ದ.ಕ ಸಂಸದ ಬ್ರಿಜೇಶ್ ಚೌಟ ವಿರುದ್ದ ಭುಗಿಲೆದ್ದ ಸ್ವಪಕ್ಷೀಯರ ಅಸಮಾಧಾನ| ರಸ್ತೆ ಸಮಸ್ಯೆಗೆ ಪರಿಹಾರ ಕೇಳ ಹೋದವರಿಗೆ ಸಂಸದರಿಂದ ಅವಮಾನ!?
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ವಿರುದ್ಧ ಬಿಜೆಪಿ ಮಂಡಲ ಉಪಾಧ್ಯಕ್ಷನಿಂದಲೇ ಅಸಮಾಧಾನ ವ್ಯಕ್ತವಾಗಿದ್ದು, ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದವರಿಗೆ ಅವಮಾನ ಆರೋಪ ಕೇಳಿಬಂದಿದೆ. ಸಂಸದರು ಬೇಜವಾಬ್ದಾರಿ ವರ್ತನೆ ತೋರಿದ್ದಾರೆ ಎಂದೂ ದೂರಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಹಾಕಿ ಮೂಲ್ಕಿ-ಮೂಡಬಿದ್ರೆ ಬಿಜೆಪಿ ಉಪಾಧ್ಯಕ್ಷ ಸೂರಜ್ ಜೈನ್ ಕಿಡಿ ಕಾರಿದ್ದಾರೆ. ಮೂಡಬಿದಿರೆಯ ಬನ್ನಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು […]









