ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಅಮಾನವೀಯ ಘಟನೆಗಳು |ಮೃತಪಟ್ಟವರ ಬೆಲೆಬಾಳುವ ವಸ್ತುಗಳು ಮಂಗಮಾಯ…!
ಮಡಿಕೇರಿ: ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾಗೆ ತುತ್ತಾಗಿ ಮೃತಪಟ್ಟವರ ಬೆಲೆಬಾಳುವ ವಸ್ತುಗಳು ಕಾಣೆಯಾಗುತ್ತಿರುವ ಪ್ರಕರಣಗಳು ಆಗಾಗ ಕೇಳಿಬರುತ್ತಿವೆ. ಇದೀಗ ಕೊರೋನಾ ಕಾರಣದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ಲಕ್ಷಾಂತರ ರೂ. ಬೆಲೆಬಾಳುವ ಮಾಂಗಲ್ಯ ಸರ ನಾಪತ್ತೆಯಾಗಿದೆ. ಕುಶಾಲನಗರ ತಾಲೂಕಿನ ರಸಲ್ ಪುರ ಗ್ರಾಮದ ಕಮಲ ಎಂಬ ಮಹಿಳೆ ಮೇ 1 ರಂದು ಕೊರೋನಾ ಸೋಂಕಿಗೆ ಒಳಗಾಗಿ ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮರುದಿನ ಅವರಿಗೆ ಅನಾರೋಗ್ಯ ಉಲ್ಬಣಗೊಂಡ ಕಾರಣ ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಲಾಗಿತ್ತು. ಆ ವೇಳೆ […]









