ಸಮಗ್ರ ಸಮಾಚಾರ

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್

ಸಮಗ್ರ ನ್ಯೂಸ್: ಉದ್ಯಮಿ ಸೋಗಿನಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಂಡು ಮದುವೆಯಾಗಿ ಹಣ ಚಿನ್ನಾಭರಣ ಪಡೆದು ಎಸ್ಕೇಪ್ ಆಗುವ ಯುವಕನ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೋರ್ಸ್ ಆದವರು ಮತ್ತು 40 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಖದೀಮ ಹಲವಾರು ಮಹಿಳೆಯರಿಗೆ ವಂಚಿಸಿ ಎಸ್ಕೇಪ್ ಆಗಿದ್ದಾನೆ. ಕೇರಳ ಮೂಲದ ನಿವಾಸಿ ಸುನೀಶ್ ಪಿಳ್ಳೆ(33)ವಿರುದ್ದ ಮೈಸೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೋಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮೈಸೂರಿನ ವಿಜಯ ನಗರ

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್ Read More »

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ| 17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ

ಸಮಗ್ರ ನ್ಯೂಸ್: ಮೈಸೂರಿನ ಪಾಠಕ್ ಡೆವಲಪರ್ಸ್ ನ ಮಾಲೀಕ ಶ್ರೀಹರಿ ಪಾಠಕ್ ರನ್ನ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಾರ್ಟ್ ಮೆಂಟ್ ನಲ್ಲಿ ಮನೆ ಕೊಡುವುದಾಗಿ ನಂಬಿಸಿ ಹಲವರಿಂದ ಮುಂಗಡ ಹಣ ಪಡೆದುಕೊಂಡು ವಂಚಿಸಿದ್ದ ಶ್ರೀಹರಿ ಫಾಠಕ್ ವಿರುದ್ದ ವಿವಿದ ಪೊಲೀಸ್ ಠಾಣೆಗಳಲ್ಲಿ ಹಾಗೂ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಘನ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ. ತಲೆ ಮರೆಸಿಕೊಂಡ ಆರೋಪಿಯನ್ನ ಬಂಧಿಸಿ ಹಾಜರುಪಡಿಸುವಂತೆ ಘನ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿತ್ತು. 17

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ| 17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ Read More »

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ

ಕೊಟ್ಟಿಗೆಹಾರ: ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾಡಾನೆ ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು,ಅಭಿಮನ್ಯು ಆನೆ ಈ ದೇಶದ ಆಸ್ತಿ. ಬುದ್ದಿವಂತ ಹಾಗೂ ವಿಶಿಷ್ಟ ಆನೆಯಾದ ಆನೆಯನ್ನು ಕಾರ್ಯಾಚರಣೆಗೆ ಬಳಸಿಕೊಳ್ಳುವುದು ಸರಿಯಲ್ಲ. ಊರುಬಗೆಯಲ್ಲಿ ಕಾಡಾನೆ ಸೆರೆಗೆ ಅಭಿಮನ್ಯು ವನ್ನು ಕರೆ ತಂದಿದ್ದು ಅಭಿಮನ್ಯು ವಿಗೆ ಜ್ವರ ಹಾಗೂ ನಿರ್ಜಲೀಕರಣ ಪ್ರಾರಂಭವಾಗಿದೆ. ಅರಣ್ಯ ಇಲಾಖೆ ಈ ಬಗ್ಗೆ

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ Read More »

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ: ಪರಿಸರವಾದಿ ವಿಕ್ರಂ ಒತ್ತಾಯ

ಕೊಟ್ಟಿಗೆಹಾರ:ಮೂಡಿಗೆರೆ ತಾಲ್ಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ತ ಸಂಘದ ಅಧ್ಯಕ್ಷ ವಿಕ್ರಂ ಒತ್ತಾಯಿಸಿದ್ದಾರೆ. ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು. ಇದರಿಂದ ಕಾಡಾನೆಗಳ ಇರುವಿಕೆಯ ಬಗ್ಗೆ ನಿಖರ ಮಾಹಿತಿ ತಿಳಿಯುವುದರಿಂದ ಕೃಷಿಕರಿಗೆ ಕಾಡನಂಚಿನ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.ಕಾಡಾನೆಗಳ ಚಲನವಲನಗಳನ್ನು ಗಮನಿಸಲು ತಂಡವನ್ನು ರಚಿಸಬೇಕು. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ: ಪರಿಸರವಾದಿ ವಿಕ್ರಂ ಒತ್ತಾಯ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿದ್ದಾರೆ. ದಾಳಿಯಿಂದ ಮನೆಯನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ Read More »

ದೇವರಾಜ್ ಒಡೆಯರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ

ಸಮಗ್ರ ನ್ಯೂಸ್: ಹುಣಸೂರು ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ದೇವರಾಜ್ ಒಡೆಯರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಡೆಯರ್ ಜನ ಸೇವಾ ಕೇಂದ್ರದ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ ದೇವರಾಜು ಒಡೆಯರ್ ಅವರು ಗ್ರಾಮೀಣ ಭಾಗದ ಹುಟ್ಟು ಗ್ರಾಮೀಣ ಭಾಗದ ಯುವಕರಿಗೆ ನೆರವಾಗುವ ಹಾಕುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹುಣಸೂರು ತಾಲ್ಲೂಕಿನ ಜೆಡಿಎಸ್ ಅಧ್ಯಕ್ಷರಾದ ದೇವರಹಳ್ಳಿ ಸೋಮಶೇಖರ್ ಅವರು ತಿಳಿಸಿದರು. ದೇವರಾಜ್ ಒಡೆಯರ್ ಅವರು ಮಾತನಾಡಿ ಉದ್ಯೋಗ ಮೇಳದಲ್ಲಿ ಸುಮಾರು 25

ದೇವರಾಜ್ ಒಡೆಯರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ Read More »

ತಕ್ಷಣ ಬೇಕಾಗಿದ್ದಾರೆ

ಶುದ್ಧ ಸಸ್ಯಾಹಾರಿ ಹೋಟೆಲ್ ಗೆ ಅಡುಗೆಯವರು ಬೇಕಾಗಿದ್ದಾರೆ.ಅನುಭವಸ್ಥರಿಗೆ ಮೊದಲ ಆದ್ಯತೆ.ಉತ್ತಮ ವೇತನ, ಊಟ, ವಸತಿ ಸೌಲಭ್ಯ ಉಚಿತವಾಗಿ ನೀಡಲಾಗುವುದು.ಸಂಪರ್ಕಿಸಿ: 9591147581

ತಕ್ಷಣ ಬೇಕಾಗಿದ್ದಾರೆ Read More »

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

ಸಮಗ್ರ ನ್ಯೂಸ್: ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆಗಾಗಿ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸ್ಥೆಯು ದೂರು ದಾಖಲಿಸಿದೆ. MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಬಳಸಿದ ಆರೋಪ ಹೊತ್ತಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌ Read More »

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ”

ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲಕ್ಷ-ಲಕ್ಷ ಲೂಟಿ ಮಾಡ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 2018ರಲ್ಲಿ ನಾಮಪತ್ರ ಸಲ್ಲಿಸಲು ಕಾರ್ಯಕರ್ತರಿಂದ ಡಿಕೆ ಶಿವಕುಮಾರ್ 50-100 ಭಿಕ್ಷೆ ಬೇಡಿದರು. ಇದೀಗ ಕೋಟಿ-ಕೋಟಿ ರೂಪಾಯಿ ಆಸ್ತಿ ಇದ್ದರೂ, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ. ಇದರಿಂದ ಆಕಾಂಕ್ಷಿಗಳ ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ ಎಂದು ಕುಟುಕಿದೆ.

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ” Read More »

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬಾ ಗ್ರಾಮದ ಕುದ್ಪಾಜೆ ಎಂಬಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ಸಲ್ಲಿಸಲಾಯಿತು. ಕುದ್ಪಾಜೆಯಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳು ವಾಸವಾಗಿದ್ದು ಪಂಚಾಯತ್ ನಿಂದ ಕುಡಿಯುವ ನೀರಿನ ಯೋಜನೆಗೆ ತಾರಾನಾಥ ಎಂಬವರ ಗೇಟಿನ ಹತ್ತಿರ ಕೊಳವೆಬಾವಿ ತೆಗೆಯಲು ಗುರುತು ಮಾಡಿದ್ದಾರು. ಆದರೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ತಾರಾನಾಥ ಎಂಬವರ ಗೇಟಿನ ಹತ್ತಿರ ಕೊಳವೆಬಾವಿ ತೆಗೆಯಬಾರದು ಎಂದು ಹೇಳುತ್ತಿದ್ದಾರೆ. ತಾರಾನಾಥ

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »