ರಾಜಕೀಯ

ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಪ್ರಾತ್ಯಕ್ಷಿಕೆ – ಸಚಿವರು ಭಾಗಿ

ಮಂಗಳೂರು: ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯನ್ನು ಸೆ. 3ರ ಶುಕ್ರವಾರದಂದು ಅಳಿವೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಮೀನುಗಾರಿಕೆ ಇಲಾಖೆಯ ನಿರ್ದೇಶಕರು, ಅಧಿಕಾರಿಗಳು ಈ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು. ಸಚಿವರು ಈ ಸಂದರ್ಭದಲ್ಲಿ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ತಾಂತ್ರಿಕತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನೀರು ಕುಡಿದು ಸಂಭ್ರಮಿಸಿದರು.

ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಪ್ರಾತ್ಯಕ್ಷಿಕೆ – ಸಚಿವರು ಭಾಗಿ Read More »

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹಾಗಾಘಿ ಈ ಪ್ರಕರಣದ ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ. ಈ ರೀತಿ ಘಟನೆ ಆದಾಗ ವಿಪಕ್ಷದವರು ಟೀಕೆ ಮಾಡೋದು ಸಹಜ. ಹಾಗಂತ ಏನೋ ಮಾತಾಡಿ, ಗೊಂದಲ ಮಾಡ್ಕೊಳ್ಳೋದು ಬೇಡ. ಅತ್ಯಾಚಾರ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಹೇಳಿದ್ದಾರೆ. ಬಳಿಕ ಅವರು ನಿಮ್ಮ

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ Read More »

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದಲೇ ರಾಜೀನಾಮೆ| ಬಿಜೆಪಿ ಸಮರ್ಥಕರಿಗೆ ಇದು ಪಾಠವೇ?

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಮುಖಂಡರೊಬ್ಬರು ತಮ್ಮ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ ನಡೆದ ಈ ಘಟನೆ ಈಗ ಚರ್ಚಾಗ್ರಾಸವಾಗಿದೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಶಿವಮೊಗ್ಗ ನಗರದ ಶೇಖರ್ ಎನ್ನುವರು ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಗರದ ಅಶೋಕನಗರದಲ್ಲಿ ಬಿಜೆಪಿ ವತಿಯಿಂದ ವಾರ್ಡ್ ಅಧ್ಯಕ್ಷರ ಮನೆ ಬಾಗಿಲಿಗೆ ತೆರಳಿ ನಾಮಫಲಕವನ್ನು ವಿತರಿಸುವ

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದಲೇ ರಾಜೀನಾಮೆ| ಬಿಜೆಪಿ ಸಮರ್ಥಕರಿಗೆ ಇದು ಪಾಠವೇ? Read More »

ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೆ ತಿರುಗುತ್ತಿದೆ|ಸಿದ್ದರಾಮಯ್ಯನವರ ಸಹ ತಲೆ ತಿರುಗುತ್ತಿದೆ- ಸದಾನಂದ ಗೌಡ ಲೇವಡಿ

ಮಡಿಕೇರಿ: ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೇ ತಿರುಗುತ್ತಿದೆ. ಹೀಗಾಗಿ ಸಿದ್ದರಾಯಮ್ಮನವರ ತಲೆ ತಿರುಗುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆಗಳ ಕ್ಯಾತೆಯಿಂದಾಗಿ ಬೊಮ್ಮಾಯಿ ಅವರ ಸರ್ಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರಿಗೆ ಗೂಟದ ಕಾರು ಬೇಕಾಗಿತ್ತು. ಇದಕ್ಕಿಂತ ದೊಡ್ಡ ಹುದ್ದೆ ಸಿಗುವುದಿಲ್ಲ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಾಗಿತ್ತು. ಹೀಗಾಗಿ ಅವರ ಮನಸ್ಸಿನಲ್ಲಿದ್ದ

ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೆ ತಿರುಗುತ್ತಿದೆ|ಸಿದ್ದರಾಮಯ್ಯನವರ ಸಹ ತಲೆ ತಿರುಗುತ್ತಿದೆ- ಸದಾನಂದ ಗೌಡ ಲೇವಡಿ Read More »

ಇಂದು ಹೈಕಮಾಂಡ್ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ; ಖಾಲಿ ಉಳಿದಿರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ಯೋಚನೆ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಲಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 1.20ಕ್ಕೆ ನೀರಾವರಿ ಸಚಿವ ಗೋವಿಂದ ಕಾರಜೋಳ ಜೊತೆ ಸಿಎಂ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಸಿಎಂ ಜೊತೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯಲ್ಲಿ ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ

ಇಂದು ಹೈಕಮಾಂಡ್ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ; ಖಾಲಿ ಉಳಿದಿರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ಯೋಚನೆ Read More »

ಕೇಂದ್ರ ಸಚಿವ ನಾರಾಯಣ್ ರಾಣೆಯನ್ನು ಬಂಧಿಸಿದ ಮಹಾರಾಷ್ಟ್ರ ‌ಪೊಲೀಸ್

ನಾಸಿಕ್​: ಭಾರತಕ್ಕೆ ಸ್ವಾತಂತ್ರ್ಯ ಬಂದ ವರ್ಷವನ್ನೇ ತಪ್ಪಾಗಿ ಹೇಳಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯ ಕಪಾಳಕ್ಕೆ ಹೊಡೆಯಬೇಕು ಎನ್ನಿಸಿತ್ತು ಎಂದು ಏಕವಚನದಲ್ಲಿ, ಬಹಿರಂಗವಾಗಿ ಬೈದಿದ್ದ ಬಿಜೆಪಿ ನಾಯಕ, ಕೇಂದ್ರ ಸಚಿವ ನಾರಾಯಣ್​ ರಾಣೆ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ರತ್ನಗಿರಿ ಜಿಲ್ಲೆಯ ಚಿಪ್ಲುನ್​ ನಗರದಲ್ಲಿದ್ದ ನಾರಾಯಣ್ ರಾಣೆಯವರನ್ನು ನಾಸಿಕ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಅವರ ವಿರುದ್ಧ ಅದಾಗಲೇ ಪುಣೆ, ನಾಸಿಕ್​​, ಮತ್ತು ರಾಯ್​ಗಡ್​ನ ಮಹಾದ್​​ನಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಮಧ್ಯೆ ಬಂಧನ ಅಥವಾ ಇನ್ಯಾವುದೇ ಬಲವಂತವಾಗಿ

ಕೇಂದ್ರ ಸಚಿವ ನಾರಾಯಣ್ ರಾಣೆಯನ್ನು ಬಂಧಿಸಿದ ಮಹಾರಾಷ್ಟ್ರ ‌ಪೊಲೀಸ್ Read More »

ರೈತರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸೋಮಶೇಖರ್| ಮತ್ತೊಮ್ಮೆ ಅವಳು ರೈತರ ಬಾಗಿಲಿಗೆ ಬರಲುದ್ದಾಳೆ…!

ಚಾಮರಾಜನಗರ : ರಾಜ್ಯದ ಜನತೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ವಿಮಾ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಯಶಸ್ವಿನಿ ಯೋಜನೆಯನ್ನು ಆಯುಷ್ಮಾನ್ ಯೋಜನೆ ಜೊತೆ ವಿಲೀನಗೊಳಿಸಲಾಗಿದೆ. ಈಗ ಅದನ್ನು ಪ್ರತ್ಯೇಕಿಸಲು 300 ಕೋಟಿ ರೂ ಬೇಕಾಗಿರುವುದರಿಂದ ಇಲಾಖೆಯವರು ಒಪ್ಪಿರಲಿಲ್ಲ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಬಾರಿ ಬಜೆಟ್ ನಲ್ಲಿ ಸೇರಿಸಲು ಪ್ರಯತ್ನಿಸಿದ್ದೆ, ಕಾರಣಾಂತರಗಳಿಂದ ಆಗಿರಲಿಲ್ಲ ಈಗ

ರೈತರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸೋಮಶೇಖರ್| ಮತ್ತೊಮ್ಮೆ ಅವಳು ರೈತರ ಬಾಗಿಲಿಗೆ ಬರಲುದ್ದಾಳೆ…! Read More »

ಮುಸ್ಲಿಂ ಮಹಿಳೆಯರ ‘ಹೃದಯ’ ಕದ್ದ ಸಚಿವೆ ಜೊಲ್ಲೆ| ಆರೋಗ್ಯಕ್ಕಾಗಿ ವಿಶೇಷ ಸಹಾಯಧನ|

ಬೆಂಗಳೂರು : ರಾಜ್ಯ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗ ಚಿಕಿತ್ಸೆಗೆ 1 ಲಕ್ಷ ರೂ. ಸಹಾಯಧನ ನೀಡಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಕಮಿಟಿಯಲ್ಲಿ 105 ಕೋಟಿ ಅನುದಾನ ಇದೆ. ಬಡ ಮುಸ್ಲೀಂ ಸಮುದಾಯದವರಿಗೆ ಶೇ 5 %

ಮುಸ್ಲಿಂ ಮಹಿಳೆಯರ ‘ಹೃದಯ’ ಕದ್ದ ಸಚಿವೆ ಜೊಲ್ಲೆ| ಆರೋಗ್ಯಕ್ಕಾಗಿ ವಿಶೇಷ ಸಹಾಯಧನ| Read More »

ಸೆ.13 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ

ಬೆಂಗಳೂರು : ಕೋವಿಡ್ ಕಾರಣದಿಂದಾಗಿ ವಿಳಂಬವಾಗಿದ್ದಂತ ರಾಜ್ಯ ವಿಧಾನಮಂಡಲದ ಅಧಿವೇಶನಕ್ಕೆ, ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶನ ನಡೆಸೋದಕ್ಕೆ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟದಲ್ಲಿ ಸೆಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ, ರಾಜ್ಯ ವಿಧಾನ ಮಂಡಲ ಅಧಿವೇಶನವನ್ನು ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ

ಸೆ.13 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ Read More »

ಮತ್ತೆ ಎಡವಟ್ಟು ಮಾಡಿಕೊಂಡ ಡಿಕೆಶಿ – ಪೇಸ್ ಬುಕ್‌ನಲ್ಲಿ‌ ತಪ್ಪಾಗಿ ಗೀಚಿದ ‘ಬಂಡೆ’

ಬೆಂಗಳೂರು: ಸ್ವಾತಂತ್ರ್ಯದ ಮಹತ್ವದ ಬಗ್ಗೆ ಹೇಳಲು ಹೋಗಿ ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ. ಫೇಸ್​ಬುಕ್​ ಪೇಜ್​ನಲ್ಲಿ ಪೋಸ್ಟ್​ ಹಾಕುವಾಗ ಎಡವಟ್ಟು ಮಾಡಿಕೊಂಡಿದ್ದಾರೆ. 1866 ರಲ್ಲಿ ಮಹಾತ್ಮ ಗಾಂಧಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ರು ಎಂದು ಬರೆದುಕೊಂಡಿದ್ದಾರೆ. 1915, 1920, 1927, 1934, 1936 ರಲ್ಲಿ ಗಾಂಧೀಜಿ ಬೆಂಗಳೂರಿಗೆ ಭೇಟಿ ನೀಡಿದ್ದರು ಎಂದು ತಪ್ಪು ಮಾಹಿತಿ ಕೊಡಲಾಗಿದೆ. ಗಾಂಧೀಜಿಯವರು ಹುಟ್ಟಿದ್ದೇ 1869ರ ಅಕ್ಟೋಬರ್​ 2ರಂದು. ಹೀಗಿರುವಾಗ, 1866 ರ ಹೋರಾಟದಲ್ಲಿ ಗಾಂಧಿ ಪಾಲ್ಗೊಳ್ಳಲು ಹೇಗೆ

ಮತ್ತೆ ಎಡವಟ್ಟು ಮಾಡಿಕೊಂಡ ಡಿಕೆಶಿ – ಪೇಸ್ ಬುಕ್‌ನಲ್ಲಿ‌ ತಪ್ಪಾಗಿ ಗೀಚಿದ ‘ಬಂಡೆ’ Read More »