ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ವ್ಯತ್ಯಯ
ಬೆಂಗಳೂರು: ಮಾಜಿ ಸಿಎಂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ವೈದ್ಯರ ಪರೀಕ್ಷೆಗೆ ಒಳಪಟ್ಟಿದ್ದಾರೆ. ನಿನ್ನೆ ರಾತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ನಂತರ ಅವರ ಆಪ್ತ ವೈದ್ಯ ಡಾ. ರವಿಕುಮಾರ್ ಅವರನ್ನು ಪರೀಕ್ಷಿಸಿದ್ದು, ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ವ್ಯತ್ಯಯ Read More »










