ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಆ.23 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಇಂಜಾಡಿ ಅವರು ವಹಿಸಿದ್ದರು .ಕಾರ್ಯಕ್ರಮದ ಉದ್ಘಾಟಕರಾಗಿ, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅರುಣ್ ಪ್ರಕಾಶ್ ಅವರು ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆಗಳನ್ನು ಹಾಗೂ ಬದಲಾವಣೆಗಳನ್ನು […]










