ಸಮಗ್ರ ಸಮಾಚಾರ

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೆ.ಎಲ್ ರಾಹುಲ್

ಸಮಗ್ರ ನ್ಯೂಸ್: ಕಳಪೆ ಫಾರ್ಮ್‌ನಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಕೆಎಲ್ ರಾಹುಲ್, ಸಂಕಷ್ಟದ ಸಮಯದಲ್ಲಿ ದೇವರ ಮೊರೆ ಹೋಗಿದ್ದಾರೆ. ನವೆಂಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕೆ.ಎಲ್. ರಾಹುಲ್‌ಗೂ ಕುಕ್ಕೆ ಸುಬ್ರಹ್ಮಣ್ಯಕ್ಕೂ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದೆ. ಈ ಮೊದಲು ಹಲವು ಬಾರಿ ಕೆಎಲ್ ರಾಹುಲ್ ಇಲ್ಲಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಕಳೆದ ಬಾರಿ ಫಾರ್ಮ್ ಕಳೆದು ಕೊಂಡಾಗಲೂ ಇಲ್ಲಿಗೆ ಭೇಟಿ ನೀಡಿದ ನಂತರ ಅವರ ಪ್ರದರ್ಶನ […]

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೆ.ಎಲ್ ರಾಹುಲ್ Read More »

ಆತನ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ| ವರ್ಷದೊಳಗೆ ಸಂಸಾರಕ್ಕೆ ಕೊಳ್ಳಿ!!

ಸಮಗ್ರ ನ್ಯೂಸ್: ಆತನಿಗೆ ಮನೆಯೂಟ ರುಚಿಸ್ತಾ ಇರ್ಲಿಲ್ಲ. ಇದಕ್ಕಾಗಿ ಆತ ಹೊರಗಿನ ದಾರಿ ಹಿಡಿದ. ಇದರಿಂದ ನೊಂದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಳು. ಐಬಿಎಂ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರೂ‌ ಪತಿಯ ಅನೈತಿಕ ಸಂಬಂಧ ಆಕೆಯ ಬದುಕಿಗೆ ಕೊಳ್ಳಿ ಇಟ್ಟಿದೆ. ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ ನಲ್ಲಿ ನ.10ರಂದು ಈ ಘಟನೆ ನಡೆದಿದ್ದು, ಅದರ ಹಿನ್ನೆಲೆ ನಿಧಾನಕ್ಕೆ ಬಿಚ್ಚಿಕೊಳ್ಳುತ್ತಿದೆ. ಐಬಿಎಂನಲ್ಲಿ ಉದ್ಯೋಗಿಯಾಗಿರುವ ಶ್ವೇತಾ (27) ನೇಣಿಗೆ ಶರಣಾದ ದುರ್ದೈವಿ. ಪತಿ ಅಭಿಷೇಕ್‌ ಅವರು ಹೊಂದಿರುವ ಅಕ್ರಮ ಸಂಬಂಧದಿಂದ ಬೇಸತ್ತು

ಆತನ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ| ವರ್ಷದೊಳಗೆ ಸಂಸಾರಕ್ಕೆ ಕೊಳ್ಳಿ!! Read More »

ನಂದಿನಿ‌ ಹಾಲು ಹಾಗೂ ಮೊಸರಿನ ದರದಲ್ಲಿ ಹೆಚ್ಚಳ| ನಾಳೆಯಿಂದಲೇ ನೂತನ ದರ ಜಾರಿ

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುವುದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದರೆ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬ್ರೇಕ್ ಹಾಕಿದ್ದರು. ಈ ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ಈ

ನಂದಿನಿ‌ ಹಾಲು ಹಾಗೂ ಮೊಸರಿನ ದರದಲ್ಲಿ ಹೆಚ್ಚಳ| ನಾಳೆಯಿಂದಲೇ ನೂತನ ದರ ಜಾರಿ Read More »

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ

ಸಮಗ್ರ ನ್ಯೂಸ್: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ದ ಬಿಜೆಪಿ ಶಾಸಕರೇ ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೇ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಆಡಳಿತ ಪಕ್ಷದ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನಾನೊಬ್ಬ ದಲಿತ ಶಾಸಕ ಎಂಬ ಕಾರಣದಿಂದ ಮೊನ್ನೆ ನನ್ನ ಕ್ಷೇತ್ರದಲ್ಲಿ ನಡೆದ ಘಟನೆ ಸಂಬಂಧ ಸೌಜನ್ಯಕ್ಕೂ ಮಾತನಾಡಿಸಿ

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ Read More »

ಶಬರಿಮಲೆ ಯಾತಾರ್ಥಿಗಳಿಗೆ ವಿಮಾನದಲ್ಲಿ ಇರುಮುಡಿ ಕೊಂಡೊಯ್ಯಲು ಅನುಮತಿ….!!

ಸಮಗ್ರ ನ್ಯೂಸ್ : ಶಬರಿಮಲೆಗೆ ಭೇಟಿ ಕೊಡುವ ಯಾತ್ರಾರ್ಥಿಗಳಿಗೆ ಸೀಮಿತ ಅವಧಿಯ ಸಂದರ್ಭ ತಮ್ಮ ಬ್ಯಾಗೇಜ್ ಜೊತೆ ತೆಂಗಿನಕಾಯಿ ಕೊಂಡೊಯ್ಯಲು ಬ್ಯುರೊ ಆಫ್‌ ಸಿವಿಲ್‌ ಏವಿಯೇಷನ್‌ ಸೆಕ್ಯುರಿಟಿ (ಬಿಸಿಎಎಸ್‌) ಅನುಮತಿ ನೀಡಿದೆ. ಶಬರಿಮಲೆ ಋುತು ಪ್ರಾರಂಭವಾಗಿರುವ ಹಿನ್ನಲೆ ಶಬರಿಮಲೆಗೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದು, ‘ಇರುಮುಡಿ’ ಹೊತ್ತು ಸಾಗುವ ಭಕ್ತರಿಗೆ ಈ ನಿಯಮದಿಂದ ಅನುಕೂಲವಾಗಲಿದೆ. ‘ಫೈರ್‌ ಸೇಫ್ಟಿ’ ಅಡಿಯಲ್ಲಿ ಕ್ಯಾಬಿನ್‌ ಬ್ಯಾಗ್‌ ಜತೆ ತೆಂಗಿನಕಾಯಿ ಒಯ್ಯಲು ಅವಕಾಶ ಇಲ್ಲ. ತಾತ್ಕಾಲಿಕವಾಗಿ ಈ ನಿಯಮದಲ್ಲಿ

ಶಬರಿಮಲೆ ಯಾತಾರ್ಥಿಗಳಿಗೆ ವಿಮಾನದಲ್ಲಿ ಇರುಮುಡಿ ಕೊಂಡೊಯ್ಯಲು ಅನುಮತಿ….!! Read More »

10 ಸಾವಿರ ಮಂದಿ ಗೂಗಲ್ ನಿಂದ ಹೊರಕ್ಕೆ| ಉದ್ಯೋಗಿಗಳ ವಜಾಕ್ಕೆ ಚಿಂತನೆ

ಸಮಗ್ರ ನ್ಯೂಸ್: ದೈತ್ಯ ಐಟಿ ಕಂಪೆನಿಗಳಲ್ಲಿ ಉದ್ಯೋಗಿಗಳ ವಜಾ ಪರ್ವ ಮುಂ‌ದುವರಿದಿದ್ದು ಇದೀಗ ಗೂಗಲ್‌ ಕಂಪೆನಿಯಿಂದ 10ಸಾವಿರ ಮಂದಿಯನ್ನು ಶೀಘ್ರವೇ ಕೆಲಸದಿಂದ ಕೈಬಿಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೆಡ್ಜ್ ಫಂಡ್ ಬಿಲಿಯನೇರ್ ಕ್ರಿಸ್ಟೋಫರ್ ಹೊಹ್ನ್, ಗೂಗಲ್ ಮಾತೃಸಂಸ್ಥೆಯಾದ ಆಲ್ಫಾಬೆಟ್‌ಗೆ ಈ ಸಂಬಂಧ ಪತ್ರ ಬರೆದಿದ್ದು, ಉದ್ಯೋಗಿಗಳ ಸಂಖ್ಯೆ ಕಡಿತಗೊಳಿಸಲು ಸಲಹೆ ನೀಡಲಾಗಿದೆ. ಟೆಕ್ ಬೆಹೆಮೊತ್ ಗೂಗಲ್ ಕಾರ್ಯಕ್ಷಮತೆಯ ಸುಧಾರಣೆ ಸಂಬಂಧ ಯೋಜನೆಯೊಂದನ್ನು ಜಾರಿಗೊಳಿಸಲು ಮುಂದಾಗಿದ್ದು, ಇದರ ಫಲಿತಾಂಶವಾಗಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಬೆಕಾಗುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

10 ಸಾವಿರ ಮಂದಿ ಗೂಗಲ್ ನಿಂದ ಹೊರಕ್ಕೆ| ಉದ್ಯೋಗಿಗಳ ವಜಾಕ್ಕೆ ಚಿಂತನೆ Read More »

ಕುಕ್ಕೆ ಸುಬ್ರಹ್ಮಣ್ಯ: ಮತ್ತೆ ಧರ್ಮ ದಂಗಲ್| ಪ್ರತ್ಯಕ್ಷವಾಯ್ತು ಅನ್ಯಧರ್ಮೀಯರ ವ್ಯಾಪಾರ ನಿಷೇಧಿಸಿದ ಬ್ಯಾನರ್

ಸಮಗ್ರ ನ್ಯೂಸ್: ರಾಜ್ಯದ ನಂಬರ್ ವನ್ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ದೇಗುಲದಲ್ಲಿ ಇದೀಗ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಭಕ್ತಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಈ ನಡುವೆ ಕೆಲಕಾಲ ಸ್ತಬ್ಧವಾಗಿದ್ದ ಧರ್ಮ ದಂಗಲ್ ಕೂಡಾ ಶುರುವಾಗುವ ಲಕ್ಷಣ ಕಂಡುಬಂದಿದೆ. ದೇವಳದ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದ್ದು, ಮತ್ತೊಂದು ವಿವಾದಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಾಕ್ಷಿಯಾಗುವ ಲಕ್ಷಣಗಳು ಕಂಡುಬಂದಿದೆ. ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ

ಕುಕ್ಕೆ ಸುಬ್ರಹ್ಮಣ್ಯ: ಮತ್ತೆ ಧರ್ಮ ದಂಗಲ್| ಪ್ರತ್ಯಕ್ಷವಾಯ್ತು ಅನ್ಯಧರ್ಮೀಯರ ವ್ಯಾಪಾರ ನಿಷೇಧಿಸಿದ ಬ್ಯಾನರ್ Read More »

ಕುಕ್ಕರ್‌ ಬಾಂಬ್ ಸರಿಯಾಗಿ ಸ್ಪೋಟಿಸಿದ್ದರೆ ಭಾರಿ ಅವಘಡವಾಗ್ತಿತ್ತು – ಗೃಹಸಚಿವ

ಸಮಗ್ರ ನ್ಯೂಸ್: ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು ಎಂದು ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಸಚಿವರು ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಮಂಗಳೂರು ಸ್ಪೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪುರುಷೋತ್ತಮ್ ಚಿಕಿತ್ಸಾ

ಕುಕ್ಕರ್‌ ಬಾಂಬ್ ಸರಿಯಾಗಿ ಸ್ಪೋಟಿಸಿದ್ದರೆ ಭಾರಿ ಅವಘಡವಾಗ್ತಿತ್ತು – ಗೃಹಸಚಿವ Read More »

ಹಣಕ್ಕಾಗಿ ದೈವದ ಕಟ್ಟೆ ನಿರ್ಮಿಸಿ ಅಪಚಾರ ಮಾಡಿದರೆ ಜೋಕೆ| ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್

ಸಮಗ್ರ ನ್ಯೂಸ್: ಕಾಂತಾರ ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದೆ. ದೈವಾರಾಧನೆಕುರಿತು ಚಿತ್ರದಲ್ಲಿ ಅದ್ಬುತವಾಗಿ ತೋರಿಸಲಾಗಿದೆ. ಈ ಸಿನಿಮಾ ಸಕ್ಸಸ್​ ಆದ ಬಳಿಕ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ. ಇದೀಗ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದೈವದ ಹೆಸರಲ್ಲಿ ಅನೇಕರು ಹಣ ಮಾಡಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್​ಗಳು ಹರಿದಾಡುತ್ತಿದೆ. ಅಂಥವರಿಗೆ ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು, ಮೈಸೂರು ಭಾಗದ ಜನರು ದೈವನಂಬಿಕೆಗಳನ್ನು ಮುರಿದು, ಪ್ರಚಾರಕ್ಕಾಗಿ,

ಹಣಕ್ಕಾಗಿ ದೈವದ ಕಟ್ಟೆ ನಿರ್ಮಿಸಿ ಅಪಚಾರ ಮಾಡಿದರೆ ಜೋಕೆ| ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ Read More »

ಕರುನಾಡಿನಲ್ಲಿ ಕನ್ನಡಿಗನಿಗೇ ಉದ್ಯೋಗದಲ್ಲಿ ಆದ್ಯತೆ

ಸಮಗ್ರ ನ್ಯೂಸ್: ಕೊನೆಗೂ ಕನ್ನಡಿಗರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 70% ರಷ್ಟು ಕೆಲಸ ನೀಡುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸ್ಥಳೀಯ ಕನ್ನಡಿಗರಿಗೆ ಶೇ. 70 ರಷ್ಟು ಉದ್ಯೋಗ ನೀಡುವುದು ಕಡ್ಡಾಯ. ಉಲ್ಲಂಘಿಸಿದ ಉದ್ದಿಮೆಗೆ

ಕರುನಾಡಿನಲ್ಲಿ ಕನ್ನಡಿಗನಿಗೇ ಉದ್ಯೋಗದಲ್ಲಿ ಆದ್ಯತೆ Read More »