ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’
ಮಂಗಳೂರು: ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಕಂಡುಬರುತ್ತಿರುವ ನೈತಿಕ ಪೊಲೀಸ್ ಗಿರಿ ಬಹಳ ಸೂಕ್ಷ್ಮವಾಗಿರೋ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದ ಅವರು,ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ. […]