್ಯಾಟವು ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿದೆ. ಈ ಪಂದ್ಯಾಟದಲ್ಲಿ ಕರ್ನಾಟಕ ತಂಡದೊಂದಿಗೆ ಸುಳ್ಯ ತಾಲೂಕಿನ ಯೇನೆಕಲ್ಲಿನ ಮಿಥುನ್ ಗೌಡ ಆಯ್ಕೆ ಆಗಿರುತ್ತಾರೆ.

ಹರಿದ್ವಾರದಲ್ಲಿ ನಡೆಯಲಿರುವ 38ನೇ ರಾಷ್ಟ್ರೀಯ ಪುರುಷ ಕಬಡ್ಡಿ ಚಾಂಪಿಯನ್‌ಶಿಪ್ ಗೆ ಯೇನೆಕಲ್ಲಿನ ಮಿಥುನ್ ಗೌಡ ಆಯ್ಕೆ Read More »

ಜಾರಕಿಹೋಳಿ ಸಿಎಂ ಆಗಲೆಂದು ಪ್ರಯಾಗದಲ್ಲಿ ಹರಕೆ ಕಟ್ಟಿಕೊಂಡ ಅಭಿಮಾನಿಗಳು

ಸಮಗ್ರ ನ್ಯೂಸ್: ಸಚಿವ ಸತೀಶ್​ ಜಾರಕಿಹೋಳಿ ಮುಂದಿನ ಸಿಎಂ ಎಂದು ಸತೀಶ್​ ಅಭಿಮಾನಿಗಳು ಪ್ರಯಾಗ್​ ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಹರಕೆ ಕಟ್ಟಿಕೊಂಡಿದ್ದು, ಸತೀಶ್​ ಜಾರಕಿಹೋಳಿ ಸಿಎಂ ಆಗಬೇಕು ಎಂದು ಅಭಿಯಾನ ಮುಂದುವರಿದಿದೆ. ಕಳೆದ ತಿಂಗಳು ಸಿಗಂದೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸತೀಶ್ ಜಾರಕಿಹೋಳಿ ಅಭಿಮಾನಿಗಳು ಮುಂದಿನ ಸಿಎಂ ಸತೀಸ್​ ಜಾರಕಿಹೋಳಿ ಎಂಬ ಪೋಸ್ಟರ್​ ಹಿಡಿದು ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಸತೀಶ್​ ಅಭಿಮಾನಿಗಳು ತಮ್ಮ ಅಭಿಯಾನವನ್ನು ಮುಂದುವರಿಸಿದ್ದು. ಪ್ರಯಾಗ್​ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲೂ ತಮ್ಮ ಅಭಿಯಾನವನ್ನು ಮುಂದುವರಿಸಿದ್ದಾರೆ.

ಜಾರಕಿಹೋಳಿ ಸಿಎಂ ಆಗಲೆಂದು ಪ್ರಯಾಗದಲ್ಲಿ ಹರಕೆ ಕಟ್ಟಿಕೊಂಡ ಅಭಿಮಾನಿಗಳು Read More »

ಸುಳ್ಯ: ಆನ್ ಲೈನ್ ಜಾಬ್ ನೀಡುವುದಾಗಿ ಮೋಸ| ಲಕ್ಷಾಂತರ ರೂ. ವಂಚನೆ ಬಗ್ಗೆ ದೂರು

ಸಮಗ್ರ ನ್ಯೂಸ್ ಸುಳ್ಯ: ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹಣ ಪಡೆದು ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಜಾಲ್ಸೂರಿನ 25 ವರ್ಷ ಪ್ರಾಯದ ಮಹಿಳೆ ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ಗೃಹಣಿಯಾಗಿದ್ದು, ಜ.19ರಂದು ಕೃಪಾದಿಶಾ ಎಂಬ ಟೆಲಿಗ್ರಾಂ ಖಾತೆಯಿಂದ ಆನ್‌ಲೈನ್ ಪಾರ್ಟ್ಟೈಮ್ ಜಾಬ್ ನೀಡುವುದಾಗಿ ಹೇಳಿ, ಈ ಬಗ್ಗೆ ವಿವಿಧ ವಿಚಾರಗಳನ್ನು ತಿಳಿಸಿ, ಅದರಂತೆ ಮುಂದುವರಿಯಲು

ಸುಳ್ಯ: ಆನ್ ಲೈನ್ ಜಾಬ್ ನೀಡುವುದಾಗಿ ಮೋಸ| ಲಕ್ಷಾಂತರ ರೂ. ವಂಚನೆ ಬಗ್ಗೆ ದೂರು Read More »