Editor

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ| ಹಲವು ಬಿಜೆಪಿ ಕಾರ್ಯಕರ್ತರ ಬಂಧನ

ಸಮಗ್ರ ನ್ಯೂಸ್: ನೂತನ ಜಿಲ್ಲಾಡಳಿತ ಕೇಂದ್ರ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದ್ದು, ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಡೀಲ್‌ನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಯೆಯ್ಯಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲು ಆರಂಭಿಸಿದರು. ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್ […]

ಮಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ| ಹಲವು ಬಿಜೆಪಿ ಕಾರ್ಯಕರ್ತರ ಬಂಧನ Read More »

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗುಡ್ ನ್ಯೂಸ್/ ಗೌರವಧನ ಹೆಚ್ಚಿಸಿದ ಸರ್ಕಾರ

ಸಮಗ್ರ ನ್ಯೂಸ್: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೊಂದು ಖುಷಿಯ ಸುದ್ದಿ. ಅತಿಥಿ ಶಿಕ್ಷಕರು, ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ ₹2000 ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಇದು 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಅನ್ವಯಿಸಲಿದೆ. 2025ನೇ ಸಾಲಿನ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನವನ್ನು ₹2000 ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಗುರುವಾರ

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗುಡ್ ನ್ಯೂಸ್/ ಗೌರವಧನ ಹೆಚ್ಚಿಸಿದ ಸರ್ಕಾರ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ರೌಡಿಶೀಟರ್ ಯಾಕೆ ಅಧ್ಯಕ್ಷನಾಗಬಾರದು? ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಟ್ರಸ್ಟ್ ಗೆ ಮಾಜಿ ರೌಡಿ ಶೀಟರ್, ಕಾಂಗ್ರೆಸ್ ನಾಯಕ ಹರೀಶ್ ಗೌಡರನ್ನು ಆಯ್ಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ದಿನೇಶ್ ಗುಂಡೂರಾವ್ ಯಾಕೆ ಆಗಬಾರದು ಎಂದಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹರೀಶ್ ಗೌಡ ಈಗ ರೌಡಿ ಶೀಟರ್ ಅಲ್ಲ. ಮಾಜಿ ರೌಡಿ ಶೀಟರ್. ರೌಡಿ ಶೀಟರ್ ಗಳು ಸುಧಾರಣೆಯಾಗಬಾರದಾ? ಅವರು ಈಗ ಹಾಗಿಲ್ಲ. ಹಾಗಾಗಿ ಅವರು

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ರೌಡಿಶೀಟರ್ ಯಾಕೆ ಅಧ್ಯಕ್ಷನಾಗಬಾರದು? ಸಚಿವ ದಿನೇಶ್ ಗುಂಡೂರಾವ್ Read More »

ರಾಜ್ಯವೇ ಖುಷಿ ಪಡೋ ಸುದ್ದಿ ನೀಡಿದ್ದ ದಿವ್ಯಾವಸಂತ ಮೇಲೆ ಮತ್ತೊಂದು ಕೇಸ್| ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಆನಂದ್ ಗುರೂಜಿಯಿಂದ ದೂರು ದಾಖಲು

ಸಮಗ್ರ ನ್ಯೂಸ್: ಮಸಾಜ್ ಪಾರ್ಲರ್ ಹೆಸರಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಈ ಹಿಂದೆ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಹಾಗೂ ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯಾ ವಸಂತ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಆನಂದ ಗುರೂಜೀ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮತ್ತು ಜೀವಬೆದರಿಕೆ ಹಾಕಿದ್ದಾರೆ

ರಾಜ್ಯವೇ ಖುಷಿ ಪಡೋ ಸುದ್ದಿ ನೀಡಿದ್ದ ದಿವ್ಯಾವಸಂತ ಮೇಲೆ ಮತ್ತೊಂದು ಕೇಸ್| ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಆನಂದ್ ಗುರೂಜಿಯಿಂದ ದೂರು ದಾಖಲು Read More »

ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಉದ್ಘಾಟನೆ| ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಹುಕಾಲದ ಬೇಡಿಕೆಯಾಗಿದ್ದ ಪಡೀಲ್‌ನಲ್ಲಿ ನಿರ್ಮಿಸಿರುವ ಸುಸಜ್ಜಿತ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ “ಪ್ರಜಾ ಸೌಧ’ದ ಉದ್ಘಾಟನೆಯನ್ನು ಇಂದು ಮೇ 16 ರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಎಲ್ಲ ಇಲಾಖೆಗಳು ಈ ನೂತನ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿವೆ. ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ. ಆಧುನಿಕ ವ್ಯವಸ್ಥೆ ಯೊಂದಿಗೆ ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ಕಟ್ಟಡ ನಿರ್ಮಾಣವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮೇ 16ರಂದು ಮಧ್ಯಾಹ್ನ 3.20ಕ್ಕೆ

ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಉದ್ಘಾಟನೆ| ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ Read More »

ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ: ಇಬ್ಬರು ಬಾಲಕರು ಅರೆಸ್ಟ್

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದಿರುವ ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಮೇ 6ರಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಇದೀಗ ಇಬ್ಬರು ಅಪ್ರಾಪ್ತ ಬಾಲಕರನ್ನು

ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ: ಇಬ್ಬರು ಬಾಲಕರು ಅರೆಸ್ಟ್ Read More »

ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು| ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷ

ಸಮಗ್ರ ನ್ಯೂಸ್: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು| ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷ Read More »

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ

ಸಮಗ್ರ ನ್ಯೂಸ್: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆಯಾಗಿದೆ. ಸರಕು ತುಂಬಿದ್ದ ಮಂಗಳೂರಿನ ಹಡಗು ಮುಳುಗಡೆಯಾಗಿದೆ. ಎಂ.ಎಸ್.ವಿ. ಸಲಾಮತ್ ಎಂಬ ಹೆಸರಿನ ಹಡಗು 60 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಯಾಗಿದೆ. ಮೇ 12ರಂದು ಮಂಗಳೂರು ಬಂದರಿನಿಂದ ಹೊರಟಿತ್ತು. ತಾಂತ್ರಿಕ ಸಮಸ್ಯೆಯಿಂದಾಗಿ ಹಡಗಿನೊಳಗೆ ನೀರು ನುಗ್ಗಿ ಮುಳುಗಿದೆ. ಮುಳುಗುತ್ತಿದ್ದ ಹಡಗಿನಿಂದ ಸಣ್ಣ ಬೋಟಿಗೆ ಹಾರಿ ಆರು ಜನ ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಡಿಂಗಿ ಬೋಟ್ ಮೂಲಕ ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ Read More »

ಆಭರಣ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 22, 24, ಮತ್ತು 18 ಕ್ಯಾರಟ್ ಚಿನ್ನದ ದರಗಳು ಇಳಿಕೆಯಾಗಿವೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಒಂದು ವೇಳೆ ನೀವು ಚಿನ್ನ ಖರೀದಿಗೆ ಪ್ಲಾನ್ ಮಾಡುತ್ತಿದ್ರೆ, ಇಂದು ಖರೀದಿಸಬಹುದಾಗಿದೆ. ಇಂದಿನ 22, 24 ಮತ್ತು 18 ಕ್ಯಾರಟ್ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ. ಮದುವೆ ಸೀಸನ್ ಶುರುವಿನ ಬೆನ್ನಲ್ಲೇ ಚಿನ್ನದ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು..!

ಸಮಗ್ರ ನ್ಯೂಸ್: ಪ್ರೀತಿಸಿದ ಹುಡುಗನ ಜೊತೆಗೆ ದಾಂಪತ್ಯ ಜೀವನಕ್ಕೆ ಚೈತ್ರಾ ಕುಂದಾಪುರ ಕಾಲಿಟ್ಟಿದ್ದರು. ಆದ್ರೇ ತಮ್ಮ ಮದುವೆಗೆ ಖುದ್ದು ತಂದೆಯನ್ನೇ ಕರೆದಿಲ್ಲ ಎಂಬ ಆರೋಪ ಕೇಳಿಬಂದಿದೆ. ಖುದ್ದು ಈ ಬಗ್ಗೆ ಮಾಧ್ಯಮಗಳ ಮುಂದೆ ಬಂದು ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಮಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೀಗ ಈ ಪ್ರಕರಣಕ್ಕೆ ಚೈತ್ರಾ ಕುಂದಾಪುರ ಟ್ವಿಸ್ಟ್ ಹಾಕಿದ್ದಾರೆ. ತಂದೆಯ ಮಾತು ಕೇಳುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಹೀಗೆ ಬರೆದುಕೊಂಡು ಶೇರ್

ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು..! Read More »