ಸಮಗ್ರ ಸಮಾಚಾರ

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ

ಸಮಗ್ರ ನ್ಯೂಸ್: ಅನ್ಯ ಕೋಮಿನ ಯುವಕನೋರ್ವನ ಜೊತೆ ಯುವತಿಯೋರ್ವಳು ಪತ್ತೆಯಾಗಿದ್ದು, ಯುವಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆಯೊಂದು ನಡೆದಿದೆ. ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಅನ್ಯಕೋಮಿನ ಯುವಕನ ಬಂಧನವಾಗಿದೆ. ಈ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ಫಯಿಮ್ ಎಂಬಾತನೇ ಬಂಧಿತ ವ್ಯಕ್ತಿ. ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಈತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಬಾಮ್ ಎಂಬವರ ರೂಮ್‌ಗೆ […]

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ Read More »

ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್

ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ Read More »

ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ

ಸಮಗ್ರ ನ್ಯೂಸ್: ಯೋಗಿ ಆದಿತ್ಯನಾಥ್ ರವರ ರಾಜ್ಯ ಉತ್ತರ ಪ್ರದೇಶದ ಲಖೀಂಪುರಖೇರಿಯಲ್ಲಿ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಈ ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ. 15 ಮತ್ತು 17 ವರ್ಷದ ಈ ಹೆಣ್ಣುಮಕ್ಕಳನ್ನು ಇಬ್ಬರು ಆರೋಪಿಗಳು ಮದುವೆ ಮಾಡಿಕೊಳ್ಳುವುದಾಗಿ ಹೇಳಿ, ನಾಲ್ವರ ಜತೆಗೆ ಸೇರಿಕೊಂಡು ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ Read More »

ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್| ಪ್ರತಿಹರಿದು ಕಾಂಗ್ರೆಸ್ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಬ್ರೇಕ್ ಬೀಳಲಿದೆ. ಯಾಕೆಂದರೆ ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಧಾನಸಭೆಯಿಂದ ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2022ನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್‌ನಲ್ಲಿ ಇಂದು ಮಂಡನೆ ಮಾಡಿದರು. ವಿಧೇಯಕ ಅಂಗೀಕಾರವಾಗಿದ್ದು ಮತ್ತೊಂದೆಡೆ ಮತಾಂತರ ನಿಷೇಧ ವಿಧೇಯಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಲ್‌ನ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ

ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್| ಪ್ರತಿಹರಿದು ಕಾಂಗ್ರೆಸ್ ಆಕ್ರೋಶ Read More »

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅವರು ದಸರಾ ಜಂಬೂಸವಾರಿಯನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿತ್ತು. ಆದ್ರೇ ಪ್ರಧಾನಿ ಮೋದಿ ದಸರಾ ಮಹೋತ್ಸವಕ್ಕೆ ಬರಲ್ಲ ಎಂಬುದಾಗಿ ಪಿಎಂ ಕಚೇರಿಯಿಂದ ಸಿಎಂ ಕಚೇರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಈ ಕುರಿತಂತೆ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ತಿಳಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಚೇರಿಗೆ ಪಿಎಂ

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ Read More »

ಗೂಡ್ಸ್‌ ಲಾರಿ ಢಿಕ್ಕಿ| ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 6 ಗಂಟೆಗೆ ಸುಮಾರಿಗೆ ಅಪರಿಚಿತ ಗೂಡ್ಸ್‌ ಲಾರಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಮರ್ಥ್ (14) ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಸಮರ್ಥ್ ತಂದೆ ಪ್ರಭಾಕರ್ ನಿನ್ನೆ ಅಪಘಾತದ ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರಾದ ಪ್ರಭಾಕರ್ ಹಾಗೂ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಓದುತ್ತಿದ್ದ ಮಗನನ್ನು

ಗೂಡ್ಸ್‌ ಲಾರಿ ಢಿಕ್ಕಿ| ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು Read More »

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ

ಬೆಂಗಳೂರು: ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. “ಭಾರತ ಜೋಡೋ ಯಾತ್ರೆಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ” ಎಂದಿದ್ದಾರೆ. “ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ Read More »

ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಮೂಡಿಗೆರೆ ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಬಾರಿ ಗಾಳಿ ಮಳೆಗೆ ಗುಡ್ಡ ಕುಸಿದಿತ್ತು. ಅದರ ಪರಿಣಾಮವಾಗಿ ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಮಣ್ಣು ಕುಸಿಯದಂತೆ ತಡೆಯಲು ಮನುಷ್ಯ ತೆರಳಿ ಗಿಡ ನೆಡದಂತಹ ಪ್ರದೇಶಗಳಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆಗೆ ಮುಂದಾಗಿದೆ. ಚಾರ್ಮಾಡಿ ಘಾಟ್, ಬಿದ್ರುತಳ, ಮದುಗುಂಡಿ, ಮೇಗೂರು, ಸೇರಿದಂತೆ ಹಲವೆಡೆ ಗುಡ್ಡ ಕುಸಿತವಾಗಿ

ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.
Read More »

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ!|ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ ಇತಿಹಾಸದಲ್ಲೇ ಈ ಬಾರಿಯ ದಸರಾ ಅತ್ಯಂತ ಮಹತ್ವದ್ದಾಗಲಿದೆ. ದಸರಾ ಇತಿಹಾಸ ಪುಟಗಳಲ್ಲಿ ಈ ಬಾರಿಯ ದಸರಾ ಪ್ರಮುಖ ಸ್ಥಾನ ಪಡೆಯಲಿದೆ. ನಾಡಹಬ್ಬ ದಸರಾ ಸೆ. 26 ರಿಂದ ಆರಂಭವಾಗಲಿದೆ‌. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು ದಸರಾ ಉದ್ಘಾಟಿಸಲಿದ್ದಾರೆ. ಇಷ್ಟು ವರ್ಷ ನಾಡಿನ ಹಿರಿಯ ಸಾಹಿತಿಗಳು, ಸ್ವಾಮೀಜಿಗಳು, ವಿಚಾರವಾದಿಗಳು, ನಾಡು ನುಡಿಗೆ ಅಸಾಮಾನ್ಯ ಸೇವೆ ಸಲ್ಲಿಸಿದವರು ದಸರಾ ಉದ್ಘಾಟಿಸುತ್ತಿದ್ದರು. ಕಳೆದ ಬಾರಿ ಈ

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ!|ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು Read More »

ಲಕ್ಷ್ಮಣತೀರ್ಥ ನದಿಯಲ್ಲಿ ಯುವಕನ ಶವಪತ್ತೆ

ಸಮಗ್ರ ನ್ಯೂಸ್: ಹುಣಸೂರು ಲಕ್ಷ್ಮಣತೀರ್ಥ ನದಿಯ ಕಟ್ಟೆಮಳಲವಾಡಿ ಅಣೆಕಟ್ಟೆ ಬಳಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ದಾವಣಿ ಬೀದಿಯ ನಿತ್ಯಾನಂದರ ಪುತ್ರ, ಸ್ಟೋರ್ ಬೀದಿ ನಿವಾಸಿ ರಾಘವೇಂದ್ರ(24)ರ ಶವ ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು, ಈತನ ಪಲ್ಸರ್ ಬೈಕ್, ಮೊಬೈಲ್, ಪರ್ಸ್,ಪಾನ್‌ಕಾರ್ಡ್, ಡಿ.ಎಲ್. ಚಿಕ್ಕಹುಣಸೂರು ಹಳೇ ಊರಿನ ನದಿಯ ಬಳಿಯ ಜಮೀನಿನಲ್ಲಿ ಪತ್ತೆಯಾಗಿತ್ತು. ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಎಸ್.ಐ.ರಾಧಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಘವೇಂದ್ರರ

ಲಕ್ಷ್ಮಣತೀರ್ಥ ನದಿಯಲ್ಲಿ ಯುವಕನ ಶವಪತ್ತೆ Read More »