ಸಮಗ್ರ ಸಮಾಚಾರ

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್

ಸುಳ್ಯ: ಇಲ್ಲಿನ ನೆಹರೂ ಸ್ಮಾರಕ ಮಹಾವಿದ್ಯಾಲಯದ ಎರಡನೇ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮಂಡೆಕೋಲಿನ ಅಭಿಷೇಕ್ ಕಣೆಮರಡ್ಕ ನಿರಂತರ 24 ಗಂಟೆಗಳ ಕಾಲ ಕೂಚುಪುಡಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ದಾಖಲೆ ಬರೆದಿದ್ದಾರೆ. ನೆಹರೂ‌‌ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ಏ.11ರಂದು ಸಂಜೆ 6.30ರಿಂದ ಆರಂಭಗೊಂಡು ಏ.12ರ ಸಂಜೆ 6.30ರ ತನಕ ನಿರಂತರ 24 ಗಂಟೆ ಕುಚ್ಚುಪುಡಿ ನೃತ್ಯ ಮಾಡಿದರು. ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದು ದಾಖಲೆ ನಿರ್ಮಿಸಬೇಕೆಂಬ ಹಂಬಲದಿಂದ ಅಭಿಷೇಕ್ ಕುಚುಪುಡಿ […]

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್ Read More »

ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ರವಿವಾರದಂದು ಕಲಬುರಗಿಯಲ್ಲಿ ಅತ್ಯಾಧಿಕ ಉಷ್ಣಾಂಶ ದಾಖಲಾಗಿದ್ದು, ಗರಿಷ್ಟ ತಾಪಮಾನವು 41.6 ಸೆಲ್ಸಿಯಸ್‍ಗೆ ಏರಿಕೆಯಾಗಿದೆ. ಎ.13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ, ಎ.14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ

ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ Read More »

ಆಂದ್ರಪ್ರದೇಶದಲ್ಲಿ ಅಪಘಾತ| ಸುಳ್ಯ ಮೂಲದ ಯುವತಿ ಸಾವು

ಸುಳ್ಯ: ಸ್ನೇಹಿತೆಯ ಮದುವೆಗೆಂದು ಬೆಂಗಳೂರಿನಿಂದ ಹೊರಟಿದ್ದ ಐಟಿ ಉದ್ಯೋಗಿಗಳ ಕಾರು ಚಾಲಕನ ಅರೆನಿದ್ರೆಯ ಕಾರಣದಿಂದ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಸುಳ್ಯದ ಮೂಲದ ಯುವತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಭೀಕರ ಘಟನೆಯು ಶನಿವಾರ ಬೆಳಿಗ್ಗೆ ಆದೋನಿ-ಸಿರುಗುಪ್ಪ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಕಂದಡ್ಕದ ಕ್ಷಿಪ್ರಾ (25) ಮೃತಪಟ್ಟ ದುರ್ದೈವಿ. ಇವರೊಂದಿಗೆ ಪ್ರಯಾಣಿಸುತ್ತಿದ್ದ ಪ್ರದೀಪ್ ಅವರ ಸ್ಥಿತಿ ಗಂಭೀರವಾಗಿದ್ದು, ಕೋಮಾ ಸ್ಥಿತಿಗೆ ತಲುಪಿದ್ದಾರೆ. ಉಳಿದಂತೆ ಅರ್ಪಿತಾ ಮತ್ತು ಶರ್ಮಿಳಾ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಆಂದ್ರಪ್ರದೇಶದಲ್ಲಿ ಅಪಘಾತ| ಸುಳ್ಯ ಮೂಲದ ಯುವತಿ ಸಾವು Read More »

ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 102 ನೆಕ್ಕಿಲಾಡಿ ಹಾಗೂ ಕೋರಿಯರ್ ಸಮೀಪದ ಕುಮಾರಧಾರಾ ನದಿ ತೀರದಲ್ಲಿ ಶನಿವಾರ 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ನದಿ ತೀರದಲ್ಲಿ ಆನೆಗಳು ಗುಂಪಾಗಿ ಸಂಚರಿಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆನೆಗಳು ಜನವಸತಿ ಪ್ರದೇಶಕ್ಕೆ ನುಗ್ಗದಂತೆ ತಡೆಯಲು ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಾಡಾನೆಗಳನ್ನು ಅರಣ್ಯದತ್ತ

ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ Read More »

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ -ಮಗಳು ಇಬ್ಬರೂ ಪಾಸ್

ಸಮಗ್ರ ನ್ಯೂಸ್: “ಸಾಧಿಸುವ ಛಲವಿದ್ದರೆ ಸಾಧನೆಗೆ ವಯಸ್ಸು ಅಡ್ಡಿಯಾಗದು” ಎಂಬ ಮಾತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‌ನಲ್ಲಿ ನಡೆದ ಈ ಅಪರೂಪದ ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ತಾಯಿ ಮತ್ತು ಮಗಳು ಏಕಕಾಲಕ್ಕೆ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ. ಬಿ.ಸಿ. ರೋಡ್ ಕೈಕಂಬ ನಿವಾಸಿಯಾಗಿರುವ ನೇತ್ರಾವತಿ ವಿ.ಆರ್. ಅವರು ವೃತ್ತಿಯಲ್ಲಿ ಗೃಹಿಣಿ. ಸಂಸಾರದ ಜವಾಬ್ದಾರಿಗಳ ನಡುವೆಯೂ ಶಿಕ್ಷಣ ಮುಂದುವರಿಸಬೇಕೆಂಬ ಹಳೆಯ ಕನಸನ್ನು ಅವರು ಕೈಬಿಟ್ಟಿರಲಿಲ್ಲ. ಈ ಬಾರಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ -ಮಗಳು ಇಬ್ಬರೂ ಪಾಸ್ Read More »

ಮಹೇಶ್ ತಿಮರೋಡಿಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್| ಮೂರನೇ ಬಾರಿ ಗಡೀಪಾರು ಆದೇಶಕ್ಕೆ ತಡೆ

ಸಮಗ್ರ ನ್ಯೂಸ್: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏಪ್ರಿಲ್ 16ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ಪೊಲೀಸ್‌ ಠಾಣಾ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು

ಮಹೇಶ್ ತಿಮರೋಡಿಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್| ಮೂರನೇ ಬಾರಿ ಗಡೀಪಾರು ಆದೇಶಕ್ಕೆ ತಡೆ Read More »

ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ| ಉಡುಪಿ ಪ್ರಥಮ, ದ.ಕ ದ್ವಿತೀಯ ಸ್ಥಾನ| ಆಳ್ವಾಸ್ ನ ದಿಶಾ, ಬೆಂಗಳೂರಿನ ಅದಿತಿ‌ ರಾಜ್ಯಕ್ಕೆ ಟಾಪರ್ಸ್

ಸಮಗ್ರ ನ್ಯೂಸ್: ಗುರುವಾರ ಪ್ರಕಟಗೊಂಡ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ.96.39 ಉತ್ತೀರ್ಣದ ಫಲಿತಾಂಶದೊಂದಿಗೆ ರಾಜ್ಯದಲ್ಲೇ ಸತತ ಎರಡನೇ ವರ್ಷವೂ ಅಗ್ರಸ್ಥಾನವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಸತತ ಎರಡನೇ ವರ್ಷ ನೆರೆಯ ದಕ್ಷಿಣ ಕನ್ನಡ ಜಿಲ್ಲೆ ನಿಕಟ ಸ್ಪರ್ಧೆ ನೀಡಿ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡುವಂತಾಗಿದೆ. ಈ ಬಾರಿ ಉಡುಪಿ ಶೇ.96.39 ಫಲಿತಾಂಶದೊಂದಿಗೆ ಅಗ್ರಸ್ಥಾನಿಯಾದರೆ ದಕ್ಷಿಣ ಕನ್ನಡ ಜಿಲ್ಲೆ ಶೇ.96.35 ಉತ್ತೀರ್ಣತೆಯೊಂದಿಗೆ ಎರಡನೇ ಸ್ಥಾನದಲ್ಲಿದೆ. 2025ರಲ್ಲಿ ಉಡುಪಿ ಜಿಲ್ಲೆ ಶೇ.93.90 ಫಲಿತಾಂಶದೊಂದಿಗೆ ಅಗ್ರಸ್ಥಾನಿಯಾಗಿದ್ದರೆ,

ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ| ಉಡುಪಿ ಪ್ರಥಮ, ದ.ಕ ದ್ವಿತೀಯ ಸ್ಥಾನ| ಆಳ್ವಾಸ್ ನ ದಿಶಾ, ಬೆಂಗಳೂರಿನ ಅದಿತಿ‌ ರಾಜ್ಯಕ್ಕೆ ಟಾಪರ್ಸ್ Read More »

ಇಂಟರ್ನೆಟ್ ಪ್ಯಾಕ್ ಇಲ್ಲದ ಅಗ್ಗದ ಯೋಜನೆಗಳನ್ನು ಕಡ್ಡಾಯವಾಗಿ ನೀಡಿ| ಟೆಲಿಕಾಂ ಕಂಪನಿಗಳಿಗೆ ಟ್ರಾಯ್ ಸೂಚನೆ

ಸಮಗ್ರ ನ್ಯೂಸ್: ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಟೆಲಿಕಾಂ ಕಂಪನಿಗಳಿಗೆ ಕೇವಲ ವಾಯ್ಸ್ ಕಾಲಿಂಗ್ ಮತ್ತು ಎಸ್‌ಎಂಎಸ್ ಸೌಲಭ್ಯಗಳಿರುವ ಅಗ್ಗದ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಲು ನಿರ್ದೇಶಿಸಿದೆ. ಟೆಲಿಕಾಂ ಕಂಪನಿಗಳು ಇನ್ನು ಮುಂದೆ ಕೇವಲ ವಾಯ್ಸ್ ಕಾಲಿಂಗ್ (Voice Calling) ಮತ್ತು ಎಸ್‌ಎಂಎಸ್ (SMS) ಸೌಲಭ್ಯಗಳನ್ನು ಮಾತ್ರ ಒಳಗೊಂಡಿರುವ ಕಡಿಮೆ ಬೆಲೆಯ ಮೊಬೈಲ್ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ನಿರ್ದೇಶನ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹೆಚ್ಚಿನ ರೀಚಾರ್ಜ್ ಪ್ಲಾನ್‌ಗಳಲ್ಲಿ ಡೇಟಾ (Data)

ಇಂಟರ್ನೆಟ್ ಪ್ಯಾಕ್ ಇಲ್ಲದ ಅಗ್ಗದ ಯೋಜನೆಗಳನ್ನು ಕಡ್ಡಾಯವಾಗಿ ನೀಡಿ| ಟೆಲಿಕಾಂ ಕಂಪನಿಗಳಿಗೆ ಟ್ರಾಯ್ ಸೂಚನೆ Read More »

ಮಂಗಳೂರು: ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯವನ್ನು ತೊರೆದು, ಬಾಡಿಗೆ ಮನೆಯಲ್ಲಿ ವಾಸವಿದ್ದುಕೊಂಡು ಮಾದಕ ಪದಾರ್ಥಗಳ ಮಾರಾಟ ಜಾಲದಲ್ಲಿ ತೊಡಗಿದ್ದರು ಎಂದು ನಗರ ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಮಿಷನರ್, ‘ವಿದ್ಯಾರ್ಥಿಯೊಬ್ಬನ ಬ್ಯಾಗಿನಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿತ್ತು. ಆತನ ಪೋಷಕರು ಈ ಬಗ್ಗೆ ನಮಗೆ ಮಾಹಿತಿ ನೀಡಿದ್ದರು. ಆ ಮಾಹಿತಿಯನ್ನು ಆಧರಿಸಿ, ಆತನಿಗೆ

ಮಂಗಳೂರು: ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್ Read More »

ಹವಾಮಾನ ವರದಿ| ಗಾಳಿಯ ಪಥ ಬದಲಾವಣೆ| ನಿರೀಕ್ಷೆಯಂತೆ ಬೀಳದ ಮಳೆ| ಕರಾವಳಿಯಲ್ಲಿ ಉರಿಬಿಸಿಲು, ತಾಪಮಾನ ಏರುಪೇರು

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಗಾಳಿಯ ತೀವ್ರತೆ ಹೆಚ್ಚಿದ್ದರೂ ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ನಿರಂತರ ಏರಿಕೆ ಕಂಡು ಬರುತ್ತಿದೆ. ಸುಮಾರು ಒಂದು ವಾರದಿಂದ, ಬೆಳಿಗ್ಗೆ ಮತ್ತು ರಾತ್ರಿಯಲ್ಲಿ ಗಾಳಿ ಬೀಸುತ್ತಿದ್ದು, ಇದರಿಂದ ಮೋಡಗಳು ಚದುರಿಹೋಗಿ, ಮಳೆಯಾಗುತ್ತಿಲ್ಲ. ಪೂರ್ವ ಮಾನ್ಸೂನ್ ಋತುವಿನಲ್ಲಿ, ಗಾಳಿಯು ಸಾಮಾನ್ಯವಾಗಿ ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುತ್ತದೆ, ಮೋಡಗಳ ರಚನೆಗೆ ಸಹಾಯ ಮಾಡುತ್ತದೆ ಮತ್ತು ಮಳೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಆದಾಗ್ಯೂ, ಇತ್ತೀಚಿನ ವಾರಗಳಲ್ಲಿ, ಗಾಳಿಯು ವಿರುದ್ಧ ದಿಕ್ಕಿನಲ್ಲಿ ಬೀಸುತ್ತಿದೆ-ಅರೇಬಿಯನ್ ಸಮುದ್ರದಿಂದ ಬಂಗಾಳ

ಹವಾಮಾನ ವರದಿ| ಗಾಳಿಯ ಪಥ ಬದಲಾವಣೆ| ನಿರೀಕ್ಷೆಯಂತೆ ಬೀಳದ ಮಳೆ| ಕರಾವಳಿಯಲ್ಲಿ ಉರಿಬಿಸಿಲು, ತಾಪಮಾನ ಏರುಪೇರು Read More »