ಮೂಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ₹35 ಲಕ್ಷ ಮೌಲ್ಯದ ಗಾಂಜಾ ಸಹಿತ ಸಿಕ್ಕಿಬಿದ್ದ ಬಿಸಿಎ ವಿದ್ಯಾರ್ಥಿನಿ
ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ದಿನದಿಂದ ದಿನಕ್ಕೆ ಆಳವಾಗಿ ಇಳಿಯುತ್ತಿರುವುದು ಆತಂಕ ಮೂಡಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ, ನಗರದ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾದ 21 ವರ್ಷದ ಸುಹಾನ ಬಂಧಿತ ಆರೋಪಿತೆ. ಈಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು […]










