ಸಮಗ್ರ ಸಮಾಚಾರ

ಮಂಗಳೂರು: ಪಾಲಿಕೆ ಕಾರ್ಯಾಚರಣೆ 76 ಸಾವಿರ ದಂಡ 30 ಅಂಗಡಿಗಳ ಲೈಸನ್ಸ್ ಕ್ಯಾನ್ಸಲ್

ಮಂಗಳೂರು: ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಗಾಳಿಗೆ ತೂರಿದ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ 76 ಸಾವಿರ ರೂ ದಂಡ ವಿಧಿಸಿ, 30 ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೋವಿಡ್ ಲಾಕ್ಡೌನ್ ನಿಯಮ ಮುರಿದು ಸಾರ್ವಜನಿಕರು ವ್ಯಾಪಾರ ವಹಿವಾಟಿನಲ್ಲಿ ತೊಡಗಿರುವುದನ್ನು ಗಮನಿಸಿದ ಪಾಲಿಕೆ ಅಧಿಕಾರಿಗಳು ತಂಡತಂಡವಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕವೂ ಅಂಗಡಿಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮಾಲಿಕರಿಂದ ಹಾಗೂ ಅನಗತ್ಯವಾಗಿ ಸಂಚಾರ ನಡೆಸುತ್ತಿದ್ದ ವಾಹನ ಸವಾರರಿಂದ 76 […]

ಮಂಗಳೂರು: ಪಾಲಿಕೆ ಕಾರ್ಯಾಚರಣೆ 76 ಸಾವಿರ ದಂಡ 30 ಅಂಗಡಿಗಳ ಲೈಸನ್ಸ್ ಕ್ಯಾನ್ಸಲ್ Read More »

ಹೈಕೋರ್ಟ್ ಮೆಟ್ಟಿಲೇರಿದ ಕಳೆದ ಬಾರಿ ನಪಾಸಾದ ಪಿಯುಸಿ ವಿದ್ಯಾರ್ಥಿಗಳು

ಬೆಂಗಳೂರು: ನಮಗೆ ಮಾತ್ರ ಪರೀಕ್ಷೆ ಏಕೆ..? ಮಾಡುವುದಾದರೆ ಎಲ್ಲರಿಗೂ ಮಾಡಿ ಅಥವಾ ನಮ್ಮ ಎಕ್ಸಾಮ್ ರದ್ದು ಮಾಡಿ, ಎನ್ನುತ್ತಾ ಕಳೆದ ಬಾರಿ ಪಿಯುಸಿ ಫೇಲ್ ಆಗಿದ್ದ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೋವಿಡ್ ಎರಡನೆಯ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಮಾಡಿ ಕಳೆದವಾರ ಆದೇಶ ಹೊರಡಿಸಿತ್ತು. ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಹಾಗೂ ಎಸೆಸೆಲ್ಸಿ ಅಂಕಗಳ ಆಧಾರಿತವಾಗಿ ತೇರ್ಗಡೆ ಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಕಳೆದ

ಹೈಕೋರ್ಟ್ ಮೆಟ್ಟಿಲೇರಿದ ಕಳೆದ ಬಾರಿ ನಪಾಸಾದ ಪಿಯುಸಿ ವಿದ್ಯಾರ್ಥಿಗಳು Read More »

ರೆಡಿಯಾಗ್ತಿದೆ ‘ರೋಹಿಣಿ‌ ಸಿಂಧೂರಿ‌’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ”

ಮಂಡ್ಯ: ಕಳೆದ ಕೆಲ ದಿನಗಳಿಂದ ಭಾರಿ ಸುದ್ದಿಯಲ್ಲಿರುವ ಮೈಸೂರು ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಾಲಿ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಅವರ ಬಯೋಪಿಕ್‌ ಸಿನಿಮಾ ಆಗಲಿದೆ.ಈ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಆಗಿದ್ದು, ರೋಹಿಣಿ ಸಿಂಧೂರಿ ಇಲ್ಲಿ ‘ಭಾರತ ಸಿಂಧೂರಿ’ಯಾಗಿದ್ದಾರೆ. ಈ ಟೈಟಲ್‌ ರೆಜಿಸ್ಟರ್‌ ಆಗಿದ್ದು ಕಳೆದ ವರ್ಷ ಅಂದರೆ 2020ರ ಜೂನ್ 15ರಂದೇ. ಮಂಡ್ಯದ ಪತ್ರಕರ್ತರಾಗಿರುವ ಕೃಷ್ಣ ಸ್ವರ್ಣಸಂದ್ರ ಎಂಬುವವರಿಂದ ಟೈಟಲ್ ನೋಂದಣಿಯಾಗಿದ್ದು, ಲಾಕ್‌ಡೌನ್‌ ನಂತರ ಸಿನಿಮಾ ನಂತರ

ರೆಡಿಯಾಗ್ತಿದೆ ‘ರೋಹಿಣಿ‌ ಸಿಂಧೂರಿ‌’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ” Read More »

ನಾಯಕತ್ವ ಬದಲಾವಣೆ: ರಾಜ್ಯ ನಾಯಕರಿಗೆ ಜೂ.14 ರ ಗಡುವು ನೀಡಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ತಿಳಿಸಿದ್ದಾರೆ.ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿದ್ದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವುದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ನಾಯಕರ ಸಂಘರ್ಷಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಹೈಕಮಾಂಡ್, ನಾಯಕತ್ವ ಬದಲಾವಣೆ ಬಗ್ಗೆ

ನಾಯಕತ್ವ ಬದಲಾವಣೆ: ರಾಜ್ಯ ನಾಯಕರಿಗೆ ಜೂ.14 ರ ಗಡುವು ನೀಡಿದ ಬಿಜೆಪಿ ಹೈಕಮಾಂಡ್ Read More »

ಜೂ.10ರಂದು ವರ್ಷದ ಮೊದಲ ಸೂರ್ಯಗ್ರಹಣ, ಭಾರತದಲ್ಲಿ ಕಾಣಿಸುತ್ತಾ? ಹೇಗಿರುತ್ತೆ ಗ್ರಹಣ?

ಈ ವರ್ಷದ ಮೊದಲ ಸೂರ್ಯಗ್ರಹಣಕ್ಕೆ ದಿನಗಣನೆ ಆರಂಭವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಚಂದ್ರಗ್ರಹಣಕ್ಕೆ ಭೂಮಿಯ ಕೆಲ ಪ್ರದೇಶಗಳು ಸಾಕ್ಷಿಯಾಗಿದ್ದು, ಇದೀಗ ಜೂನ್ 10ರಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಈ ಬಾರಿ ಉಂಗುರ ತೊಡಿಸಿದ ರೀತಿಯಲ್ಲಿ ಸೂರ್ಯ ಗ್ರಹಣ ಕಾಣಿಸಲಿದ್ದು, ಅದನ್ನು ರಿಂಗ್ ಆಫ್ ಫೈರ್(ಬೆಂಕಿಯ ಉಂಗುರ) ಎಂದು ಕರೆಯಲಾಗಿದೆ. ರಿಂಗ್ ಆಫ್ ಫೈರ್ ಎಂದರೇನು?:ಚಂದ್ರನು ತನ್ನ ಕಕ್ಷೆಯಲ್ಲಿ ಭೂಮಿಯಿಂದ ಬಹು ದೂರದಲ್ಲಿದ್ದಾಗ ಸೂರ್ಯನಿಗೆ ಅಡ್ಡ ಬರುವ ಪರಿಣಾಮ ಅದು ಉಂಗುರ ತೊಡಿಸಿದ ರೀತಿಯಲ್ಲಿ ಕಾಣಿಸಲಿದೆ ಎಂದು

ಜೂ.10ರಂದು ವರ್ಷದ ಮೊದಲ ಸೂರ್ಯಗ್ರಹಣ, ಭಾರತದಲ್ಲಿ ಕಾಣಿಸುತ್ತಾ? ಹೇಗಿರುತ್ತೆ ಗ್ರಹಣ? Read More »

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಡಿ ಪ್ರಕರಣದ ರೂವಾರಿಗಳು ಎಂದು ಹೇಳಲಾದ ನರೇಶ್​ ಗೌಡ ಹಾಗೂ ಶ್ರವಣ್​ಗೆ ಬೆಂಗಳೂರಿನ 91ನೇ ಸಿಸಿಹೆಚ್​ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಮಾರ್ಚ್ 2ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ತನಿಖಾ ತಂಡ ಇಬ್ಬರನ್ನೂ ಪತ್ತೆಹಚ್ಚಲು ಶ್ರಮಿಸುತ್ತಿತ್ತು. ತಮ್ಮ ಮೇಲೆ ಕೇಳಿಬಂದ ಸಿಡಿ ಪ್ರಕರಣದ ನಂತರ ಈ ಇಬ್ಬರ ಮೇಲೆ ಮಾಜಿ

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್ Read More »

ಸಿ ಇ ಟಿ ಮುಹೂರ್ತ ಫಿಕ್ಸ್ | ಆ. 28 29 ರಂದು ಪರೀಕ್ಷೆ : ಡಿಸಿಎಂ ಡಾ. ಎಎನ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಸಿಇಟಿ ನಡೆಸಲು ರಾಜ್ಯ ಶಿಕ್ಷಣ ಸಚಿವಾಲಯ ನಿರ್ಧರಿಸಿದೆ. ಇಂದು ನಡೆದ ಸಭೆಯಲ್ಲಿ ಆಗಸ್ಟ್ ತಿಂಗಳ 28 ಮತ್ತು 29ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ ನಾರಾಯಣ್ ತಿಳಿಸಿದ್ದಾರೆ. ಇಂದು ಉನ್ನತ ಮಟ್ಟದ ಶಿಕ್ಷಣ ತಜ್ಞರುಗಳು, ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಉಪಸ್ಥಿತಿಯಲ್ಲಿ ನಡೆದ ಸಭೆಯ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

ಸಿ ಇ ಟಿ ಮುಹೂರ್ತ ಫಿಕ್ಸ್ | ಆ. 28 29 ರಂದು ಪರೀಕ್ಷೆ : ಡಿಸಿಎಂ ಡಾ. ಎಎನ್ Read More »

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ | ಮೂವರು ದೋಷಿಗಳೆಂದು ಅಂತಿಮ ತೀರ್ಪು ನೀಡಿದ ನ್ಯಾಯಾಲಯ

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಕೊನೆಯ ಹಂತ ತಲುಪಿದ್ದು, ನ್ಯಾಯಾಲಯ ಮೂವರು ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಒಬ್ಬರನ್ನು ಖುಲಾಸೆಗೊಳಿಸಿ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಜಿಲ್ಲೆಯ ಇಂದ್ರಾಳಿಯ ಉದ್ಯಮಿ ಭಾಸ್ಕರ್ ಶೆಟ್ಟಿ (52 ವ.) ಅವರನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ ರಾಜೇಶ್ವರಿ ಶೆಟ್ಟಿ ಪುತ್ರ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಅವರನ್ನು ಉಡುಪಿಯ ಜಿಲ್ಲಾ ಸೆಷನ್ಸ್ ಮತ್ತು ಸತ್ರ ನ್ಯಾಯಾಲಯ ದೋಷಿಗಳೆಂದು

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ | ಮೂವರು ದೋಷಿಗಳೆಂದು ಅಂತಿಮ ತೀರ್ಪು ನೀಡಿದ ನ್ಯಾಯಾಲಯ Read More »

ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಯ ಬಹುದೊಡ್ಡ ಸಾಧನೆ: ದ ಕ ಯುವ ಕಾಂಗ್ರೆಸ್

ಮಂಗಳೂರು: ಅಗತ್ಯವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಸರಕಾರದ ಬಹುದೊಡ್ಡ ಸಾಧನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಹೇಳಿದೆ. ನಿನ್ನೆ ಮಂಗಳೂರಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೋಟ್ ಬ್ಯಾನ್, ಜಿಎಸ್‌ಟಿಯಂತಹ ಕಾನೂನು ಜಾರಿಗೆ ತಂದು ಜನರನ್ನು ಸಂಕಷ್ಟಕ್ಕೆ ದೂಡಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಯ ಬಹುದೊಡ್ಡ ಸಾಧನೆ: ದ ಕ ಯುವ ಕಾಂಗ್ರೆಸ್ Read More »

ಮಹಾತ್ಮ ಗಾಂಧಿ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ ಏಳು ವರ್ಷ ಜೈಲು ಶಿಕ್ಷೆ

ದಕ್ಷಿಣ ಆಫ್ರಿಕಾ: ವಂಚನೆ ಆರೋಪ ಎದುರಿಸುತ್ತಿದ್ದ ಮಹಾತ್ಮ ಗಾಂಧೀಜಿ ಮರಿಮೊಮ್ಮಗಳು ಒಬ್ಬರಿಗೆ ದಕ್ಷಿಣ ಆಫ್ರಿಕಾ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಗಾಂಧೀಜಿ ಮೊಮ್ಮೊಗಳಾದ ಇಳಾ ಗಾಂಧಿ ಹಾಗೂ ಮೆವಾ ರಾಮ್​ಗೋವಿಂದ್ ಅವರ ಮಗಳಾದ ಆಶೀಶ್ ಲತಾ ವಿರುದ್ಧ ಉದ್ಯಮಿಯೊಬ್ಬರಿಗೆ ಹಣ ವಂಚನೆ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ 2015ರಲ್ಲಿ ದಾಖಲಾಗಿತ್ತು. ಉದ್ಯಮಿ ಎಸ್​ ಆರ್ ಮಹಾರಾಜ್​ ಎನ್ನುವವರಿಂದ 6.2 ಮಿಲಿಯನ್ ರಾಂಡ್ ಪಡೆದಿದ್ದ ಆಶೀಶ್ ಲತಾ ನಂತರ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಮಹಾತ್ಮ ಗಾಂಧಿ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ ಏಳು ವರ್ಷ ಜೈಲು ಶಿಕ್ಷೆ Read More »