ಸಮಗ್ರ ಸಮಾಚಾರ

ಪುತ್ತೂರು: ಅಕ್ರಮ-ಸಕ್ರಮ ಮಂಜೂರಾತಿಗೆ ಲಂಚ ಪಡೆದ ಆರೋಪ| 47 ಜನ ಲಂಚ ನೀಡಿದವರನ್ನು ಕರೆತನ್ನಿ ಎಂದು ಶಾಸಕ ರೈಗೆ ಬಿಜೆಪಿ ಟಾಂಗ್

ಸಮಗ್ರ ನ್ಯೂಸ್: ಅಕ್ರಮ-ಸಕ್ರಮ ಮಂಜೂರಾತಿಗೆ ಮಾಜಿ ಶಾಸಕ ಲಂಚ ಪಡೆದಿದ್ದು ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದ ಪುತ್ತೂರು ಶಾಸಕ ಅಶೋಕ್ ರೈ ಹೇಳಿಕೆಗೆ ಇದೀಗ ಬಿಜೆಪಿ ಪ್ರತಿಸವಾಲು ಹಾಕಿದ್ದು, ಶಾಸಕರು ಲಂಚ ನೀಡಿದ್ದ 47 ಜನರನ್ನು ಕರೆದುಕೊಂಡು ಬರಲಿ ಎಂದಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರ್ ಪುತ್ತೂರು ಶಾಸಕರು ನೀಡಿದ ಸವಾಲನನ್ನು ಸ್ವೀಕರಿಸುವುದಾಗಿ ಹೇಳಿದ್ದು, ಶಾಸಕರು ಲಂಚ ನೀಡಿದ 47 […]

ಪುತ್ತೂರು: ಅಕ್ರಮ-ಸಕ್ರಮ ಮಂಜೂರಾತಿಗೆ ಲಂಚ ಪಡೆದ ಆರೋಪ| 47 ಜನ ಲಂಚ ನೀಡಿದವರನ್ನು ಕರೆತನ್ನಿ ಎಂದು ಶಾಸಕ ರೈಗೆ ಬಿಜೆಪಿ ಟಾಂಗ್ Read More »

ಒಂದೆಡೆ ಧರ್ಮಸ್ಥಳಕ್ಕೆ ಜೈ, ಮತ್ತೊಂದೆಡೆ ಸೌಜನ್ಯ ಪರ, ಬಿಜೆಪಿಯವರ ನಿಲುವೇ ದ್ವಂದ್ವ ರಾಜಕೀಯ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರದಿಗಾರರಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಈಗ ಧರ್ಮಸ್ಥಳ ಪ್ರಕರಣವನ್ನು ಈಗ ಎನ್. ಐ. ಎ ತನಿಖೆ ಮಾಡಿಸಿ ಎಂದು ಹೇಳುತ್ತಿದ್ದಾರೆ. ಎಸ್.ಐ.ಟಿ ಅವರೂ ಪೊಲೀಸರು, ಎನ್‌.ಐ.ಎ ಅವರೂ ಪೊಲೀಸರು. ನಮ್ಮ ಪೊಲೀಸರ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲವೇ ? ಬಿಜೆಪಿ ಮೊದಲು ತನಿಖೆ ಮಾಡಿ ಎಂದು ಹೇಳಲೇ ಇಲ್ಲ. ಉತ್ಖನನ ಕಾರ್ಯ ನಡೆದ ಮೇಲೆ

ಒಂದೆಡೆ ಧರ್ಮಸ್ಥಳಕ್ಕೆ ಜೈ, ಮತ್ತೊಂದೆಡೆ ಸೌಜನ್ಯ ಪರ, ಬಿಜೆಪಿಯವರ ನಿಲುವೇ ದ್ವಂದ್ವ ರಾಜಕೀಯ – ಸಿಎಂ ಸಿದ್ದರಾಮಯ್ಯ Read More »

‘ಡೂ ಯು ನೋ ಕನ್ನಡ?’ ಎಂದ ಸಿಎಂ ಸಿದ್ದರಾಮಯ್ಯ| ಹೃದಯ ಗೆದ್ದ ರಾಷ್ಟ್ರಪತಿ ಮುರ್ಮು ಉತ್ತರ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವೆ ಸೋಮವಾರ ಭಾಷಾ ಜುಗಲ್ ಬಂದಿ ನಡೆಯಿತು. ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಲ್ಲಿ ಸೋಮವಾರ ನಡೆದ ವಜ್ರ ಮಹೋತ್ಸವ ಸಮಾರಂಭದಲ್ಲಿ ಈ ಘಟನೆ ಜರುಗಿತು. ಮೊದಲಿಗೆ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಭಾಷಣ ಪ್ರಾರಂಭಿಸುವ ಮುನ್ನ ‘ಯು ನೋ ಕನ್ನಡ?(ನಿಮಗೆ ಕನ್ನಡ ಬರುತ್ತದೆಯೇ?)’ ಎಂದು ರಾಷ್ಟ್ರಪತಿಗಳಿಗೆ ತಮಾಷೆಯಿಂದ ಕೇಳಿದರು. ಸಿಎಂ ಪ್ರಶ್ನೆಗೆ ರಾಷ್ಟ್ರಪತಿ ಹಾಗೂ ವೇದಿಕೆಯ ಆಹ್ವಾನಿತರು ನಕ್ಕರು. ಬಳಿಕ

‘ಡೂ ಯು ನೋ ಕನ್ನಡ?’ ಎಂದ ಸಿಎಂ ಸಿದ್ದರಾಮಯ್ಯ| ಹೃದಯ ಗೆದ್ದ ರಾಷ್ಟ್ರಪತಿ ಮುರ್ಮು ಉತ್ತರ Read More »

ಧರ್ಮಸ್ಥಳ: ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ| ‘ಮಗಳ ಹೆಸರಲ್ಲಿ ‌ಹಣ ಮಾಡಿ ಮನೆ ಕಟ್ಟಿಸಿದೆ’ ಎಂದು ನಿಮ್ಮ ಪಕ್ಷದವರೇ ಟೀಕಿಸುತ್ತಾರೆ ಎಂದ ಕುಸುಮಾವತಿ

ಸಮಗ್ರ ನ್ಯೂಸ್: 2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಸೌಜನ್ಯ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ತೆರಳಿದರು. ಅಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. ತಮ್ಮ ಮಗಳ ಸಾವಿಗೆ ನ್ಯಾಯ ಕೇಳಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಕುಸುಮಾವತಿ

ಧರ್ಮಸ್ಥಳ: ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ| ‘ಮಗಳ ಹೆಸರಲ್ಲಿ ‌ಹಣ ಮಾಡಿ ಮನೆ ಕಟ್ಟಿಸಿದೆ’ ಎಂದು ನಿಮ್ಮ ಪಕ್ಷದವರೇ ಟೀಕಿಸುತ್ತಾರೆ ಎಂದ ಕುಸುಮಾವತಿ Read More »

ಇತಿಹಾಸದ ಪುಟ ಸೇರಿದ ಬಿಬಿಎಂಪಿ| ಇಂದಿನಿಂದ ‘ಗ್ರೇಟರ್ ಬೆಂಗಳೂರು’ ಆಡಳಿತ

ಸಮಗ್ರ ನ್ಯೂಸ್: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಡಳಿತ ಮಂಗಳವಾರದಿಂದ ಚಾಲನೆಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ನಿಯಮ ರೂಪಿಸಿರುವ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಹಾಗಾಗಿ ಇಷ್ಟು ದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂದು ಗುರುತಿಸಲ್ಪಡುತ್ತಿದ್ದದ್ದು ಇದೀಗ ಇತಿಹಾಸದ ಪುಟ ಸೇರಿದೆ. ಬಿಬಿಎಂಪಿ ಆಡಳಿತ ವ್ಯಾಪ್ತಿಯನ್ನು 5 ನಗರ ಪಾಲಿಕೆಗಳಿಗೆ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ ಈ ನಗರ ಪಾಲಿಕೆಗಳ ಮೇಲೆ ನಿಗಾ ವಹಿಸಲು ಜಿಬಿಎ ರಚಿಸಲಾಗಿದ್ದು, ಮಂಗಳವಾರದಿಂದ

ಇತಿಹಾಸದ ಪುಟ ಸೇರಿದ ಬಿಬಿಎಂಪಿ| ಇಂದಿನಿಂದ ‘ಗ್ರೇಟರ್ ಬೆಂಗಳೂರು’ ಆಡಳಿತ Read More »

ಅಪಘಾನಿಸ್ತಾನದಲ್ಲಿ ಭಾರೀ ಭೂಕಂಪ| 250 ಮಂದಿ ಸಾವು; ಅಪಾರ ನಷ್ಟ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ಭಾನುವಾರ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, 250 ಕ್ಕೂ ಹೆಚ್ಚು ಜೋರು ಸಾವನ್ನಪ್ಪಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ಮಾಹಿತಿ ಸಚಿವಾಲಯ ವರದಿ ಮಾಡಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಭೂಕಂಪವು 00:47:41 IST ಕ್ಕೆ ಸಂಭವಿಸಿದೆ, ಇದರ ಕೇಂದ್ರಬಿಂದು ಅಕ್ಷಾಂಶ 34.50N ಮತ್ತು ರೇಖಾಂಶ 70.81E ನಲ್ಲಿ 160 ಕಿ.ಮೀ ಆಳದಲ್ಲಿ ಪತ್ತೆ ಮಾಡಲಾಗಿದೆ. ನಂಗರ್ಹಾರ್ ಸಾರ್ವಜನಿಕ ಆರೋಗ್ಯ ಇಲಾಖೆಯ ವಕ್ತಾರ

ಅಪಘಾನಿಸ್ತಾನದಲ್ಲಿ ಭಾರೀ ಭೂಕಂಪ| 250 ಮಂದಿ ಸಾವು; ಅಪಾರ ನಷ್ಟ Read More »

ಬಂಟ್ವಾಳ: ಯಕ್ಷಗಾನವನ್ನು ಅರ್ಧಕ್ಕೇ ನಿಲ್ಲಿಸಿದ ಪೊಲೀಸರು| ವಿಡಿಯೋ ವೈರಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಭಾರೀ ಆಕ್ರೋಶ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಸಜೀಪಮುನ್ನೂರು ಎಂಬಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಅರ್ಧದಲ್ಲಿಯೇ ನಿಲ್ಲಿಸಿದ ವಿಚಾರ ಈಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸುವಂತಿಲ್ಲ ಎಂಬ ನಿಯಮವನ್ನು ಮುಂದಿಟ್ಟು ಯಕ್ಷಗಾನ, ನಾಟಕ ಮತ್ತಿತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಿಲ್ಲಿಸುವ ಘಟನೆಗಳು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚೆಚ್ಚು ವರದಿಯಾಗುತ್ತಿವೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಯಕ್ಷಗಾನ ಪ್ರದರ್ಶನಗಳನ್ನು ಅರ್ಧದಲ್ಲಿಯೇ ನಿಲ್ಲಿಸಿದ

ಬಂಟ್ವಾಳ: ಯಕ್ಷಗಾನವನ್ನು ಅರ್ಧಕ್ಕೇ ನಿಲ್ಲಿಸಿದ ಪೊಲೀಸರು| ವಿಡಿಯೋ ವೈರಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಭಾರೀ ಆಕ್ರೋಶ Read More »

ಅಪ್ರಾಪ್ತ ಬಾಲಕನಿಂದ ಬಾಲಕಿ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಅಪ್ರಾಪ್ತೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರೂ ವಸತಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ 8ನೇ ತರಾಗತಿಯ ವಿದ್ಯಾರ್ಥಿ ಅತ್ಯಾಚಾರವೆಸಗಿದ್ದಾನೆ. ಸಂತ್ರಸ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಇಳಕಲ್ ಗ್ರಾಮೀಣ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಅಪ್ರಾಪ್ತ ಬಾಲಕನಿಂದ ಬಾಲಕಿ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಅಪ್ರಾಪ್ತೆ Read More »

ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ಸುದೀಪ್ ಅವರು ಬಿಗ್​​ಬಾಸ್ ಸೀಸನ್ 12 ಪ್ರಾರಂಭವಾಗುವ ದಿನಾಂಕವನ್ನು ಘೋಷಣೆ ಮಾಡಿಬಿಟ್ಟಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಸುದೀಪ್ ಈ ಬಾರಿಯ ಬಿಗ್​​ಬಾಸ್ ಪ್ರಾರಂಭದ ದಿನಾಂಕ ಯಾವುದೆಂದು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು (ಆಗಸ್ಟ್ 31) ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,

ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ಮುಹೂರ್ತ ಫಿಕ್ಸ್ Read More »

ಕೊಲ್ಲೂರಿಗೆ ಬಂದಿದ್ದ ಬೆಂಗಳೂರಿನ ‌ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಕಳೆದ 3 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಇಲ್ಲಿನ ಮಾವಿನಕಾರು ಸೇತುವೆ ಬಳಿ ಸೌಪರ್ಣಿಕಾ ನದಿಯಲ್ಲಿ ಆ. 30ರಂದು ಪತ್ತೆಯಾಗಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ.ಆರ್‌. ಗೋವಿಂದರಾಜು ಅವರ ಪ್ರಥಮ ಪುತ್ರಿ ವಸುಧಾ 28ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ಹೋಗಿದ್ದರು. ಬಳಿಕ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಆ. 29ರಂದು ಮುಳುಗು ತಜ್ಞ ಈಶ್ವರ ಮಲ್ಪೆ, ಅಗ್ನಿಶಾಮಕ ದಳ

ಕೊಲ್ಲೂರಿಗೆ ಬಂದಿದ್ದ ಬೆಂಗಳೂರಿನ ‌ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ Read More »