ಸಮಗ್ರ ಸಮಾಚಾರ

ಶಬರಿಮಲೆಗೆ ಆಟೋ, ಸರಕು ವಾಹನಗಳಲ್ಲಿ ಪ್ರಯಾಣಿಸ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ…

ಸಮಗ್ರ ನ್ಯೂಸ್: ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಟೋ ರಿಕ್ಷಾ, ಸರಕು ಸಾಗಾಟ ವಾಹನಗಳಲ್ಲಿ ಪ್ರವಾಸ ನಡೆಸಲು ರಾಜ್ಯ ಮೋಟಾರು ವಾಹನ ಇಲಾಖೆ ನಿಷೇಧ ವಿಧಿಸಿದೆ. ಅಟೋ ಹಾಗೂ ಸರಕು ಸಾಗಾಟ ವಾಹನಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿರುವ ವಿದ್ಯಮಾನಗಳು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ. ನಿಯಮಗಳ ಅನುಸಾರ ಆಟೋ ರಿಕ್ಷಾಗಳಿಗೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಯ 30 ಕಿ.ಮೀ ವ್ಯಾಪ್ತಿ ವರೆಗೆ ಮಾತ್ರ ಸಂಚರಿಸಲು ಅವಕಾಶವಿದೆ. ಇನ್ನು ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರನ್ನು […]

ಶಬರಿಮಲೆಗೆ ಆಟೋ, ಸರಕು ವಾಹನಗಳಲ್ಲಿ ಪ್ರಯಾಣಿಸ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ… Read More »

ದತ್ತಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ 5 ದಿನ ಪ್ರವಾಸಿಗರ ಭೇಟಿ ನಿರ್ಬಂಧಿಸಿದ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠ ಗ್ರಾಮದ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿ ತಾಣಗಳಾದ

ದತ್ತಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ 5 ದಿನ ಪ್ರವಾಸಿಗರ ಭೇಟಿ ನಿರ್ಬಂಧಿಸಿದ ಜಿಲ್ಲಾಧಿಕಾರಿ Read More »

ಅಯ್ಯಪ್ಪ ವೃತಧಾರಿಗಳ ಜೊತೆ ಶಬರಿಮಲೆಯತ್ತ ಹೊರಟ ಶ್ವಾನ| ನಿರಂತರ ಪಾದಯಾತ್ರೆಯಲ್ಲಿ ಭಕ್ತರ ಜೊತೆ ಸಾಥ್!

ಸಮಗ್ರ ನ್ಯೂಸ್: ಶಬರಿಮಲೆ ಪಾದಾಯಾತ್ರೆಗೆ ಹೊರಟಿದ್ದ ಅಯ್ಯಪ್ಪ ಸ್ವಾಮಿ ವೃತಾಧಾರಿಗಳೊಂದಿಗೆ ಶ್ವಾನವೊಂದು ಹೆಜ್ಜೆ ಹಾಕಿ ನೂರಾರು ಕಿ.ಮೀ ಕ್ರಮಿಸಿರುವ ಅಚ್ಚರಿಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಧಾರವಾಡದಿಂದ ಕೇರಳದ ಶಬರಿಮಲೆಗೆ ಹೊರಟ ಅಯ್ಯಪ್ಪ ಸ್ವಾಮಿ ಭಕ್ತರಾದ ನಾಗನಗೌಡ ಪಾಟೀಲ್, ಮಂಜು ಹಾಗೂ ರವಿ ಎನ್ನುವವರಿಗೆ ಮಾರ್ಗ ಮಧ್ಯೆ ಶ್ವಾನವೊಂದು ಜೊತೆಯಾಗಿದ್ದು, ವೃತಾಧಾರಿಗಳೊಂದಿಗೆ ತಾನು ಕೂಡ ನೂರಾರು ಕಿಲೋ ಮೀಟರ್‌ ಕ್ರಮಿಸಿದೆ. ಮೂವರು ಭಕ್ತರು ಬರಿಗಾಲಿನಲ್ಲಿ ಧಾರವಾಡದಿಂದ ಯಾತ್ರೆ ಪ್ರಾರಂಭಿಸಿದಾಗ ಧಾರವಾಡದ ನರೇಂದ್ರ ಟೋಲ್ ಬಳಿ

ಅಯ್ಯಪ್ಪ ವೃತಧಾರಿಗಳ ಜೊತೆ ಶಬರಿಮಲೆಯತ್ತ ಹೊರಟ ಶ್ವಾನ| ನಿರಂತರ ಪಾದಯಾತ್ರೆಯಲ್ಲಿ ಭಕ್ತರ ಜೊತೆ ಸಾಥ್! Read More »

ಮಂಗಳೂರು: ‘ಬೀಪ್ ಬಿರಿಯಾನಿ ದೊರೆಯುತ್ತದೆ’ ವಿಡಿಯೋ ವೈರಲ್| ಹೊಟೇಲ್ ಮಾಲಕ ಪೊಲೀಸ್ ವಶ

ಮಂಗಳೂರು: ಮುಡಿಪು ಇಲ್ಲಿನ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ದನದ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ವ್ಯಾಪಾರ ಮಾಡುತಿದ್ದ ಹೋಟೆಲಿಗೆ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ದಾಳಿ ನಡೆಸಿದ್ದಾರೆ. ಪೊಲೀಸರ ಜೊತೆಗೆ ಹಿಂ.ಜಾ.ವೇ ಕಾರ್ಯಕರ್ತರು ದಾಳಿ ಮಾಡಿ ದನದ ಮಾಂಸದ ಬಿರಿಯಾನಿ ಮತ್ತು ತಯಾರಿ ಮಾಡಿಟ್ಟಿದ್ದ ಮಾಂಸವನ್ನು ಪರಿಶೀಲಿಸಿದ್ದಾರೆ‌. ಈ ವೇಳೆ ಗೋಮಾಂಸವೆಂದು ದೃಢಪಟ್ಟಿದ್ದು, ಹೋಟೆಲ್ ಮಾಲಕ ಹುಸೇನ್ ಎಂಬವರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು: ‘ಬೀಪ್ ಬಿರಿಯಾನಿ ದೊರೆಯುತ್ತದೆ’ ವಿಡಿಯೋ ವೈರಲ್| ಹೊಟೇಲ್ ಮಾಲಕ ಪೊಲೀಸ್ ವಶ Read More »

“ಬಿಜೆಪಿ ಶಾಸಕ ಗರುಡಾಚಾರ್ ಸೌಹಾರ್ದತೆಯ ಪಾಠ ಕಲಿಸಿದ್ದಾರೆ” -ಮೊಯಿದೀನ್ ಬಾವಾ

ಸುರತ್ಕಲ್: “ಚಿಕ್ಕಪೇಟೆ ಶಾಸಕರಾದ ಉದಯ್ ಗರುಡಾಚಾರ್ ರವರು ದೇವಸ್ಥಾನ ಮುಂಭಾಗ ವ್ಯಾಪಾರ ಮಾಡುವುದನ್ನು ವಿರೋಧಿಸುವ ಶಕ್ತಿಗಳಿಗೆ ಕಾನೂನು ರೀತಿಯಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ, ಈ ಮೂಲಕ ಸರ್ವ ಧರ್ಮೀಯರ ಸೌಹಾರ್ದತೆಯ ಸಂದೇಶವನ್ನು ಸಾರುವ ಮೂಲಕ ಕೋಮು ಸೌಹಾರ್ದತೆಯನ್ನು ಕೆಡವುವ ಶಕ್ತಿಗಳಿಗೆ ಸರಿಯಾಗಿ ಎಚ್ಚರಿಕೆಯನ್ನು ನೀಡಿದ್ದಾರೆ” ಎಂದು ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದೀನ್ ಬಾವಾ ಹೇಳಿದ್ದಾರೆ. “ಯಾವುದೇ ಶಕ್ತಿಗಳಿಗೆ ಹೆದರದೆ, ಹಿಂಜರಿಕೆ ತೋರದೆ ಪ್ರಜಾಪ್ರಭುತ್ವ ಸಂದೇಶವನ್ನು ಎತ್ತಿ ಹಿಡಿದಿದ್ದಾರೆ, ಬಿಜೆಪಿ

“ಬಿಜೆಪಿ ಶಾಸಕ ಗರುಡಾಚಾರ್ ಸೌಹಾರ್ದತೆಯ ಪಾಠ ಕಲಿಸಿದ್ದಾರೆ” -ಮೊಯಿದೀನ್ ಬಾವಾ Read More »

ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಇನ್ನಿಲ್ಲ

ಸಮಗ್ರ ನ್ಯೂಸ್: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದ ಅವರು ಇಂದು ಉಸಿರುಚೆಲ್ಲಿದರು. ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಗಳಲ್ಲಿ ನಿಧನದ ಸುದ್ದಿಯನ್ನು ದೃಢಪಡಿಸಿದೆ. ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ.

ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಇನ್ನಿಲ್ಲ Read More »

ಎರಡು ವರ್ಷಗಳ ಬಳಿಕ ಮಂಗಳೂರಿಗೆ ಬಂದ ಐಷಾರಾಮಿ ಹಡಗು….!!

ಸಮಗ್ರ ನ್ಯೂಸ್: ಮಂಗಳೂರು ನವಮಂಗಳೂರು ಬಂದರಿಗೆ ಈ ಋತುವಿನ ಮೊದಲ ಐಷರಾಮಿ ಹಡಗು ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್‌ ಯುರೋಪ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ. ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಎನ್ಎಂಪಿಎ ದಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್‌ ಅಲೋಶಿಯಸ್‌ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್‌ ಮುಂತಾದ ಸ್ಥಳಗಳಿಗೆ ಭೇಟಿ

ಎರಡು ವರ್ಷಗಳ ಬಳಿಕ ಮಂಗಳೂರಿಗೆ ಬಂದ ಐಷಾರಾಮಿ ಹಡಗು….!! Read More »

ಕೊಡಗು: ಹಸುವಿನ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿಗೆ

ಸಮಗ್ರ ನ್ಯೂಸ್: ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆ ಎಂಬಲ್ಲಿ ನಡೆದಿದೆ. ನವೆಂಬರ್ 27ರಂದು ಈ ಒಂದು ಹೇಯ್ಯ ಕೃತ್ಯ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ ದೇವಯ್ಯ ಅವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದು ತಾವು ಸಂತೆಗೆ ಹೋಗಿ ವಾಪಸ್

ಕೊಡಗು: ಹಸುವಿನ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿಗೆ Read More »

ಬಂಟ್ವಾಳ: ಸ್ಕೂಟರ್‌ ಚಲಾಯಿಸಿದ ಅಪ್ರಾಪ್ತ ಬಾಲಕಿ| 26 ಸಾವಿರ ರೂ. ದಂಡ ಕಟ್ಟಿದ ತಾಯಿ

ಸಮಗ್ರ ನ್ಯೂಸ್: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್‌ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ ಆಗಸ್ಟ್‌ನಲ್ಲಿ ಸಿದ್ದಕಟ್ಟೆಯಲ್ಲಿ ಸ್ಕೂಟರ್‌ ಮತ್ತು ಕಾರಿನ ಮಧ್ಯೆ ಅಪಘಾತ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ ಎಎಸ್‌ಐ ವಿಜಯ್‌ ಅವರು ನೋಟಿಸ್‌ ಜಾರಿ ಮಾಡಿದ್ದರು. ಇದೀಗ ವಿಚಾರಣೆ ನಡೆಸಿದ

ಬಂಟ್ವಾಳ: ಸ್ಕೂಟರ್‌ ಚಲಾಯಿಸಿದ ಅಪ್ರಾಪ್ತ ಬಾಲಕಿ| 26 ಸಾವಿರ ರೂ. ದಂಡ ಕಟ್ಟಿದ ತಾಯಿ Read More »

ಕಡಬ: ಹಿಂದೂ ಯುವತಿಯನ್ನು ರೂಂಗೆ ಕರೆದ ಮುಸ್ಲಿಂ ಯುವಕ | ಹಿಂಜಾವೇ ಕಾರ್ಯಕರ್ತರಿಗೆ ಹೆದರಿ ಪರಾರಿ

ಸಮಗ್ರ ನ್ಯೂಸ್: ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನ ಜತೆ ರೂಂನಲ್ಲಿದ್ದಾಗ ಹಿಂಜಾವೇ ಕಾರ್ಯರ್ತರು ಬರುತ್ತಿದ್ದಂತೆ ಪರಾರಿಯಾದ ಘಟನೆ ಅಲಂಕಾರು ಸಮೀಪದ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ನ.27 ರ ಭಾನುವಾರ ಸಂಜೆ ನಡೆದಿದೆ. ಯುವತಿ ಮಂಜೇಶ್ವರ ಮೂಲದವಳಾಗಿದ್ದು, ಮುಡಿಪು ಮೂಲದ ಮುಸ್ಲಿಂ ಯುವಕನ ಸಂಪರ್ಕದಲ್ಲಿದ್ದು, ಪ್ರಸ್ತುತ ಆತ ಕೆಲಸದ ನಿಮಿತ್ತ ಕೊಂತೂರು ಪೆರಾಬೆ ಕ್ರಾಮದ ಕೋಚಕಟ್ಟೆಯಲ್ಲಿ ಬಾಡಿಗೆ ಕೊಠಡಿಯಲ್ಲಿದ್ದು, ಅಲ್ಲಿಗೆ ಯುವತಿಯನ್ನು ಬರುವಂತೆ ಹೇಳಿದ್ದ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಯುವಕನ

ಕಡಬ: ಹಿಂದೂ ಯುವತಿಯನ್ನು ರೂಂಗೆ ಕರೆದ ಮುಸ್ಲಿಂ ಯುವಕ | ಹಿಂಜಾವೇ ಕಾರ್ಯಕರ್ತರಿಗೆ ಹೆದರಿ ಪರಾರಿ Read More »