ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು| ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್| ಹೇಳಿಕೆಗೆ ನಾನಿನ್ನೂ ಬದ್ಧವೆಂದ ಹರಿಪ್ರಸಾದ್|
ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ ಆಕ್ಟೋಪಸ್ ಇದ್ದಂತೆ. […]