ಸಮಗ್ರ ಸಮಾಚಾರ

ಪ್ರಧಾನಿ ಮೋದಿ ಕಾಲಿಗೆರಗಿ ಸ್ವಾಗತಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ಜಪಾನ್‌ನಲ್ಲಿ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಮಂದಿ ಇದೀಗ ಪಪುವಾ ನ್ಯೂಗಿನಿಯಾಗೆ ಬಂದಿಳಿದಿದ್ದಾರೆ. ಮೋದಿ ಆಗಮನದಿಂದ ಪಪುವಾ ನ್ಯೂಗಿನಿಯಾ ಪುಟ್ಟ ದೇಶ ಪುಳಕಿತಗೊಂಡಿದೆ. ಶಿಷ್ಟಾಚಾರ ಬದಿಗೊತ್ತಿ ಪ್ರಧಾನಿ ಮೋದಿಗೆ ಪಪುವಾ ನ್ಯೂಗಿನಿಯಾ ಭರ್ಜರಿ ಸ್ವಾಗತ ನೀಡಿದೆ. ವಿಮಾನದಿಂದ ಇಳಿದು ಬಂದ ಮೋದಿಯನ್ನು ಸ್ವಾಗತಿಸಿದ ಪಪುವಾ ಪ್ರಧಾನಿ ಜೇಮ್ಸ್ ಮರಾಪೆ, ಮೋದಿ ಕಾಲಿಗೆರಗಿದ ಘಟನೆ ನಡೆದಿದೆ. ಈ ವಿಡಿಯೋ ಭಾರಿ ವೈರಲ್ ಆಗಿದ್ದು, ಮೋದಿ ಜನಪ್ರೀಯತೆ ಹಾಗೂ ಮೋದಿ

ಪ್ರಧಾನಿ ಮೋದಿ ಕಾಲಿಗೆರಗಿ ಸ್ವಾಗತಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ Read More »

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ| ಧರೆಗುರುಳಿದ ಮರ, ಟ್ರಾಫಿಕ್ ಜಾಮ್

ಸಮಗ್ರ ನ್ಯೂಸ್: ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿಯುತ್ತಿತ್ತು ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.‌ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಸುತ್ತಮುತ್ತ ಆಲಿಕಲ್ಲು ಸಮೇತ ಭಾರೀ ಮಳೆ ಸುರಿಯುತ್ತಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ| ಧರೆಗುರುಳಿದ ಮರ, ಟ್ರಾಫಿಕ್ ಜಾಮ್ Read More »

ಚಿಕ್ಕಮಗಳೂರು : ಬೈಕ್ ಮೇಲೆ ಬಿದ್ದ ಮರ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್:‌ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ಸಂಭವಿಸಿದೆ. ವೇಣುಗೋಪಾಲ್ (45) ಮೃತ ದುರ್ದೈವಿ. ಮೂಲತಃ ಉತ್ತರ ಕರ್ನಾಟಕದವರಾದ ಇವರು ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟೇ ಜೊತೆಗೆ ಮೂಡಿಗೆರೆಯಲ್ಲಿ ಬಳೆ ಅಂಗಡಿ ನಡೆಸುತ್ತಿದ್ದರು. ಈ ಕಾರಣ ಇವರು ತನ್ನ ಹೋಂ ಸ್ಟೇಯಿಂದ ಮನೆಗೆ ತೆರಳುತ್ತಿದ್ದಾಗ ಹೋಂ ಸ್ಟೇಯ ತುಸು ದೂರದಲ್ಲಿ ಒಂದರ ಹಿಂದೆ ಒಂದರಂತೆ ಒಂದೇ ಕಾಲಕ್ಕೆ ಮೂರು ಮರಗಳು ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಚಿಕ್ಕಮಗಳೂರು : ಬೈಕ್ ಮೇಲೆ ಬಿದ್ದ ಮರ| ಸವಾರ ಸ್ಥಳದಲ್ಲೇ ಸಾವು Read More »

ಬೆಂಗಳೂರಿನಲ್ಲಿ ಮರಣ ಮಳೆ| ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ‌ ಘೋಷಣೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಇನ್ಫೋಸಿಸ್‌ ಉದ್ಯೋಗಿಯಾಗಿದ್ದ ಭಾನುರೇಖಾ ಎಂಬ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ

ಬೆಂಗಳೂರಿನಲ್ಲಿ ಮರಣ ಮಳೆ| ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ‌ ಘೋಷಣೆ Read More »

ಸಿಎಂ ಆಯ್ಕೆ ಪ್ರಕ್ರಿಯೆ ಪ್ರಾರಂಭ|ಮೂವರು ವೀಕ್ಷಕರನ್ನು ನೇಮಿಸಿದ ಮಲ್ಲಿಕಾರ್ಜುನ ಖರ್ಗೆ

Samagra news: ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್‌ನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಇದೀಗ ಪ್ರಕ್ರಿಯೆ ಪ್ರಾರಂಭಗೊಂಡಿವೆ. ಅದರಂತೆ ಮುಂದಿನ ಮುಖ್ಯಮಂತ್ರಿಗಳು ಯಾರು ಆಗುತ್ತಾರೆ ಎನ್ನುವ ಚರ್ಚೆ ಜೋರಾಗುತ್ತಿದ್ದಂತೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕಗೊಳಿಸಿದ್ದಾರೆ. ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ ಮತ್ತು ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ಕರ್ನಾಟಕದಲ್ಲಿ ಸಿಎಲ್‌ಪಿ ನಾಯಕನ

ಸಿಎಂ ಆಯ್ಕೆ ಪ್ರಕ್ರಿಯೆ ಪ್ರಾರಂಭ|ಮೂವರು ವೀಕ್ಷಕರನ್ನು ನೇಮಿಸಿದ ಮಲ್ಲಿಕಾರ್ಜುನ ಖರ್ಗೆ Read More »

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್,

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ Read More »

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನ ಧ್ವಜವಲ್ಲ- ಉ.ಕ ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಹೊನ್ನಾವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಭಟ್ಕಳ ಶಂಶುದ್ದೀನ್ ವೃತ್ತದಲ್ಲಿ ಹಸಿರು, ಕೇಸರಿ ಬಾವುಟ ಹಿಡಿದು ಕಾಂಗ್ರೆಸ್ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆದರೆ ಪಾಕಿಸ್ತಾನ ಧ್ವಜ ಹಾರಿಸಿದ್ದಾರೆ, ಮುಸ್ಲಿಂ ಧ್ವಜ ಹಾರಿಸಿದ್ದಾರೆ ಎಂಬ ವಾಟ್ಸಾಪ್ ಬರಹಗಳು ಎಲ್ಲೆಡೆ ಹರಿದಾಡಿದ್ದವು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ರವರು ಭಟ್ಕಳದಲ್ಲಿ ಹಾರಿಸಲಾದ ಧ್ವಜ ಪಾಕಿಸ್ತಾನದ ಧ್ವಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು ಬಳಸಿದ ಧ್ವಜ ಪಾಕಿಸ್ತಾನದ ಧ್ವಜ

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನ ಧ್ವಜವಲ್ಲ- ಉ.ಕ ಎಸ್ಪಿ ಸ್ಪಷ್ಟನೆ Read More »

ಬಿಜೆಪಿ ಸೋಲಿನ ಹೊಣೆ ಹೊತ್ತ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…?

ಸಮಗ್ರ ನ್ಯೂಸ್: 2023ನೇ ಸಾಲಿನ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು. ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ಸೋಮವಾರ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮಾಹಿತಿ ತಿಳಿದುಬಂದಿದೆ. ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಕಂಡಿರುವ ಹಿನ್ನೆಲೆಯಲ್ಲಿ ಅದರ ನೈತಿಕ ಹೊಣೆ ಕಟೀಲ್ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ15 ರಂದು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕಟೀಲ್ ನಿರ್ಧಾರ ಮಾಡಿದ್ದಾರೆ

ಬಿಜೆಪಿ ಸೋಲಿನ ಹೊಣೆ ಹೊತ್ತ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…? Read More »

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ

ಸಮಗ್ರ ನ್ಯೂಸ್: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರವೀಣ್ ಸೂದ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಸಿಬಿಐನ ಉನ್ನತ ಹುದ್ದೆಗೆ 3 ಅಧಿಕಾರಿಗಳನ್ನು ಆಯ್ಕೆ ಮಾಡಿತ್ತು. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮೂರು ಅಧಿಕಾರಿಗಳ

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ Read More »

ಮೇ.10 ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ| 224 ಕ್ಷೇತ್ರಗಳ‌ ಮತದಾರರಿಗೆ ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರ ನಾಳೆ ಮತದಾನ ನಡೆಯಲಿದ್ದು, ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮೇ. 10 ರ ನಾಳೆ ರಾಜ್ಯಾದ್ಯಂತ ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 1.56 ಲಕ್ಷ ಪೊಲೀಸರು ಬಿಗಿ ಭದ್ರತೆ ನಿಯೋಜಿಸಲಾಗಿದೆ. ಒಟ್ಟು 304 ಡಿವೈಎಸ್ ಪಿಗಳು, 991 ಪಿಐಗಳು, 2610 ಪಿಎಸ್ ಐಗಳು, 5803 ಎಎಸ್ ಐಗಳು,46, 421 ಪೊಲೀಸರು, 27,900 ಗೃಹ ರಕ್ಷಕರು ಸೇರಿದಂತೆ 84.119 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಮೇ.10 ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ| 224 ಕ್ಷೇತ್ರಗಳ‌ ಮತದಾರರಿಗೆ ಇಲ್ಲಿದೆ ಪ್ರಮುಖ ಮಾಹಿತಿ Read More »