ಸಮಗ್ರ ಸಮಾಚಾರ

ಅಪಘಾನಿಸ್ತಾನದಲ್ಲಿ ಭಾರೀ ಭೂಕಂಪ| 250 ಮಂದಿ ಸಾವು; ಅಪಾರ ನಷ್ಟ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ಭಾನುವಾರ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, 250 ಕ್ಕೂ ಹೆಚ್ಚು ಜೋರು ಸಾವನ್ನಪ್ಪಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ಮಾಹಿತಿ ಸಚಿವಾಲಯ ವರದಿ ಮಾಡಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಭೂಕಂಪವು 00:47:41 IST ಕ್ಕೆ ಸಂಭವಿಸಿದೆ, ಇದರ ಕೇಂದ್ರಬಿಂದು ಅಕ್ಷಾಂಶ 34.50N ಮತ್ತು ರೇಖಾಂಶ 70.81E ನಲ್ಲಿ 160 ಕಿ.ಮೀ ಆಳದಲ್ಲಿ ಪತ್ತೆ ಮಾಡಲಾಗಿದೆ. ನಂಗರ್ಹಾರ್ ಸಾರ್ವಜನಿಕ ಆರೋಗ್ಯ ಇಲಾಖೆಯ ವಕ್ತಾರ […]

ಅಪಘಾನಿಸ್ತಾನದಲ್ಲಿ ಭಾರೀ ಭೂಕಂಪ| 250 ಮಂದಿ ಸಾವು; ಅಪಾರ ನಷ್ಟ Read More »

ಬಂಟ್ವಾಳ: ಯಕ್ಷಗಾನವನ್ನು ಅರ್ಧಕ್ಕೇ ನಿಲ್ಲಿಸಿದ ಪೊಲೀಸರು| ವಿಡಿಯೋ ವೈರಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಭಾರೀ ಆಕ್ರೋಶ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಸಜೀಪಮುನ್ನೂರು ಎಂಬಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಅರ್ಧದಲ್ಲಿಯೇ ನಿಲ್ಲಿಸಿದ ವಿಚಾರ ಈಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸುವಂತಿಲ್ಲ ಎಂಬ ನಿಯಮವನ್ನು ಮುಂದಿಟ್ಟು ಯಕ್ಷಗಾನ, ನಾಟಕ ಮತ್ತಿತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಿಲ್ಲಿಸುವ ಘಟನೆಗಳು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚೆಚ್ಚು ವರದಿಯಾಗುತ್ತಿವೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಯಕ್ಷಗಾನ ಪ್ರದರ್ಶನಗಳನ್ನು ಅರ್ಧದಲ್ಲಿಯೇ ನಿಲ್ಲಿಸಿದ

ಬಂಟ್ವಾಳ: ಯಕ್ಷಗಾನವನ್ನು ಅರ್ಧಕ್ಕೇ ನಿಲ್ಲಿಸಿದ ಪೊಲೀಸರು| ವಿಡಿಯೋ ವೈರಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಭಾರೀ ಆಕ್ರೋಶ Read More »

ಅಪ್ರಾಪ್ತ ಬಾಲಕನಿಂದ ಬಾಲಕಿ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಅಪ್ರಾಪ್ತೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರೂ ವಸತಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ 8ನೇ ತರಾಗತಿಯ ವಿದ್ಯಾರ್ಥಿ ಅತ್ಯಾಚಾರವೆಸಗಿದ್ದಾನೆ. ಸಂತ್ರಸ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಇಳಕಲ್ ಗ್ರಾಮೀಣ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಅಪ್ರಾಪ್ತ ಬಾಲಕನಿಂದ ಬಾಲಕಿ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಅಪ್ರಾಪ್ತೆ Read More »

ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ಸುದೀಪ್ ಅವರು ಬಿಗ್​​ಬಾಸ್ ಸೀಸನ್ 12 ಪ್ರಾರಂಭವಾಗುವ ದಿನಾಂಕವನ್ನು ಘೋಷಣೆ ಮಾಡಿಬಿಟ್ಟಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಸುದೀಪ್ ಈ ಬಾರಿಯ ಬಿಗ್​​ಬಾಸ್ ಪ್ರಾರಂಭದ ದಿನಾಂಕ ಯಾವುದೆಂದು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು (ಆಗಸ್ಟ್ 31) ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,

ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ಮುಹೂರ್ತ ಫಿಕ್ಸ್ Read More »

ಕೊಲ್ಲೂರಿಗೆ ಬಂದಿದ್ದ ಬೆಂಗಳೂರಿನ ‌ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಕಳೆದ 3 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಇಲ್ಲಿನ ಮಾವಿನಕಾರು ಸೇತುವೆ ಬಳಿ ಸೌಪರ್ಣಿಕಾ ನದಿಯಲ್ಲಿ ಆ. 30ರಂದು ಪತ್ತೆಯಾಗಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ.ಆರ್‌. ಗೋವಿಂದರಾಜು ಅವರ ಪ್ರಥಮ ಪುತ್ರಿ ವಸುಧಾ 28ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ಹೋಗಿದ್ದರು. ಬಳಿಕ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಆ. 29ರಂದು ಮುಳುಗು ತಜ್ಞ ಈಶ್ವರ ಮಲ್ಪೆ, ಅಗ್ನಿಶಾಮಕ ದಳ

ಕೊಲ್ಲೂರಿಗೆ ಬಂದಿದ್ದ ಬೆಂಗಳೂರಿನ ‌ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 31.08.25 ರಿಂದ 06.09.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರವು ಬಹಳ ಅನುಕೂಲಕರವಾಗಿರಲಿದೆ. ನಿಮ್ಮೆಲ್ಲಾ ಕೆಲಸಗಳಲ್ಲಿ ಶುಭಕರ ಪ್ರಯತ್ನಗಳು, ಫಲಿತಾಂಶಗಳ ನೀವು ನೋಡಬಹುದು. ಮೇಷ ರಾಶಿಯವರು ಈ ವಾರ ತಮ್ಮ

ದ್ವಾದಶ ರಾಶಿಗಳ ವಾರಭವಿಷ್ಯ Read More »

ನಿರಂತರ 216 ಗಂಟೆಗಳ ಭರತನಾಟ್ಯ| ವಿಶ್ವದಾಖಲೆ ಬರೆದ ಉಡುಪಿಯ ವಿದುಷಿ ದೀಕ್ಷಾ

ಸಮಗ್ರ ನ್ಯೂಸ್: ಕಳೆದ 9 ದಿನಗಳಿಂದ ಒಟ್ಟು 216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶಿಸುವ ಮೂಲಕ ವಿದುಷಿ ದೀಕ್ಷಾ ವಿ. ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಮಣಿಪಾಲ ರತ್ನ ಸಂಜೀವ ಕಲಾ ಮಂಡಲದ ನೇತೃತ್ವದಲ್ಲಿ ಬ್ರಹ್ಮಾವರ ಆರೂರು ಗ್ರಾಮದ ವಿದುಷಿ ದೀಕ್ಷಾ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪದವಿ ಕಾಲೇಜಿನಲ್ಲಿ ಆ.21ರಂದು ಮಧ್ಯಾಹ್ನ 3.30ಗಂಟೆಗೆ ಆರಂಭಿಸಿದ ಭರತ ನಾಟ್ಯವನ್ನು ಆ.30ರ ಮಧ್ಯಾಹ್ನ 3.30ಕ್ಕೆ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ

ನಿರಂತರ 216 ಗಂಟೆಗಳ ಭರತನಾಟ್ಯ| ವಿಶ್ವದಾಖಲೆ ಬರೆದ ಉಡುಪಿಯ ವಿದುಷಿ ದೀಕ್ಷಾ Read More »

ಶೌಚಾಲಯದಲ್ಲಿ ವಿದ್ಯಾರ್ಥಿನಿ‌ ಹೆರಿಗೆಯಾದ ಪ್ರಕರಣ| ಪ್ರಮುಖ‌ ಆರೋಪಿ‌ ಅರೆಸ್ಟ್

ಸಮಗ್ರ ನ್ಯೂಸ್: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಯಾದಗಿರಿ ವಸತಿ ಶಾಲೆ ಹೆರಿಗೆ ಕೇಸ್ ಬಗ್ಗೆ ಇದೀಗ ಬಿಗ್ ಅಪ್ಡೇಟ್ ದೊರೆತಿದೆ. ಯಾದಗಿರಿಯ ಶಹಾಪುರ‌ದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ ಸಂಬಂಧ ಪ್ರಮುಖ A1 ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ

ಶೌಚಾಲಯದಲ್ಲಿ ವಿದ್ಯಾರ್ಥಿನಿ‌ ಹೆರಿಗೆಯಾದ ಪ್ರಕರಣ| ಪ್ರಮುಖ‌ ಆರೋಪಿ‌ ಅರೆಸ್ಟ್ Read More »

ಶೌಚಾಲಯದಲ್ಲಿ ವಿದ್ಯಾರ್ಥಿನಿ‌ ಹೆರಿಗೆಯಾದ ಪ್ರಕರಣ| ಪ್ರಮುಖ‌ ಆರೋಪಿ‌ ಅರೆಸ್ಟ್

ಸಮಗ್ರ ನ್ಯೂಸ್: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಯಾದಗಿರಿ ವಸತಿ ಶಾಲೆ ಹೆರಿಗೆ ಕೇಸ್ ಬಗ್ಗೆ ಇದೀಗ ಬಿಗ್ ಅಪ್ಡೇಟ್ ದೊರೆತಿದೆ. ಯಾದಗಿರಿಯ ಶಹಾಪುರ‌ದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ ಸಂಬಂಧ ಪ್ರಮುಖ A1 ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ

ಶೌಚಾಲಯದಲ್ಲಿ ವಿದ್ಯಾರ್ಥಿನಿ‌ ಹೆರಿಗೆಯಾದ ಪ್ರಕರಣ| ಪ್ರಮುಖ‌ ಆರೋಪಿ‌ ಅರೆಸ್ಟ್ Read More »

ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡುವುದನ್ನು ಕಣ್ಣಾರೆ ಕಂಡಿದ್ದೇನೆ| ಸೌಜನ್ಯ ಪ್ರಕರಣದ ಕುರಿತು ಮಂಡ್ಯ ಮೂಲದ ಮಹಿಳೆಯಿಂದ ಎಸ್ಐಟಿ‌ಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ಚಿನ್ನಯ್ಯ ದೂರು ನೀಡಿದ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ವಿಚಾರಣೆ ಭರದಿಂದ ಸಾಗಿದೆ. ಇನ್ನು ಚಿನ್ನಯ್ಯನನ್ನು ಆರೋಪಿಯನ್ನಾಗಿ ವಶಕ್ಕೆ ಪಡೆದಿರುವ ಎಸ್‌ಐಟಿ ಧರ್ಮಸ್ಥಳ ಗ್ರಾಮ ಪಂಚಾಯಿತಿಯಲ್ಲೂ ಸಹ ಹಲವು ದಾಖಲೆಗಳ ಹುಡುಕಾಟ ನಡೆಸಿದೆ. ಅಲ್ಲದೇ ಸುಜಾತ ಭಟ್‌ ಎಂಬ ವೃದ್ಧೆ ಸಹ ತನ್ನ ಮಗಳು ಅನನ್ಯ ಭಟ್‌ ಇದೇ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದು, ಆಕೆಯ ಅಸ್ತಿಪಂಜರ ಹುಡುಕಿಕೊಡಿ ಎಂದು ಬೇಡಿಕೆ

ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡುವುದನ್ನು ಕಣ್ಣಾರೆ ಕಂಡಿದ್ದೇನೆ| ಸೌಜನ್ಯ ಪ್ರಕರಣದ ಕುರಿತು ಮಂಡ್ಯ ಮೂಲದ ಮಹಿಳೆಯಿಂದ ಎಸ್ಐಟಿ‌ಗೆ ದೂರು Read More »