ಸಮಗ್ರ ಸಮಾಚಾರ

ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್| ಪ್ರತಿಹರಿದು ಕಾಂಗ್ರೆಸ್ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಬ್ರೇಕ್ ಬೀಳಲಿದೆ. ಯಾಕೆಂದರೆ ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಧಾನಸಭೆಯಿಂದ ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2022ನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್‌ನಲ್ಲಿ ಇಂದು ಮಂಡನೆ ಮಾಡಿದರು. ವಿಧೇಯಕ ಅಂಗೀಕಾರವಾಗಿದ್ದು ಮತ್ತೊಂದೆಡೆ ಮತಾಂತರ ನಿಷೇಧ ವಿಧೇಯಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಲ್‌ನ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ […]

ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್| ಪ್ರತಿಹರಿದು ಕಾಂಗ್ರೆಸ್ ಆಕ್ರೋಶ Read More »

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅವರು ದಸರಾ ಜಂಬೂಸವಾರಿಯನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿತ್ತು. ಆದ್ರೇ ಪ್ರಧಾನಿ ಮೋದಿ ದಸರಾ ಮಹೋತ್ಸವಕ್ಕೆ ಬರಲ್ಲ ಎಂಬುದಾಗಿ ಪಿಎಂ ಕಚೇರಿಯಿಂದ ಸಿಎಂ ಕಚೇರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಈ ಕುರಿತಂತೆ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ತಿಳಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಚೇರಿಗೆ ಪಿಎಂ

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ Read More »

ಗೂಡ್ಸ್‌ ಲಾರಿ ಢಿಕ್ಕಿ| ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 6 ಗಂಟೆಗೆ ಸುಮಾರಿಗೆ ಅಪರಿಚಿತ ಗೂಡ್ಸ್‌ ಲಾರಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಮರ್ಥ್ (14) ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಸಮರ್ಥ್ ತಂದೆ ಪ್ರಭಾಕರ್ ನಿನ್ನೆ ಅಪಘಾತದ ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರಾದ ಪ್ರಭಾಕರ್ ಹಾಗೂ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಓದುತ್ತಿದ್ದ ಮಗನನ್ನು

ಗೂಡ್ಸ್‌ ಲಾರಿ ಢಿಕ್ಕಿ| ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು Read More »

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ

ಬೆಂಗಳೂರು: ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. “ಭಾರತ ಜೋಡೋ ಯಾತ್ರೆಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ” ಎಂದಿದ್ದಾರೆ. “ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ Read More »

ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಮೂಡಿಗೆರೆ ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಬಾರಿ ಗಾಳಿ ಮಳೆಗೆ ಗುಡ್ಡ ಕುಸಿದಿತ್ತು. ಅದರ ಪರಿಣಾಮವಾಗಿ ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಮಣ್ಣು ಕುಸಿಯದಂತೆ ತಡೆಯಲು ಮನುಷ್ಯ ತೆರಳಿ ಗಿಡ ನೆಡದಂತಹ ಪ್ರದೇಶಗಳಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆಗೆ ಮುಂದಾಗಿದೆ. ಚಾರ್ಮಾಡಿ ಘಾಟ್, ಬಿದ್ರುತಳ, ಮದುಗುಂಡಿ, ಮೇಗೂರು, ಸೇರಿದಂತೆ ಹಲವೆಡೆ ಗುಡ್ಡ ಕುಸಿತವಾಗಿ

ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.
Read More »

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ!|ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ ಇತಿಹಾಸದಲ್ಲೇ ಈ ಬಾರಿಯ ದಸರಾ ಅತ್ಯಂತ ಮಹತ್ವದ್ದಾಗಲಿದೆ. ದಸರಾ ಇತಿಹಾಸ ಪುಟಗಳಲ್ಲಿ ಈ ಬಾರಿಯ ದಸರಾ ಪ್ರಮುಖ ಸ್ಥಾನ ಪಡೆಯಲಿದೆ. ನಾಡಹಬ್ಬ ದಸರಾ ಸೆ. 26 ರಿಂದ ಆರಂಭವಾಗಲಿದೆ‌. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು ದಸರಾ ಉದ್ಘಾಟಿಸಲಿದ್ದಾರೆ. ಇಷ್ಟು ವರ್ಷ ನಾಡಿನ ಹಿರಿಯ ಸಾಹಿತಿಗಳು, ಸ್ವಾಮೀಜಿಗಳು, ವಿಚಾರವಾದಿಗಳು, ನಾಡು ನುಡಿಗೆ ಅಸಾಮಾನ್ಯ ಸೇವೆ ಸಲ್ಲಿಸಿದವರು ದಸರಾ ಉದ್ಘಾಟಿಸುತ್ತಿದ್ದರು. ಕಳೆದ ಬಾರಿ ಈ

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ!|ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು Read More »

ಲಕ್ಷ್ಮಣತೀರ್ಥ ನದಿಯಲ್ಲಿ ಯುವಕನ ಶವಪತ್ತೆ

ಸಮಗ್ರ ನ್ಯೂಸ್: ಹುಣಸೂರು ಲಕ್ಷ್ಮಣತೀರ್ಥ ನದಿಯ ಕಟ್ಟೆಮಳಲವಾಡಿ ಅಣೆಕಟ್ಟೆ ಬಳಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ದಾವಣಿ ಬೀದಿಯ ನಿತ್ಯಾನಂದರ ಪುತ್ರ, ಸ್ಟೋರ್ ಬೀದಿ ನಿವಾಸಿ ರಾಘವೇಂದ್ರ(24)ರ ಶವ ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು, ಈತನ ಪಲ್ಸರ್ ಬೈಕ್, ಮೊಬೈಲ್, ಪರ್ಸ್,ಪಾನ್‌ಕಾರ್ಡ್, ಡಿ.ಎಲ್. ಚಿಕ್ಕಹುಣಸೂರು ಹಳೇ ಊರಿನ ನದಿಯ ಬಳಿಯ ಜಮೀನಿನಲ್ಲಿ ಪತ್ತೆಯಾಗಿತ್ತು. ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಎಸ್.ಐ.ರಾಧಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಘವೇಂದ್ರರ

ಲಕ್ಷ್ಮಣತೀರ್ಥ ನದಿಯಲ್ಲಿ ಯುವಕನ ಶವಪತ್ತೆ Read More »

ಪುತ್ತೂರು: ಮಹಿಳೆ ಮೇಲೆ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ‌ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆ. 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ದಿನಸಿ ತರಲೆಂದು‌ ಅಂಗಡಿಗೆ ಬಂದ ಮಹಿಳೆಯ ಮೇಲೆ ಹಾಡುಹಗಲೇ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಯಾವುದೇ ಭಯವಿಲ್ಲದೆ‌ ಈ ರೀತಿಯ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಪುತ್ತೂರು: ಮಹಿಳೆ ಮೇಲೆ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ Read More »

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ವಿಶ್ವೇಶ್ವರ

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು Read More »

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ

ಸಮಗ್ರ ನ್ಯೂಸ್: ಎಲ್ಲಾ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಟೀಂ ಇಂಡಿಯಾ ಆಟಗಾರ‌ಸುರೇಶ್ ರೈನಾ ಗುಡ್​ಬೈ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಘೋಷಣೆ ಮಾಡಿದ್ದು, ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ. ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ Read More »