ಸಮಗ್ರ ಸಮಾಚಾರ

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಸಮಗ್ರ ನ್ಯೂಸ್:‌ ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಜೆಪಿ ನಡ್ಡಾ ಎ.30ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ Read More »

ಸುಳ್ಯದಲ್ಲಿ ಗುಡುಗು ಸಹಿತ ಗಾಳಿ ಮಳೆ

ಸಮಗ್ರ ಸಮಾಚಾರ: ಸುಳ್ಯದಲ್ಲಿ ಇಂದು ಅಪರಾಹ್ನ ಗುಡುಗು, ಸಹಿತ ಬಾರೀ ಗಾಳಿ ಮಳೆಯಾಗಿದೆ. ಬೆಳಗ್ಗೆ ಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಮಧ್ಯಾಹ್ನ ಮೂರು ಗಂಟೆ ವೇಳೆ ಬಾರೀ ಗಾಳಿ ಸಹಿತ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ಸುಳ್ಯ, ಕಡಬ ತಾಲೂಕಿನ ಹಲವೆಡೆ ಮಳೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ ಹನಿ ಮಳೆಯಾಗಿತ್ತು.

ಸುಳ್ಯದಲ್ಲಿ ಗುಡುಗು ಸಹಿತ ಗಾಳಿ ಮಳೆ Read More »

ಸುಳ್ಯ: ಮಾಜಿ‌ ಶಾಸಕ ಕೆ.ಕುಶಲ ಪುತ್ರ ಸುಧೀರ್ ಕೆಆರ್ ಎಸ್ ಪಕ್ಷಕ್ಕೆ ಸೇರ್ಪಡೆ

ಸಮಗ್ರ ನ್ಯೂಸ್: ಸುಳ್ಯದ‌ ಮಾಜಿ ಶಾಸಕ ಕೆ ಕುಶಲರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಇಂದು ಕೆಆರ್ ಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಸಿದ್ದಾಂತವನ್ನು ಒಪ್ಪಿ ಸಂಘಟನಾ ಕಾರ್ಯದರ್ಶಿಯಾಗಿ ಸುಧೀರ್ ನೇಮಕಗೊಂಡಿದ್ದಾರೆ. ಪಕ್ಷದ ಸಂಪೂರ್ಣ ಬೆಳವಣಿಗೆಗೆ ಇದು ಪೂರಕವಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ಕೆ.ಆರ್.ಎಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜ, ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು ಸುಚೇತ್ ಮತ್ತು ಅಖಿಲ್ ರವರು ಸುದೀರ್ ರನ್ನು ಬರಮಾಡಿಕೊಂಡರು.

ಸುಳ್ಯ: ಮಾಜಿ‌ ಶಾಸಕ ಕೆ.ಕುಶಲ ಪುತ್ರ ಸುಧೀರ್ ಕೆಆರ್ ಎಸ್ ಪಕ್ಷಕ್ಕೆ ಸೇರ್ಪಡೆ Read More »

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ

ಸಮಗ್ರ ನ್ಯೂಸ್: ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಎ.24 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ. ಎ.24 ರ ಬೆಳಿಗ್ಗೆ ಯತೀಶ್ ರವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿರುವುದು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯತೀಶ್ ರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದು,

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ Read More »

ಚಾರ್ಮಾಡಿ ಘಾಟ್: ತಡೆಗೋಡೆ ಬಿರುಕು, ಕುಸಿಯುವ ಭೀತಿ|ದುರಸ್ತಿಗೊಳಿಸುವಂತೆ ವಾಹನ ಚಾಲಕರ ಒತ್ತಾಯ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ (charmadi ghat) ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಆಗುವುದರಿಂದ ಯಾವುದೋ ವಾಹನ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಡೆಗೋಡೆ ತಳದಿಂದಲೇ ಬಿರುಕು ಬಿಟ್ಟಿದ್ದು ತಡೆಗೊಡೆ ಕುಸಿಯುವ ಸಂಭವವೇ ಹೆಚ್ಚಾಗಿದೆ. ಈ ರಸ್ತೆಯ ಬಲ ಭಾಗದಲ್ಲಿ ಬೃಹತ್ ಬಂಡೆ ಆಕಾಶಕ್ಕೆ ಮುಖ ಮಾಡಿರುವುದರಿಂದ ಈ ಸ್ಥಳದಲ್ಲಿ ರಸ್ತೆ ಮಾಡಲು

ಚಾರ್ಮಾಡಿ ಘಾಟ್: ತಡೆಗೋಡೆ ಬಿರುಕು, ಕುಸಿಯುವ ಭೀತಿ|ದುರಸ್ತಿಗೊಳಿಸುವಂತೆ ವಾಹನ ಚಾಲಕರ ಒತ್ತಾಯ Read More »

ಸುರತ್ಕಲ್: “ಡಬಲ್ ಇಂಜಿನ್ ಸರಕಾರದ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ಯುಪಿ, ಗುಜರಾತ್ ನಲ್ಲಿದೆ” -ಇನಾಯತ್ ಅಲಿ

Samagra news “ಜನರು ಕೋವಿಡ್ ಬಳಿಕ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ಅದೆಷ್ಟೋ ವಿದ್ಯಾವಂತ ಯುವಜನತೆ ಉದ್ಯೋಗ ಕಳೆದುಕೊಂಡಿದ್ದಾರೆ. ಬಿಜೆಪಿಯವರು ತಮ್ಮದು ಡಬಲ್ ಇಂಜಿನ್ ಸರಕಾರ ಅಂತ ಹೇಳ್ತಾರೆ. ಆದರೆ ಅದರ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ದೂರದ ಯುಪಿ, ಗುಜರಾತ್ ಕಡೆಗೆ ಹೊರಟುಹೋಗಿದೆ. ಅಭಿವೃದ್ಧಿ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಜಾತಿ ಮತಗಳ ಮಧ್ಯೆ ಹುಳಿ ಹಿಂಡುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಈ ಬಾರಿ ಜನರು ಬಿಜೆಪಿ ಸರಕಾರದಿಂದ ಭ್ರಮ ನಿರಸನಗೊಂಡು ಕಾಂಗ್ರೆಸ್ ಕೈಹಿಡಿಯಲಿದ್ದಾರೆ. ಈ ಮೂಲಕ

ಸುರತ್ಕಲ್: “ಡಬಲ್ ಇಂಜಿನ್ ಸರಕಾರದ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ಯುಪಿ, ಗುಜರಾತ್ ನಲ್ಲಿದೆ” -ಇನಾಯತ್ ಅಲಿ Read More »

ವಿರಾಜಪೇಟೆ: ವರ್ತಕನಿಗೆ ಗುಂಡು ಹೊಡೆದ ನಿವೃತ ಎಸ್ಪಿ ಮಗ

Samagra news: ನಿವೃತ ಎಸ್ಪಿ ಮಗನೋರ್ವ ವರ್ತಕನಿಗೆ ಗುಂಡು ಹೊಡೆದ ಘಟನೆ ವಿರಾಜಪೇಟೆ ತಾಲೂಕು ಅಮ್ಮತ್ತಿಯಲ್ಲಿ ನಡೆದಿದೆ. ನಿವೃತ ಎಸ್ಪಿ ನೆಲ್ಲಮಕ್ಕಡ ಚಿನ್ನಪ್ಪ ಎಂಬುವವರ ಪುತ್ರ ರಂಜಿತ್ ಎಂಬಾತ ಪ್ರಕರಣ ಅರೋಪಿ. ಈತ ಬೋಪಣ್ಣ ಎಂಬ ವರ್ತಕ ಮೇಲೆ ಸರ್ವಿಸ್ ರಿವಾಲ್ವರ್ ನಿಂದ ಮೂರು ಸುತ್ತಿನ ಗುಂಡು ಹಾರಿಸಿದ್ದಾನೆ. ಈ ವೇಳೆ ಕೂದುಲೆಳೆಯಲ್ಲಿ ಪ್ರಾಣಾಪಾಯದಿಂದ ವರ್ತಕ ಬೋಪಣ್ಣ ಪಾರಾಗಿದ್ದಾರೆ. ಆರೋಪಿ ರಂಜಿತ್ ಸಣ್ಣಪುಟ್ಟ ಗಾಯಗೊಂಡಿದ್ದು ಅಮ್ಮತ್ತಿ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಆಸ್ಪತ್ರೆಯಲ್ಲೇ ಪೊಲೀಸರು ಬೀಡುಬಿಟ್ಟಿದ್ದಾರೆ

ವಿರಾಜಪೇಟೆ: ವರ್ತಕನಿಗೆ ಗುಂಡು ಹೊಡೆದ ನಿವೃತ ಎಸ್ಪಿ ಮಗ Read More »

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

Samagra news: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ. ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪಿಸಿದರು. ಸಿದ್ದರಾಮಯ್ಯನವರ ಆಡಳಿತದಲ್ಲಿ ಶಿಕ್ಷಕರ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ, ರೀಡೂ ಮುಂತಾದಂತಹ ಹಗರಣಗಳು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ Read More »

ಎಪ್ರಿಲ್ 27 ರಂದು ರಾಹುಲ್ ಗಾಂಧಿ ಮಂಗಳೂರಿಗೆ

ಸಮಗ್ರ ನ್ಯೂಸ್: ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಎಪ್ರಿಲ್ 27ರಂದು ಕಾಪುವಿಗೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿನ ಮೀನುಗಾರರ ಜೊತೆಗಿನ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎ.24ರಂದು ಮಂಗಳೂರಿಗೆ ಆಗಮಿಸಿ ಎ.25ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಿಗೆ

ಎಪ್ರಿಲ್ 27 ರಂದು ರಾಹುಲ್ ಗಾಂಧಿ ಮಂಗಳೂರಿಗೆ Read More »

ಸುಳ್ಯ: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಕಂದಮ್ಮ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಪುಟ್ಟ ಕಂದಮ್ಮ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ಮಾ.22ರ ರಾತ್ರಿ ಸಂಭವಿಸಿದೆ. ಮೃತಪಟ್ಟ ಕಂದಮ್ಮನನ್ನು ಸುಳ್ಯ ಬೋರುಗುಡ್ಡೆ ನಿವಾಸಿ ಮುನಾಫರ್ ಶಾ ರ ಮಗಳು ಆಯಿಷಾ ಮಿಝಾ(3) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿತ ಅನಾರೋಗ್ಯದಿಂದ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ಶುಕ್ರವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ. ಪವಿತ್ರ ಈದುಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲೀಗ ಶೋಕ ಆವರಿಸಿದೆ.

ಸುಳ್ಯ: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಕಂದಮ್ಮ ಮೃತ್ಯು Read More »