ರಾಜಕೀಯ

ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ!

ಸಮಗ್ರ ನ್ಯೂಸ್: ಚಕ್ರವರ್ತಿ ಸೂಲಿಬೆಲೆಯ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ. ನಮೋಬ್ರಿಗೇಡ್ 2.O ಇಷ್ಟು ದಿನ ಮೋದಿ ಪ್ರಧಾನಿಯಾಗಲು ಏನೇನು ಪ್ರಯತ್ನ ಮಾಡಬಹುದೋ, ಆ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ರಾಜಕೀಯಕ್ಕಾಗಿ ಅಷ್ಟೇ ಬ್ರಿಗೇಡ್ ನಡೆಸಲು ಇಷ್ಟವಿಲ್ಲವೆಂದು, ಚುನಾವಣೆ ಮುಗಿದ ಬಳಿಕವೇ, ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಜೂನ್ 25ಕ್ಕೆ ನಮೋ ಬ್ರಿಗೇಡ್ ಲಾಂಚ್ ಆಗಿತ್ತು. ಬಳಿಕ ರಾಜ್ಯದ ಹಲವು ಜಿಲ್ಲೆಗಳಿಗೆ ನಾನೇ ಹೋಗಿ ಬೈಠಕ್‌ಗಳನ್ನು ಮಾಡಿದ್ದೇನೆ. […]

ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ! Read More »

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ

ಸಮಗ್ರ ನ್ಯೂಸ್: ಯಾದಗಿರಿಯ ಸುರಪುರ ಉಪಚುನಾವಣೆ ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದೆ. ಪರಸ್ಪರ ಎರಡು ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.ಇದರಿಂದ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿ ಪೊಲೀಸರು

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ Read More »

ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಎಐಸಿಸಿ ವಕ್ತಾರೆ, ರಾಜಸ್ಥಾನದ ನಾಯಕಿ ರಾಧಿಕಾ ಖೇರಾ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ರಾಮನ ಭಕ್ತಿ ಎಂಬ ಕಾರಣಕ್ಕೆ, ರಾಮಲಲಾನ ದರುಶನ ಪಡೆದಿದ್ದಕ್ಕೆ ಕೌಶಲ್ಯ ಮಾತೆಯ ಭೂಮಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ರೀತಿ ಕರಾಳವಾಗಿದೆ. ಬಿಜೆಪಿ ಸರ್ಕಾರದ ರಕ್ಷಣೆ ಸಿಗದಿದ್ದರೆ ನಾನು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಇಂದಿನ ಕಾಂಗ್ರೆಸ್ ಮಹಾತ್ಮ ಗಾಂಧಿಯವರ ಕಾಂಗ್ರೆಸ್ ಆಗಿ ಉಳಿದಿಲ್ಲ.

ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ Read More »

ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ‌ಗೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್‌ ಮೇಲೆ ಇದೀಗ ಅದರ ತಂತ್ರವೇ ತಿರುಮಂತ್ರವಾಗಿ ಪರಿಣಮಿಸಿದೆ. ಏಕೆಂದರೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ಆಡಿಯೋ ಆಚೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಕಾರಣ ಎಂದು ವಕೀಲ ದೇವರಾಜೇಗೌಡ ಆರೋಪಿಸಿದ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಪೋಸ್ಟರ್‌ಗಳು ಎಲ್ಲೆಡೆ ರಾಜಾಜಿಸುತ್ತಿವೆ. ನಗರದ ಅನೇಕ ಕಡೆ ರಾತ್ರೋರಾತ್ರಿ ಕೆಲವರು ಪೋಸ್ಟರ್‌ಗಳನ್ನು ಅಂಟಿಸಿ ಮುಖ್ಯಮಂತ್ರಿ

ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ‌ಗೆ ಭಾರೀ ಮುಖಭಂಗ Read More »

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ… ಬೌರಿಂಗ್ ಆಸ್ಪತ್ರೆ ಬಳಿ ರೇವಣ್ಣ ಆಕ್ರೋಶ

ಸಮಗ್ರ ನ್ಯೂಸ್: ಇಂದು ಎಚ್.ಡಿ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ. ಇದೆ ಸಂದರ್ಭದಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಎಚ್.ಡಿ ರೇವಣ್ಣ ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ… ಬೌರಿಂಗ್ ಆಸ್ಪತ್ರೆ ಬಳಿ ರೇವಣ್ಣ ಆಕ್ರೋಶ Read More »

ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪ್ರಚಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ನಿಮಿತ್ತ ರಾಯಚೂರು ನಗರದ ತಿಮ್ಮಾಪುರ ಪೇಟೆ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ರವರು ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ, ವಿದ್ಯಾವಂತರನ್ನು ಲೋಕಸಭೆಗೆ ಆರಿಸಿ ಕಳುಹಿಸುವ ಜವಾಬ್ದಾರಿ ಜನರ ಮೇಲಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕಾಗಿದೆ ಎಂದು ಮನವಿ ಮಾಡಿದರು.

ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪ್ರಚಾರ Read More »

ಆಪ್ ಜೊತೆ ಮೈತ್ರಿ/ ದೆಹಲಿ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜೀನಾಮೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಕ್ಷ (ಆಪ್)ದ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದೆಹಲಿ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ರಾಜೀನಾಮೆ ನೀಡಿದ್ದಾರೆ. ದೆಹಲಿಯ ಕಾಂಗ್ರೆಸ್ ಘಟಕ ಆಪ್ ಜತೆಗಿನ ಮೈತ್ರಿಗೆ ವಿರುದ್ಧವಿತ್ತು. ಆದರೂ ಪಕ್ಷದ ಹೈಕಮಾಂಡ್ ಮೈತ್ರಿ ಮಾಡಿಕೊಂಡಿದೆ. ದೆಹಲಿ ಘಟಕದ ನಾಯಕರು ಸರ್ವಾನುಮತದಿಂದ ತೆಗೆದುಕೊಳ್ಳುವ ನಿರ್ಧಾರಗಳನ್ನು ಎಐಸಿಸಿ ದೆಹಲಿ ಉಸ್ತುವಾರಿಯಾಗಿರುವ ದೀಪಕ್ ಬಾಬ್ರಿಯಾ ಅವರು ತಿರಸ್ಕರಿಸುತ್ತಿದ್ದಾರೆ ಎಂದು ದೂರಿ ಲವ್ಲಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ

ಆಪ್ ಜೊತೆ ಮೈತ್ರಿ/ ದೆಹಲಿ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜೀನಾಮೆ Read More »

ಮುಂಬೈ : ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು ನಾನು ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಮಹಾ ವಿಕಾಸ್ ಅಘಾಡಿ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಪ್ರಚಾರದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದು

ಮುಂಬೈ : ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌ Read More »

ಯಾದಗಿರಿ : ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ-ಯತ್ನಾಳ್

ಸಮಗ್ರ ನ್ಯೂಸ್‌ : ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅವರು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಲಿತರು ಮತ್ತು ಹಿಂದುಳಿದವರಿಗೆ ಕಾಂಗ್ರೆಸ್ ಭಾರೀ ಮೋಸ ಮಾಡಿದೆ. ಸಂವಿಧಾನದಲ್ಲಿ ಕೇವಲ ಎಸ್‍ಸಿ, ಎಸ್‍ಟಿ, ಅಲ್ಪಸಂಖ್ಯಾತರು, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಧರ್ಮಕ್ಕೆ ಮೀಸಲಾತಿ ಕೊಡಲು ಬರುವುದಿಲ್ಲ. ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲು ಮುಸ್ಲಿಂ ಮೀಸಲಾತಿ ತೆಗೆದು ಹಾಕುತ್ತೇವೆ. ಅದನ್ನು ಎಸ್‍ಸಿ,

ಯಾದಗಿರಿ : ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ-ಯತ್ನಾಳ್ Read More »

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಒಂದೇ ದಿನ ಬಾಕಿ ಇದೆ. ಲೋಕ ಸಮರದಲ್ಲಿ ಗೆಲುವಿಗೆ ಕಾಂಗ್ರೆಸ್ ಮತ್ತು ಕಮಲ-ದಳ ಮೈತ್ರಿ ಪಡೆ ಅಬ್ಬರದ ಪ್ರಚಾರ ನಡೆಸಿ, ಭರ್ಜರಿ ಮತಯಾಚನೆ ಮಾಡಿದೆ. ಇವತ್ತು ರಾಜ್ಯದ 14 ಕ್ಷೇತ್ರ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೊದಲ ಹಂತದ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ. ಈ ಹಿನ್ನೆಲೆ ಕೊನೆ ದಿನ ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರಕ್ಕೆ

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ Read More »