ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ
ಸಮಗ್ರ ನ್ಯೂಸ್: ಯೋಗಿ ಆದಿತ್ಯನಾಥ್ ರವರ ರಾಜ್ಯ ಉತ್ತರ ಪ್ರದೇಶದ ಲಖೀಂಪುರಖೇರಿಯಲ್ಲಿ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಈ ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ. 15 ಮತ್ತು 17 ವರ್ಷದ ಈ ಹೆಣ್ಣುಮಕ್ಕಳನ್ನು ಇಬ್ಬರು ಆರೋಪಿಗಳು ಮದುವೆ ಮಾಡಿಕೊಳ್ಳುವುದಾಗಿ ಹೇಳಿ, ನಾಲ್ವರ ಜತೆಗೆ ಸೇರಿಕೊಂಡು ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.









