ಸಮಗ್ರ ಸಮಾಚಾರ

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಕುಡಿತದ ಚಟಕ್ಕೆ ದಾಸನಾಗಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ತಮ್ಮ ಬುದ್ದಿವಾದ ಹೇಳಿದ ಪರಿಣಾಮ ಅಣ್ಣ ನೇಣಿಗೆ ಶರಣಾದ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ. ದರ್ಶನ್(21) ಮೃತ ದುರ್ದೈವಿ.ಎರಡು ದಿನಗಳ ಹಿಂದೆ ಭರ್ಜರಿಯಾಗಿ ಬರ್ತ್ ಡೇ ಪಾರ್ಟಿ ಮಾಡಿಕೊಂಡ ದರ್ಶನ್ ಕುಡಿದ ಮತ್ತಿನಲ್ಲೇ ನೇಣಿಗೆ ಶರಣಾಗಿದ್ದಾನೆ. ಫ್ಲೆಕ್ಸ್ ಹಾಗೂ ಬ್ಯಾನರ್ ಕೆಲಸ ಮಾಡುತ್ತಿದ್ದ ದರ್ಶನ್ ಕುಡಿತದ ಚಟಕ್ಕೆ ದಾಸನಾಗಿದ್ದ. ಕುಡಿದು ಬಂದು ನೆರೆಹೊರೆಯವರಿಗೆ ತೊಂದರೆಯಾಗುವಂತೆ ನಡೆದುಕೊಳ್ಳುತ್ತಿದ್ದ. ಕುಡಿತದ ಚಟ ಬಿಡುವಂತೆ ತಮ್ಮ ಬುದ್ದಿವಾದ ಹೇಳಿದ್ದಾನೆ. […]

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ Read More »

ಹವಾಮಾನ ವರದಿ: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದ.ಕ ಜಿಲ್ಲೆಯ ಪಣಂಬೂರು ಕಡಲ ಕಿನಾರೆ ಸೇರಿದಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ತುಂತುರ ಮಳೆಯಾಗಲಿದ್ದು, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ

ಹವಾಮಾನ ವರದಿ: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ| ಕೆ.ಸಿ‌ ವೇಣುಗೋಪಾಲ್ ಜಖಂ

ಸಮಗ್ರ ನ್ಯೂಸ್: ಭಾರತ್ ಜೋಡೋ ಪಾದಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಕೆ.ಸಿ. ವೇಣುಗೋಪಾಲ್ ಅವರ ಮೊಣಕಾಲು, ಕೈಗಳಿಗೆ ಗಾಯಗಳಾಗಿದ್ದು, ಭಾರತ್ ಜೋಡೋ ಯಾತ್ರೆ ಶಿಬಿರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಜನರು ಮುನ್ನುಗ್ಗಿದ್ದಾರೆ. ಈ ವೇಳೆ ನೂಕಾಟ-ತಳ್ಳಾಟ ನಡೆದಿದ್ದು, ಕಾಲ್ತುಳಿತ ಸಂಭವಿಸಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ| ಕೆ.ಸಿ‌ ವೇಣುಗೋಪಾಲ್ ಜಖಂ Read More »

ದಾವಣಗೆರೆ: ಚಂದ್ರು ಸಾವು ಮಾದರಿಯಲ್ಲೇ ಮತ್ತೊಂದು ದುರಂತ| ಬೆಳಗಾವಿ ಎಎಸ್ಐ ಪುತ್ರ ಹೊನ್ನಾಳಿಯಲ್ಲಿ ಸಾವು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ 1 ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕೆಲ

ದಾವಣಗೆರೆ: ಚಂದ್ರು ಸಾವು ಮಾದರಿಯಲ್ಲೇ ಮತ್ತೊಂದು ದುರಂತ| ಬೆಳಗಾವಿ ಎಎಸ್ಐ ಪುತ್ರ ಹೊನ್ನಾಳಿಯಲ್ಲಿ ಸಾವು Read More »

ಬಣಕಲ್ ನಿಂದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ

ಸಮಗ್ರ ನ್ಯೂಸ್: ಬಣಕಲ್ ನಿಂದ ಶಬರಿಮಲೆಗೆ ಸುಭಾಷ್ ನಗರದ ಗೋಪಾಲಕೃಷ್ಣ ನಾಯರ್ ಎಂಬವವರು ಶನಿವಾರದಂದು ತಮ್ಮ ಸ್ವಗೃಹದಿಂದ ಪೂಜೆ ಮುಗಿಸಿ ಇರ್ಮುಡಿ ಕಟ್ಟಿ ಶಬರಿಮಲೆಗೆ ಪಾದಯಾತ್ರೆ ಮೂಲಕ ನಡಿಗೆ ಪಯಣಕ್ಕೆ ಚಾಲನೆ ನೀಡಿದರು. ಸುಮಾರು 800ಕಿ.ಮೀ ವ್ಯಾಪ್ತಿಯ ಶಬರಿಮಲೆ ಕ್ಷೇತ್ರಕ್ಕೆ 32 ವರ್ಷಗಳ ಕಾಲ ವಾಹನದಲ್ಲಿ ಹೋಗಿ ಬರುತ್ತಿದ್ದರು. ಈ ವರ್ಷ ಇವರು 33 ನೇ ವರ್ಷಕ್ಕೆ ನಡೆದು ಬರುವುದಾಗಿ ಹರಕೆ ಹೊತ್ತು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯ ಭಕ್ತನಾಗಿ ಗುರು ಸ್ವಾಮಿಗಾಗಿ ಗೋಪಾಲಕೃಷ್ಣ ಅವರು ಒಬ್ಬಂಟಿಗನಾಗಿ ಪಾದಯಾತ್ರೆ

ಬಣಕಲ್ ನಿಂದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ Read More »

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ

ಸಮಗ್ರ ನ್ಯೂಸ್: ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ ಮೊಬೈಲ್‌ ಶಾಪ್‌ನಲ್ಲೇ ಮೊಬೈಲ್‌ ರಿಚಾರ್ಜ್‌ ಮಾಡುತ್ತಿದ್ದೆ.ಆಗ ಖಲೀಲ್‌ನ ಪರಿಚಯವಾಗಿತ್ತು. 2021ರ ಜ.14ರಂದು ಖಲೀಲ್‌ ಒಳ್ಳೆಯ ಕೆಲಸ ಮತ್ತು ಹಣ ಕೊಡುವುದಾಗಿ ಆಮಿಷವೊಡ್ಡಿ ಪುಸಲಾಯಿಸಿ ಆತನ ಕುಟುಂಬದ ಮನೆಯಾದ ಕಲ್ಲಾಪುಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಮಹಿಳೆಯರಿಗೆ ಪರಿಚಯಿಸಿದ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು, ಕುರಾನ್‌ ಓದಲು ಒತ್ತಾಯ ಮಾಡಿ ನಮಾಝ್ ಮಾಡಿಸಿದ್ದ.

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ Read More »

ಮೈಸೂರು:ಬಸ್ ನಿಲ್ದಾಣ ವಿವಾದಕ್ಕೆ ಕೊನೆಗೂ ಮುಕ್ತಿ| ಶಾಸಕ- ಸಂಸದರ ನಡುವಿನ ಶೀತಲ ಸಮರಕ್ಕೆ ಇತಿಶ್ರೀ…

ಸಮಗ್ರ ನ್ಯೂಸ್: ಮೈಸೂರು ನಗರದ ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದಕ್ಕೆ ಶಾಸಕ ಎಸ್.ಎ.ರಾಮ್‌ದಾಸ ಅಂತ್ಯ ಹಾಡಿದ್ದಾರೆ. ಬಸ್ ಶೆಲ್ಟರ್ ಮೇಲಿದ್ದ ಮೂರು ಗೋಪುರಗಳ ಪೈಕಿ ಒಂದು ಗೋಪುರ ಉಳಿಸಿಕೊಂಡು, ಮತ್ತೆರಡು ಗೋಪುರಗಳನ್ನ ತೆರವುಗೊಳಿಸಲಾಗಿದೆ. ರಾತ್ರೋರಾತ್ರಿ ಬಸ್ ಶೆಲ್ಟರ್ ಮೇಲಿದ್ದ ಎರಡು ಗೋಪುರಗಳನ್ನ ಅಧಿಕಾರಿಗಳು ತೆರವು ಮಾಡಿದ್ದಾರೆ. ಮೈಸೂರು ಅರಮನೆ ಪರಂಪರೆಗಾಗಿ ಬಸ್ ಶೆಲ್ಟರ್ ಮಾಡಲಾಗುತ್ತಿತ್ತು. ಶಾಸಕರ ಅನುಧಾನದಲ್ಲಿ 12 ಬಸ್ ಶೆಲ್ಟರ್ ನಿರ್ಮಿಸಲಾಗುತ್ತಿತ್ತು. ವಿನಾಕಾರಣ ಧರ್ಮದ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿತ್ತು. ಇದು ಮುಂದೆ ವಿವಾದಿತ

ಮೈಸೂರು:ಬಸ್ ನಿಲ್ದಾಣ ವಿವಾದಕ್ಕೆ ಕೊನೆಗೂ ಮುಕ್ತಿ| ಶಾಸಕ- ಸಂಸದರ ನಡುವಿನ ಶೀತಲ ಸಮರಕ್ಕೆ ಇತಿಶ್ರೀ… Read More »

ಫಾಲ್ಸ್ ನಲ್ಲಿ ಜಾರಿಬಿದ್ದು ನಾಲ್ಕು ಯುವತಿಯರು ಸಾವು| ಪ್ರಾಣಕ್ಕೆ ಮುಳುವಾದ ಸೆಲ್ಫಿ ಕ್ರೇಝ್

ಸಮಗ್ರ ನ್ಯೂಸ್: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕಿತವಾಡ ಫಾಲ್ಸ್‌ನಲ್ಲಿ ಭಾರೀ ದುರಂತ ಸಂಭವಿಸಿದೆ. ಕಾಲು ಜಾರಿ ಬಿದ್ದು ರಾಜ್ಯದ ನಾಲ್ವರು ಯುವತಿಯರು ಸಾವನ್ನಪ್ಪಿದ್ದಾರೆ. ಜಲಪಾತ ವೀಕ್ಷಿಸಲು ಬೆಳಗಾವಿಯಿಂದ 40 ಯುವತಿಯರು ತೆರಳಿದ್ದರು. ಅಲ್ಲಿ ಸೆಲ್ಪಿ ತೆಗೆದುಕೊಳ್ಳುವ ವೇಳೆ ಐವರು ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ. ಇವರಲ್ಲಿ ನಾಲ್ವರು ಮೃತಪಟ್ಟರೆ, ಓರ್ವಳ ಸ್ಥಿತಿ ಗಂಭೀರವಾಗಿದೆ. ಉಜ್ವಲ್ ನಗರದ ಆಸಿಯಾ ಮುಜಾವರ್, ಕುದ್ರಶಿಯಾ, ರುಕ್ಕಶಾರ್ ಭಿಸ್ತಿ, ತಸ್ಮಿಯಾ ಮೃತಪಟ್ಟಿದ್ದಾರೆ. ಸಾವನ್ನಪ್ಪಿದ ಎಲ್ಲ ಯುವತಿಯರ ಮೃತದೇಹಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಇವರನ್ನು

ಫಾಲ್ಸ್ ನಲ್ಲಿ ಜಾರಿಬಿದ್ದು ನಾಲ್ಕು ಯುವತಿಯರು ಸಾವು| ಪ್ರಾಣಕ್ಕೆ ಮುಳುವಾದ ಸೆಲ್ಫಿ ಕ್ರೇಝ್ Read More »

ಮಂಗಳೂರು: ಬಾಂಬ್ ಸ್ಫೋಟ ಪ್ರಕರಣ|ಶಂಕಿತನಿಗೆ ಒಬ್ಬಳು ಗರ್ಲ್​ಫ್ರೆಂಡ್

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಶಂಕಿತ ರೂವಾರಿ ಶಾರೀಕ್ ಗೆ ಒಬ್ಬಳು ಗರ್ಲ್​ಫ್ರೆಂಡ್ ಇರೋ ವಿಷಯ ಬೆಳಕಿಗೆ ಬಂದಿದ್ದು ಇದೀಗ ಅಕೆಯನ್ನು ತನಿಖಾ ದಳ ವಿಚಾರಣೆ ನಡೆಸಿರುವುದಾಗಿ ತಿಳಿದಬಂದಿದೆ. ಶಾರೀಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತಿದ್ದು, ಗಂಭೀರವಾಗಿ ಗಾಯಗೊಂಡಿರುವ ಆತ ಹೇಳಿಕೆ ನೀಡದ ಸ್ಥಿತಿಯಲ್ಲಿದ್ದಾನೆ. ಒಂದು ವಾರದ ಬಳಿಕ ಆತನಿಂದ ಹೇಳಿಕೆ ಪಡೆಯಬಹುದು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಇತ್ತ ಪೊಲೀಸರು ಮತ್ತು ಎನ್​ಐಎ ತಂಡ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶಾರೀಕ್

ಮಂಗಳೂರು: ಬಾಂಬ್ ಸ್ಫೋಟ ಪ್ರಕರಣ|ಶಂಕಿತನಿಗೆ ಒಬ್ಬಳು ಗರ್ಲ್​ಫ್ರೆಂಡ್ Read More »

ಚಪ್ಪಲಿ ಕಚ್ಚಿಕೊಂಡು ಹೋದ ಹಾವು| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಹಾವೊಂದು ಚಪ್ಪಲಿ ಕಚ್ಚಿಕೊಂಡು ಹೋಗುವ ವಿಡಿಯೋ ವೈರಲ್ ಆಗಿದ್ದು, ಹಾವಿನ ಈ ಸಾಹಸ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ. ವಿಡಿಯೋವನ್ನು ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಈ ಹಾವು ಆ ಚಪ್ಪಲಿಯನ್ನು ಏನು ಮಾಡುತ್ತದೆ. ಅದಕ್ಕೆ ಕಾಲುಗಳಿಲ್ಲವಲ್ಲ ಎಂದು ಶೀರ್ಷಿಕೆಯಲ್ಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಾಯಿಯಲ್ಲಿ ಚಪ್ಪಲಿ‌ ಕಚ್ಚಿಕೊಂಡ ಹಾವು ವೇಗವಾಗಿ ಸರಿದು ಹೋಗುತ್ತದೆ. ಈ ವೀಡಿಯೊ ಬಿಹಾರದ್ದೆಂದು ಹಲವರು ಗಮನ ಸೆಳೆದಿದ್ದು, ಲಕ್ಷಾಂತರ ವೀಕ್ಷಣೆ ಕಂಡಿದೆ. ಅನೇಕರು ರೋಚಕ‌ ಕಾಮೆಂಟ್ ಮಾಡಿದ್ದಾರೆ.

ಚಪ್ಪಲಿ ಕಚ್ಚಿಕೊಂಡು ಹೋದ ಹಾವು| ವಿಡಿಯೋ ವೈರಲ್ Read More »