ಶಾಲೆಗೆ ಹೋಗಿದ್ದ 7ನೇ ತರಗತಿ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ – ಶಾಲಾ ಆವರಣದಲ್ಲಿ ಬ್ಯಾಗ್ ಇಟ್ಟು ದಿಢೀರ್ ಕಣ್ಮರೆ
ಸಮಗ್ರ ನ್ಯೂಸ್: ಶಾಲೆಗೆ ತೆರಳಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದಲ್ಲಿ ನಡೆದಿದೆ. ದಾಸರಹಳ್ಳಿ ಗ್ರಾಮದ ಡಿ.ಬಿ.ಕುಮಾರ್ ಅವರ ಸಾಕು ಮಗಳು ನಂದಿತಾ ಕಾಣೆಯಾದಾಕೆ. ಅಣತಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನವೆಂಬರ್ 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಾಳೆ. ಮೂಲತಃ ಕೆ.ಆರ್.ಪೇಟೆ, ತಾಲ್ಲೂಕಿನ ನಂಜೇಗೌಡ ಮಂಗಳ ದಂಪತಿ ಪುತ್ರಿ ನಂದಿತಾಳನ್ನು ತಾತ ಚನ್ನರಾಯಪಟ್ಟಣ ದಾಸರಹಳ್ಳಿ […]










