ಸಮಗ್ರ ಸಮಾಚಾರ

ಸುಳ್ಯ: ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿರಾಕರಣೆ ಬ್ಯಾನರ್

ಸಮಗ್ರ ನ್ಯೂಸ್: ಹಿಜಾಬ್ ವಿವಾದದ ಬಳಿಕ ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರಸ್ಥರು ಹೈಕೋರ್ಟ್ ತೀರ್ಪಿನ ವಿರುದ್ಧ ಬಂದ್ ಮಾಡಿರುವ ಹಿನ್ನಲೆಯಲ್ಲಿ ಇದೀಗ ಬಹುತೇಕ ಜಾತ್ರೋತ್ಸವ ಸಂತೆ ಮಾರುಕಟ್ಟೆಯಲ್ಲಿ ಮುಸಲ್ಮಾನರಿಗೆ ವ್ಯಾಪಾರ ನಿರ್ಬಂಧಿಸಲಾಗುತ್ತಿದೆ. ಇದೀಗ ಈ ವ್ಯಾಪಾರ ನಿಷೇಧ ಸುಳ್ಯಕ್ಕೂ ಕಾಲಿರಿಸಿದ್ದು, ಇಲ್ಲಿನ ಜಯನಗರದ ಜಾತ್ರೋತ್ಸವದಲ್ಲಿ ಮುಸ್ಲಿಂಮರಿಗೆ ವ್ಯಾಪಾರ ನಿಷೇಧಿಸಿರುವ ಕುರಿತಾದ ಬ್ಯಾನರ್ ಅಳವಡಿಸಲಾಗಿದೆ. ಜಯನಗರದ ಆದಿಮೊಗೇರ್ಕಳ ಕೊರಗಜ್ಜನ ಸನ್ನಿಧಾನದಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರು ವ್ಯಾಪಾರ ನಡೆಸಬಾರದು ಎಂಬ ಬ್ಯಾನರ್ ಅಳವಡಿಸಲಾಗಿದೆ.

ಸುಳ್ಯ: ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿರಾಕರಣೆ ಬ್ಯಾನರ್ Read More »

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ – ಪುತ್ರನ ಕೃತ್ಯ ಸಾಬೀತು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ 2021ರಲ್ಲಿ ತಂದೆಯನ್ನು ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಪುತ್ರನ ಮೇಲಿನ ಆರೋಪ ಸಾಬೀತಾಗಿದೆ. 2021ರ ಜ. 18ರಂದು ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಡು ಮುಡ್ಯೊಟ್ಟು ನಿವಾಸಿ ಶ್ರೀಧರ ಪೂಜಾರಿ (56) ಅವರನ್ನು ಪುತ್ರ ಹರೀಶ್‌ ಪೂಜಾರಿ (28) ಕೊಲೆ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿವರ : ಆರೋಪಿ ಹರೀಶ್‌ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ – ಪುತ್ರನ ಕೃತ್ಯ ಸಾಬೀತು Read More »

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ| ಆರೋಪಿ ಪರಾರಿ

ಸಮಗ್ರ ನ್ಯೂಸ್: ಪೊಲೀಸ್ ಸಿಬ್ಬಂದಿ ಮೇಲೆ ಚೂರಿ ಇರಿದಿರುವ ಘಟನೆ ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಸೋಮವಾರ ನಡೆದಿದೆ. ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ಬಂದರ್ ಠಾಣೆಯ ಪೊಲೀಸ್ ಸಿಬ್ಬಂದಿ ವಿನೋದ್‌ ಎಂಬವರಿಗೆ ಚೂರಿ ಇರಿದಿದ್ದಾನೆ. ದುಬಾರಿ ಬೆಲೆಯ ವಾಚ್ ಮಾರಾಟಕ್ಕಾಗಿ ಕಾಸರಗೋಡು ಮೂಲದ ವ್ಯಕ್ತಿ ಬಂದಿದ್ದು, ಆತನ ಮೇಲೆ ಅನುಮಾನಗೊಂಡ ಅಂಗಡಿಯ ಮಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಬಂದರ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿ ಚೂರಿ ಇರಿದಿದ್ದು,

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ| ಆರೋಪಿ ಪರಾರಿ Read More »

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ

ಶಿವಮೊಗ್ಗ : ಅನ್ಯಕೋಮಿನ ಗುಂಪೊಂದು ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಬಜರಂಗದಳದ ಕಾರ್ಯಕರ್ತ ಹರ್ಷ ಎಂದು ಗುರುತಿಸಲಾಗಿದೆ. ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ Read More »

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ

ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ Read More »

ಸುಳ್ಯ : ರಬ್ಬರ್ ಸಾಗಾಟದ ಲಾರಿ ಪಲ್ಟಿ

ಸುಳ್ಯ : ತಾಲೂಕಿನ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆ ರಬ್ಬರ್ ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಎಂಬಲ್ಲಿ ಪಲ್ಟಿಯಾಗಿದೆ.ಪಲ್ಟಿಯಾದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ರಬ್ಬರ್ ಶೀಟ್ ಗಳು ಎಲ್ಲಾ ಕಡೆ ಚದುರಿ ಹೋಗಿದೆ. ಚಾಲಕ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್.ಐ ಆಂಜನೇಯ ರೆಡ್ಡಿ ಹಾಗೂ

ಸುಳ್ಯ : ರಬ್ಬರ್ ಸಾಗಾಟದ ಲಾರಿ ಪಲ್ಟಿ Read More »

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ

ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ತಿಳಿದುಬಂದಿದೆ. ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ಮಿ

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ Read More »

ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, ಡಿವೈಎಸ್ಪಿಯಿಂದ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್

ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಯೋರ್ವ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕಿರುವುದು ಬಹಿರಂಗವಾಗಿದೆ. ಪೋಸ್ಟ್ ನೋಡಿ ಈತನ ಮನಸ್ಥಿತಿ ಈಗಿದ್ದರೆ ಇಲಾಖೆಯಲ್ಲಿ ಎಷ್ಟೆಲ್ಲಾ ಅನ್ಯಾಯ ಮಾಡಿರುವ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ‌. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಡಿವೈಎಸ್ ಪಿ ರಂಗಸ್ವಾಮಿ ಸಿ.ಜೆ, ತನ್ನ ಪೋಸ್ಟ್ ನಲ್ಲಿ ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, 5 ಕೆಜಿ X 33 ಒಂದೇ ಮನೆಗೆ 165 ಕೆಜಿ ಉಚಿತ ಪಡಿತರ ಅಕ್ಕಿ. ಹಿಂಗಾದರೆ ಬಹುಬೇಗ ಅವರ ಮುಲ್ಲಾ ಹೇಳಿದ ಹಾಗೆ 2050ರ

ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, ಡಿವೈಎಸ್ಪಿಯಿಂದ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ Read More »

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು

ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಅಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು Read More »

ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು

ಹುಬ್ಬಳ್ಳಿ: ನಾನು ಹಿಜಬ್ ಬಗ್ಗೆ ಮಾತನಾಡುವವನೇ. ನಾನು ಯಾಕೆ ಕ್ಷಮೆ ಕೇಳಬೇಕು ಎಂದು ಹೇಳುವ ಮೂಲಕ ಮಾಜಿ ಸಚಿವ ಜಮೀರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಜಮೀರ್ ಅಹ್ಮದ್ ಕೌಂಟರ್ ನೀಡಿ ಮಾತನಾಡಿದ್ದು, ನಾನ್ ಹಿಜಬ್ ಬಗ್ಗೆ ಮಾತನಾಡುವವನೇ, ಯಾಕೆ ನಾನು ಕ್ಷಮೆ ಕೇಳಬೇಕು. ಕ್ಷಮೆ ಕೇಳುವಂತಹ ಹೇಳಿಕೆ ನಾನೇನು ನೀಡಿದ್ದೀನಿ ಎಂದು ಕಿಡಿಕಾರಿದರು. ನಾನು ಹಿಜಬ್ ಹಾಕಬೇಕು ಅಂತ ಹೇಳಿದ್ದೆ, ಮಾಧ್ಯಮದವರು ಅದನ್ನು ತಿರುಚಿದ್ದಾರೆ. ಹೆಲ್ಮೇಟ್ ರೀತಿ ಹಿಜಬ್ ಹಾಕೋಬೇಕು, ಹೆಲ್ಮೇಟ್ ಹೇಗೆ

ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು Read More »