ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೆ ತಿರುಗುತ್ತಿದೆ|ಸಿದ್ದರಾಮಯ್ಯನವರ ಸಹ ತಲೆ ತಿರುಗುತ್ತಿದೆ- ಸದಾನಂದ ಗೌಡ ಲೇವಡಿ
ಮಡಿಕೇರಿ: ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೇ ತಿರುಗುತ್ತಿದೆ. ಹೀಗಾಗಿ ಸಿದ್ದರಾಯಮ್ಮನವರ ತಲೆ ತಿರುಗುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆಗಳ ಕ್ಯಾತೆಯಿಂದಾಗಿ ಬೊಮ್ಮಾಯಿ ಅವರ ಸರ್ಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರಿಗೆ ಗೂಟದ ಕಾರು ಬೇಕಾಗಿತ್ತು. ಇದಕ್ಕಿಂತ ದೊಡ್ಡ ಹುದ್ದೆ ಸಿಗುವುದಿಲ್ಲ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಾಗಿತ್ತು. ಹೀಗಾಗಿ ಅವರ ಮನಸ್ಸಿನಲ್ಲಿದ್ದ […]










