ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ
ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹಾಗಾಘಿ ಈ ಪ್ರಕರಣದ ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ. ಈ ರೀತಿ ಘಟನೆ ಆದಾಗ ವಿಪಕ್ಷದವರು ಟೀಕೆ ಮಾಡೋದು ಸಹಜ. ಹಾಗಂತ ಏನೋ ಮಾತಾಡಿ, ಗೊಂದಲ ಮಾಡ್ಕೊಳ್ಳೋದು ಬೇಡ. ಅತ್ಯಾಚಾರ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಹೇಳಿದ್ದಾರೆ. ಬಳಿಕ ಅವರು ನಿಮ್ಮ […]










