ರಾಜಕೀಯ

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ‌ ಜಮೀರ್ ಅಹಮದ್ ನೇಮಕ

ಸಮಗ್ರ ನ್ಯೂಸ್: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಜಮೀರ್ ಅಹ್ಮದ್ ಖಾನ್, ಮಾನ್ಯ ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದೆ.

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ‌ ಜಮೀರ್ ಅಹಮದ್ ನೇಮಕ Read More »

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ

ಸಮಗ್ರ ನ್ಯೂಸ್: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ Read More »

ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾಗಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ Read More »

ಮೈತ್ರಿಗೆ ಟಾಟಾ ಹೇಳಿದ ಆಮ್ ಆದ್ಮಿ/ 2025ರ ವಿಧಾನ ಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದು ಬಿಜೆಪಿ ಮಿತ್ರ ಪಕ್ಷಗಳ ನೆರವಿನಿಂದ ರಚಿಸುವ ತಯಾರಿಯಲ್ಲಿದ್ದರೆ ಇನ್ನೊಂದೆಡೆ ಇಂಡಿಯಾ ಮೈತ್ರಿ ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ. 2025ರ ವಿಧಾನಸಭಾ ಚುನಾವಣೆಗೆ ಆಪ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ ಎಂದು ಆಪ್ ಸಚಿವ ಗೋಪಾಲ್ ರೈ ಘೋಷಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆಗಾಗಿ ವಿಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಆಮ್ ಆದ್ಮಿ ಪಾರ್ಟಿ ಲೋಕಸಭಾ ಚುನಾವಣೆಗಾಗಿ ಮಾಡಿದ ಮೈತ್ರಿಗೆ ಸಂಪೂರ್ಣ ಬೆಂಬಲ ನೀಡಿ

ಮೈತ್ರಿಗೆ ಟಾಟಾ ಹೇಳಿದ ಆಮ್ ಆದ್ಮಿ/ 2025ರ ವಿಧಾನ ಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧೆ Read More »

ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಕೆ.ಗೋವಿಂದರಾಜ್, ಜಗದೇವ್ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್.ಭೋಸರಾಜು, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಜೆಪಿ ಪಕ್ಷದಿಂದ ಸಿ.ಟಿ.ರವಿ, ಎನ್.ರವಿಕುಮಾರ್, ಮುಳೆ ಮಾರುತಿರಾವ್ ಹಾಗೂ ಜೆಡಿಎಸ್ ಪಕ್ಷದಿಂದ ಟಿ.ಎನ್.ಜವರಾಯಿ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ Read More »

ಲೋಕಸಭೆ ಚುನಾವಣೆ/ ತಮಿಳುನಾಡಿನಲ್ಲಿ ಮತ ಪ್ರಮಾಣ ಹೆಚ್ಚಿಸಿಕೊಂಡ ಬಿಜೆಪಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ 292 ಸ್ಥಾನಗಳನ್ನು ಗಳಿಸಿದ್ದು, ಇಂಡಿಯ ಬಣ 233 ಸ್ಥಾನಗಳನ್ನು ಗಳಿಸಿದೆ. ಇದರ ಜೊತೆಗೆ ದಕ್ಷಿಣ ಭಾರತದ ಕೇರಳದಲ್ಲಿ ಕೊನೆಗೂ ಖಾತೆ ತೆರೆಯಲು ಯಶಸ್ವಿಯಾಗಿರುವ ಬಿಜೆಪಿ 1 ಸೀಟು ಗೆದ್ದುಕೊಂಡಿದೆ. ಆದ್ರೆ ತಮಿಳುನಾಡಿನ ಮತದಾರರು ಕೈಹಿಡಿಯಲಿಲ್ಲವಾದರೂ ರಾಜ್ಯದಲ್ಲಿ ಬಿಜೆಪಿಗೆ ದೊರೆತ ಮತಗಳ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಬಿಜೆಪಿಗೆ ಇದೇ ಮೊದಲ ಬಾರಿಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತದಾನ ಹಂಚಿಕೆಯಲ್ಲಿ ಸುಮಾರು 4 ಪಟ್ಟು ಹೆಚ್ಚಳ ದಾಖಲಿಸಿದೆ. ಕಳೆದ

ಲೋಕಸಭೆ ಚುನಾವಣೆ/ ತಮಿಳುನಾಡಿನಲ್ಲಿ ಮತ ಪ್ರಮಾಣ ಹೆಚ್ಚಿಸಿಕೊಂಡ ಬಿಜೆಪಿ Read More »

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ ನೀಡಿದ್ದಾರೆ. ಮೋದಿ ಜೊತೆಗೆ ಸಚಿವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆಯನ್ನು ರಾಷ್ಟ್ರಪತಿ ಮುರ್ಮು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ ಜೂ.8 ರಂದು 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ದೆಹಲಿ ಮೂಲಗಳು ಮಾಹಿತಿ ನೀಡಿದೆ. ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ Read More »

ಇದು ಬಿಜೆಪಿಯ ನೈತಿಕ ಸೋಲು/ ಮೋದಿ‌ ವಿರುದ್ಧ ಜನಾದೇಶ ಎಂದ ಖರ್ಗೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಫಲಿತಾಂಶ ಜನತೆಯ ಫಲಿತಾಂಶವಾಗಿದ್ದು ಇದು ಮೋದಿಯವರ ವಿರುದ್ಧ ಜನಾದೇಶ ಎಂಬುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದು ಮೋದಿಯವರ ನೈತಿಕ ಮತ್ತು ರಾಜಕೀಯ ಸೋಲು. ಇದು ಜನರ ಗೆಲುವು, ಪ್ರಜಾಪ್ರಭುತ್ವದ ಗೆಲುವು ಎಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದು ಮೋದಿ, ಜನರ ನಡುವಿನ ಯುದ್ಧ ಎಂದು ನಾವು ಚುನಾವಣೆಗೂ ಮೊದಲೇ ಹೇಳಿದ್ದೆವು. ಈ ಸಲ ಜನ ಯಾರಿಗೂ ಪೂರ್ಣ ಬಹುಮತ ನೀಡಿಲ್ಲ. ಒಬ್ಬ ವ್ಯಕ್ತಿಯ ಮುಖ ಇಟ್ಟುಕೊಂಡು

ಇದು ಬಿಜೆಪಿಯ ನೈತಿಕ ಸೋಲು/ ಮೋದಿ‌ ವಿರುದ್ಧ ಜನಾದೇಶ ಎಂದ ಖರ್ಗೆ Read More »

ಮೈತ್ರಿಕೂಟದ ಜೊತೆ ಚರ್ಚಿಸದೇ ಜೆಡಿಯು, ಟಿಡಿಪಿ ಜೊತೆ ಮೈತ್ರಿಯಿಲ್ಲ – ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ‘ಇಂಡಿಯಾ ಮೈತ್ರಿಕೂಟದ ಪಾಲುದಾರರೊಂದಿಗೆ ಮಾತನಾಡದೆ ಟಿಡಿಪಿ ಮತ್ತು ಜೆಡಿಯು ಜೊತೆಗಿನ ಮೈತ್ರಿ ಬಗ್ಗೆ ಉತ್ತರಿಸುವುದಿಲ್ಲ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ “ಸರ್ಕಾರ ರಚನೆಗೆ ಮುಂದಾಗುವಿರಾ?” ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ನಮ್ಮದು ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಪಕ್ಷ. ನಮ್ಮ ಪಾಲುದಾರರ ಜೊತೆ ಮಾತನಾಡದೇ ಈ ಪ್ರಶ್ನೆಗೆ ಉತ್ತರಿಸುವುದಿಲ್ಲ. ನಾಳೆ ನಮ್ಮ ಒಕ್ಕೂಟದ ಸಭೆ ಇದೆ. ಅಲ್ಲಿ ಎಲ್ಲರ ಅಭಿಪ್ರಾಯಗಳನ್ನು ಕೇಳಿ

ಮೈತ್ರಿಕೂಟದ ಜೊತೆ ಚರ್ಚಿಸದೇ ಜೆಡಿಯು, ಟಿಡಿಪಿ ಜೊತೆ ಮೈತ್ರಿಯಿಲ್ಲ – ರಾಹುಲ್ ಗಾಂಧಿ Read More »

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ಗೆ ಮರ್ಮಾಘಾತ| ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲು| ‘ಕೈ’ ಹಿಡಿಯದ ಗ್ಯಾರಂಟಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್‌ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್‌ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ. ಬೆಂಗಳೂರು ಗ್ರಾಮಾಂತರದಲ್ಲಿ ಹಾಲಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ವಿರುದ್ಧ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ 2,68.094 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ತೇಜಸ್ವಿ ಸೂರ್ಯ,

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ಗೆ ಮರ್ಮಾಘಾತ| ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲು| ‘ಕೈ’ ಹಿಡಿಯದ ಗ್ಯಾರಂಟಿ Read More »