ರಾಜಕೀಯ

ಕಾಂಗ್ರೆಸ್‌ಗೆ ಐಟಿ ಇಲಾಖೆಯಿಂದ ೧೭೦೦ ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯಿಂದ ಡಿಮ್ಯಾಂಡ್‌ ನೋಟಿಸ್‌ ಬಂದಿದ್ದು, ಚುನಾವಣೆ ಹೊತ್ತಲ್ಲಿ ದಂಡ, ಬಡ್ಡಿ ಸೇರಿದಂತೆ 1,700 ರೂಪಾಯಿ ಕಟ್ಟುವ ಅನಿವಾರ್ಯತೆ ಕಾಂಗ್ರೆಸ್‌ ಮುಂದಿದೆ. ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಅದಾದ ಒಂದು ದಿನದ ನಂತರ ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ಡಿಮ್ಯಾಂಡ್‌ ನೋಟಿಸ್‌ನ್ನು ಕಾಂಗ್ರೆಸ್ ಸ್ವೀಕರಿಸಿದೆ. ಹೊಸ ಸೂಚನೆಯು 2017-18 ರಿಂದ 2020-21 ರವರೆಗಿನ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. ಆದಾಯ […]

ಕಾಂಗ್ರೆಸ್‌ಗೆ ಐಟಿ ಇಲಾಖೆಯಿಂದ ೧೭೦೦ ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ Read More »

ರಾಷ್ಟದ ಸುಭದ್ರತೆ ದೃಷ್ಟಿಯಿಂದ ಬಿಜೆಪಿಗೆ ಮತಯಾಚಿಸಿ;ಸಿ.ಟಿ.ರವಿ

ಸಮಗ್ರ ನ್ಯೂಸ್‌: ರಾಷ್ಟ್ರದ ಸುಭದ್ರತೆಯ ದೃಷ್ಟಿ ಹಾಗೂ ಭ್ರಷ್ಟಮುಕ್ತ ಆಡಳಿತ ನೀಡಲು ನರೇಂದ್ರ ಮೋದಿಯಿಂದ ಮಾತ್ರ ಸಾಧ್ಯ. ಹೀಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರು ಮತಗಳಿಕೆಗೆ ಹೆಚ್ಚು ಒತ್ತು ನೀಡಿ ಮತ್ತೊಮ್ಮೆ ಮೋದಿಯನ್ನು ಪ್ರಧಾನಿಯಾಗಿಸಲು ಸನ್ನದ್ದರಾಗಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚಿಕ್ಕಮಗಳೂರು ನಗರ ಮಂಡಲದ ಪ್ರಥಮ ಕಾರ್ಯಕಾರಿಣಿ ಸಭೆ ಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ನಗರ ವ್ಯಾಪ್ತಿಯ ಪ್ರತಿ ವಾರ್ಡ್‌ಗಳಲ್ಲಿ ಕಾರ್ಯಕರ್ತರು ನಾಯಕತ್ವ ವಹಿಸಿಕೊಂಡು ಮತದಾರರ ಮನ ವರಿಕೆ

ರಾಷ್ಟದ ಸುಭದ್ರತೆ ದೃಷ್ಟಿಯಿಂದ ಬಿಜೆಪಿಗೆ ಮತಯಾಚಿಸಿ;ಸಿ.ಟಿ.ರವಿ Read More »

ಬಿಜೆಪಿ ಸೇರಿದ ಬಿಜೆಡಿ ಸ್ಥಾಪಕ ಸದಸ್ಯ

ಸಮಗ್ರ ನ್ಯೂಸ್: ಬಿಜು ಜನತಾದಳದ (ಬಿಜೆಡಿ) ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ, ಕಟಕ್‍ನಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ 67 ವರ್ಷದ ಭರ್ತೃಹರಿ ಮಹತಾಬ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಭರ್ತೃಹರಿಯವರ ಜತೆಗೆ, ಬಿಜೆಡಿಯ ಮಾಜಿ ಸಂಸದ ಸಿದ್ದಾಂತ ಮಹಪಾತ್ರ ಹಾಗೂ ಪದ್ಮಶ್ರಿ ಪುರಸ್ಕೃತ ಸಂತಾಲಿ ಭಾಷೆಯಲ್ಲಿ ಸಾಹಿತಿ ದಮಯಂತು ಬೇಷರ ಅವರೂ ಬಿಜೆಪಿಗೆ ಸೇರಿದರು. ಬಿಜೆಪಿಗೆ ಸೇರಿದ ಬಳಿಕ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಭರ್ತೃಹರಿ ಮಹತಾಬ್, ‘ಒಡಿಶಾದ ಅಭಿವೃದ್ಧಿ ಹಾಗೂ ಪ್ರಗತಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ.

ಬಿಜೆಪಿ ಸೇರಿದ ಬಿಜೆಡಿ ಸ್ಥಾಪಕ ಸದಸ್ಯ Read More »

ಚುನಾವಣಾ ಅಖಾಡಕ್ಕಿಳಿದ ಅಣ್ಣಾಮಲೈ/ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕೊಯಮತ್ತೂರಿನ ಕೊನಿಯಮ್ಮನ್ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಯಮತ್ತೂರಿನ ಜನ ನನ್ನ ಮೇಲೆ ಪ್ರೀತಿ ತೋರಿದ್ದಾರೆ. ಇಲ್ಲಿನ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಚಿತ್ರಣವಿದೆ ಎಂದರು.

ಚುನಾವಣಾ ಅಖಾಡಕ್ಕಿಳಿದ ಅಣ್ಣಾಮಲೈ/ ನಾಮಪತ್ರ ಸಲ್ಲಿಕೆ Read More »

ಮತ್ತೊಂದು ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕರ್ನಾಟಕದ ಎಲ್ಲಾ ಕ್ಷೇತ್ರಗಳು ಭರ್ತಿ

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಾಕಿ ಇರಿಸಿಕೊಂಡಿದ್ದ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಬಾರಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ಚುನಾವಣೆಗೆ ಸ್ಪರ್ಧೆ ಮಾಡುವ ಇಂಗಿತ ತೋರದ ಕಾರಣ, ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್ ಘೋಷಣೆ ಮಾಡುವುದರೊಂದಿಗೆ ಬಿಜೆಪಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಮತ್ತೊಂದು ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕರ್ನಾಟಕದ ಎಲ್ಲಾ ಕ್ಷೇತ್ರಗಳು ಭರ್ತಿ Read More »

ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್

ಸಮಗ್ರ ನ್ಯೂಸ್ : ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಈ ಬಾರಿ ಲೋಕಸಭೆ ಅಖಾಡದಲ್ಲಿ ಅರುಣ್ ಗೋವಿಲ್ ಕಾಣಿಸಿಕೊಳ್ಳಲಿದ್ದಾರೆ. ಟಿಕೆಟ್ ನೀಡಿದ್ದಕ್ಕಾಗಿ ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು

ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್ Read More »

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಹಾಲಿ ಸಂಸದ ವರುಣ್ ಗಾಂಧಿಗೆ ಪೀಲಿಭೀತ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ಕಾಂಗ್ರೆಸ್ ಅವರಿಗೆ ಅಲ್ಲಿಂದಲೇ ಟಿಕೆಟ್ ನೀಡುವುದಾಗಿ ಆಫರ್ ನೀಡಿದೆ. ಬಿಜೆಪಿಯು ವರುಣ್ ಗಾಂಧಿ ಬದಲಿಗೆ ಈಗಷ್ಟೇ ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ ಅವರಿಗೆ ಪೀಲಿಭೀತ್ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ವರುಣ್ ಗಾಂಧಿ ಅವರು ಸಚ್ಚಾರಿತ್ರ್ಯ ಹೊಂದಿದ್ದು, ತಮ್ಮ ಜೀವನವನ್ನು ಪಾರದರ್ಶಕತೆಯಿಂದ ನಡೆಸಿದ್ದಾರೆ. ಅವರು ಮೇಧಾವಿ ಆಗಿದ್ದರೂ ಸಹ ಗಾಂಧಿ ಕುಟುಂಬದ ಕುಡಿ ಎಂಬ ಕಾರಣದಿಂದ ಬಿಜೆಪಿ ಅವರಿಗೆ ಟಿಕೆಟ್

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್ Read More »

ಲೋಕಸಭಾ ಚುನಾವಣೆ/ ಮಾರ್ಚ್ 30 ರಂದು ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಮಾರ್ಚ್ 30 ರಂದು ಮೀರತ್‍ನಲ್ಲಿ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. 80ರ ದಶಕದಲ್ಲಿ ರಮಾನಂದ್ ಸಾಗರ್ ಅವರ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ನಟ ಅರುಣ್ ಗೋವಿಲ್ ಅವರು ಸ್ಪರ್ಧಿಸುವ ಮೀರತ್ ನಿಂದ ಮೋದಿ ಪ್ರಚಾರ ಶುರು ಮಾಡಲಿದ್ದಾರೆ. ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಏಕೈಕ ರಾಜ್ಯವಾದ ಉತ್ತರ ಪ್ರದೇಶವು 370 ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಯೋಜನೆಗಳಿಗೆ ನಿರ್ಣಾಯಕವಾಗಿದೆ.ಉತ್ತರಪ್ರದೇಶದ

ಲೋಕಸಭಾ ಚುನಾವಣೆ/ ಮಾರ್ಚ್ 30 ರಂದು ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ Read More »

ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ

ಸಮಗ್ರ ನ್ಯೂಸ್: ಪಂಜಾಬಿನ ಲುಧಿಯಾನ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟೂ ಬಿಜೆಪಿ ಸೇರಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಬಿಜೆಪಿಗೆ ಸೇರ್ಪಡೆಗೊಂಡ ನಂತರ ಬಿಟ್ಟೂ ಅವರು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದು, ಪ್ರಧಾನಿ ಮೋದಿಯವರು ಪಂಜಾಬ್‍ನ ಮೇಲೆ ಹೆಚ್ಚಿನ ಪ್ರೀತಿಯನ್ನು ತೋರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞನಾಗಿದ್ದೇನೆ.ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವರು ಪಂಜಾಬ್‍ನ ಬಗ್ಗೆ ಹೆಚ್ಚಿನ ಪ್ರೀತಿಯನ್ನು ಹೊಂದಿದ್ದಾರೆ. ಅವರು ರಾಜ್ಯಕ್ಕಾಗಿ ಬಹಳಷ್ಟು ಮಾಡಲು ಬಯಸುತ್ತಾರೆ

ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ Read More »

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರಿಗೆ ಫೋನ್ ಕರೆ ಮಾಡಿ ಪ್ರಚಾರದ ಸಿದ್ಧತೆಗಳು ಮತ್ತು ಹೆಚ್ಚಿನವುಗಳ ಬಗ್ಗೆ ಮಾತನಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿಯವರು ರೇಖಾ ಪಾತ್ರಾ ರನ್ನು ‘ಶಕ್ತಿ ಸ್ವರೂಪ’ ಎಂದು ಬಣ್ಣಿಸಿದ್ದಾರೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ 19 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಸಂದೇಶಖಾಲಿ

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ Read More »