ರಾಜಕೀಯ

ಲೋಕಸಭಾ ಚುನಾವಣೆ/ನಾಮಪತ್ರ ಸಲ್ಲಿಸಿದ ಯದುವೀರ್ ಕೃಷ್ಣ ರಾಜ ಒಡೆಯ‌ರ್

ಸಮಗ್ರ ನ್ಯೂಸ್: ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ರಾಜ ಒಡೆಯ‌ರ್ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ತಾಯಿ ಪ್ರಮದಾದೇವಿ ಒಡೆಯರ್, ಶಾಸಕ ಟಿ.ಎಸ್‌. ಶ್ರೀವತ್ಸ ಮತ್ತಿನ್ನಿಬ್ಬರು ಹಾಜರಿದ್ದರು. ಈ ಮೊದಲು ಅಭ್ಯರ್ಥಿ ಯದುವೀ‌ರ್ ಅವರೇ ಖುದ್ದು ವಿಡಿಯೋ ಸಂದೇಶದ ಮೂಲಕ ಏ. ೩ ರಂದು ನಾಮಪತ್ರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ಇಂದು ಯಾವುದೇ ಸದ್ದುಗದ್ದಲ ಇಲ್ಲದೆ […]

ಲೋಕಸಭಾ ಚುನಾವಣೆ/ನಾಮಪತ್ರ ಸಲ್ಲಿಸಿದ ಯದುವೀರ್ ಕೃಷ್ಣ ರಾಜ ಒಡೆಯ‌ರ್ Read More »

ಚಿತ್ರದುರ್ಗದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಜಗಳ

ಸಮಗ್ರ ನ್ಯೂಸ್: ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆಯುತ್ತಿತ್ತು. ಈ ನಡುವೆ ಎರಡು ಗುಂಪುಗಳ ನಡುವಿನ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಗೋವಿಂದ ಕಾರಜೋಳ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಇವರನ್ನು ಜೆಡಿಎಸ್ ಕಾರ್ಯಕರ್ತನೊಬ್ಬ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಕೈ ಕೈ ಮಿಲಾಯಿಸಿಕೊಂಡು ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕಾರಜೋಳ ಎದುರುಗಡೆಯೆ ಹೊಡೆದಾಟ ನಡೆದಿದೆ.

ಚಿತ್ರದುರ್ಗದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಜಗಳ Read More »

ಲೋಕಸಭಾ ಚುನಾವಣೆ/ ಕಾಂಗ್ರೆಸ್ ಪ್ರಚಾರಕರ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದೆ. ಇದೀಗ ಕಾಂಗ್ರೆಸ್ ತನ್ನ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದ್ದು, 40 ಘಟಾನುಘಟಿ ನಾಯಕರ ಹೆಸರುಗಳನ್ನು ಇದು ಒಳಗೊಂಡಿದೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ್, ಜೈರಾಮ್ ರಮೇಶ್, ಎಂ.ವೀರಪ್ಪ ಮೊಯ್ಲಿ, ಲಕ್ಷ್ಮಣ ಸವದಿ, ಬಿ.ವಿ.ಶ್ರೀನಿವಾಸ್, ಕೆ.ಜೆ.ಜಾರ್ಜ್, ಬಿ.ಕೆ.ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ, ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್,

ಲೋಕಸಭಾ ಚುನಾವಣೆ/ ಕಾಂಗ್ರೆಸ್ ಪ್ರಚಾರಕರ ಪಟ್ಟಿ ಬಿಡುಗಡೆ Read More »

ಕೊನೆಗೂ ಕೋಲಾರ ಟಿಕೆಟ್ ಘೋಷಣೆ ಕಾಂಗ್ರೆಸ್/ ಕೆ.ವಿ.ಗೌತಮ್ ಕಣಕ್ಕಿಳಿಸಲು ಹೈಕಮಾಂಡ್ ನಿರ್ಧಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕೋಲಾರದಿಂದ ಕೆ.ವಿ.ಗೌತಮ್ ಅವರನ್ನು ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಟಿಕೆಟ್ ಘೋಷಣೆ ಮಾಡಿದೆ. ಕಾಂಗ್ರೆಸ್ ಗೆ ತಲೆನೋವಾಗಿದ್ದ ಏಕೈಕ ಕ್ಷೇತ್ರವಾಗಿದ್ದ ಕೋಲಾರದ ಸಮಸ್ಯೆ ಬಗೆಹರಿದಂತಾಗಿದೆ. ಈ ಕ್ಷೇತ್ರದ ಟಿಕೆಟ್‍ಗಾಗಿ ಹಾಲಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಮಾಜಿ ಸಚಿವ ರಮೇಶ್ ಕುಮಾರ್ ಸ್ಪರ್ಧಿಸಿದ್ದರು. ಅಳಿಯನಿಗೆ ಟಿಕೆಟ್ ನೀಡುವಂತೆ ಮುನಿಯಪ್ಪ ತೀವ್ರ ಲಾಬಿ ನಡೆಸಿದ್ದರು. ಮುನಿಯಪ್ಪ ಅವರ ಒತ್ತಡಕ್ಕೆ ಮಣಿದು ರಮೇಶ್ ಕುಮಾರ್ ಬೆಂಬಲಿಗ ಶಾಸಕರು, ಸಚಿವರು ರಾಜೀನಾಮೆ ನೀಡಲು ಸಿದ್ಧರಾಗಿದ್ದರು. ಇದೀಗ

ಕೊನೆಗೂ ಕೋಲಾರ ಟಿಕೆಟ್ ಘೋಷಣೆ ಕಾಂಗ್ರೆಸ್/ ಕೆ.ವಿ.ಗೌತಮ್ ಕಣಕ್ಕಿಳಿಸಲು ಹೈಕಮಾಂಡ್ ನಿರ್ಧಾರ Read More »

ಮೈತ್ರಿ ಬಿಕ್ಕಟ್ಟು ಹಿನ್ನಲೆ| ಜೆಡಿಎಸ್ ತೊರೆದು ‘ಕೈ’ ಹಿಡಿದ ನಜ್ಮಾ ನಜೀರ್

ಸಮಗ್ರ ನ್ಯೂಸ್: ಬಿಜೆಪಿ- ಜೆಡಿಎಸ್ ಮೈತ್ರಿ ಅಸಮಾಧಾನದಿಂದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಜೀರ್ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ನ ಶಾಲನ್ನು ಹಾಕುವ ಮೂಲಕ ನಜ್ಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು. ನಜ್ಮಾ ಅವರು 2020ರಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಅವರು ಜಾತ್ಯತೀತ ಜನತಾ ದಳ ಪಕ್ಷವನ್ನು ಅವರು ಸೇರ್ಪಡೆಗೊಂಡಿದ್ದರು. ನಜ್ಮಾ ನಜೀರ್ ಅವರು ಕಳೆದ

ಮೈತ್ರಿ ಬಿಕ್ಕಟ್ಟು ಹಿನ್ನಲೆ| ಜೆಡಿಎಸ್ ತೊರೆದು ‘ಕೈ’ ಹಿಡಿದ ನಜ್ಮಾ ನಜೀರ್ Read More »

‘ನನ್ನ ಮನೆಗೆ ವಾಪಾಸ್ ಬಂದಿದ್ದೇನೆ’ | ಕಾಂಗ್ರೆಸ್ ಸೇರಿದ ಬಳಿಕ ತೇಜಸ್ವಿನಿ ಗೌಡ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಜೈರಾಮ್‌ ರಮೇಶ್‌ ನೇತೃತ್ವದಲ್ಲಿ ತೇಜಸ್ವಿನಿ ಗೌಡ ಕಾಂಗ್ರೆಸ್‌ ಸೇರ್ಪಡೆಯಾದರು. ಬಳಿಕ ಮಾತನಾಡಿದ ತೇಜಸ್ವಿನಿ ಗೌಡ, ಕಾಂಗ್ರೆಸ್‌ ಪಕ್ಷವು ಬಿಜೆಪಿಗಿಂತ 95 ವರ್ಷ ಹಳೆಯ ಪಕ್ಷವಾಗಿದೆ. ನಾನು ವಾಪಸ್‌ ನನ್ನ ಮನೆಗೆ ಸೇರುತ್ತಿದ್ದೇನೆ ಎಂದು ನುಡಿದರು. ಜೊತೆಗೆ, ದೇಶದಲ್ಲಿ ಎಲ್ಲೆಡೆ ಪ್ರಧಾನಿ ಮೋದಿ ಅವರದ್ದು ಅಷ್ಟೊಂದು ಹವಾ ಇದೆ ಎನ್ನುವುದು ನಿಜವಾಗಿದ್ದರೆ ಏಕೆ ಹಾಲಿ ಕೇಂದ್ರ ಮಂತ್ರಿಗಳನ್ನು ಬದಲಾಯಿಸಿದ್ದಾರೆ. ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ ಅವರ

‘ನನ್ನ ಮನೆಗೆ ವಾಪಾಸ್ ಬಂದಿದ್ದೇನೆ’ | ಕಾಂಗ್ರೆಸ್ ಸೇರಿದ ಬಳಿಕ ತೇಜಸ್ವಿನಿ ಗೌಡ ಪ್ರತಿಕ್ರಿಯೆ Read More »

ಕಾಂಗ್ರೆಸ್ ಪಕ್ಷ‌ಕ್ಕೆ ಸೇರ್ಪಡೆಯಾದ ಧೀರಜ್ ಪ್ರಸಾದ್

ಸಮಗ್ರ ನ್ಯೂಸ್‌ : ಬಿಜೆಪಿ ಪಕ್ಷವನ್ನು ತೊರೆದು ಧೀರಜ್ ಪ್ರಸಾದ್ ರವರು ಕಾಂಗ್ರೆಸ್ ಪಕ್ಷ‌ಕ್ಕೆ ಸೇರ್ಪಡೆಯಾದರು. ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಂಗಿ ಮಗ ಧೀರಜ್ ಪ್ರಸಾದ್ ಇಂದು ಬೆಂಗಳೂರಿನ‌ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು. ಇತ್ತೀಚೆಗೆ ಬಿಜೆಪಿ ಬೆಳೆವಣಿಗೆಯಿಂದ ಬೇಸತ್ತು ಧೀರಜ್ ಪಕ್ಷವನ್ನು ತೊರೆದರು. ಟಿಕೆಟ್ ಕೈ ತಪ್ಪಿದ ಬಳಿಕ ಶ್ರೀನಿವಾಸ್ ಪ್ರಸಾದ್ ರನ್ನ ಅವರನ್ನು ಬಿಜೆಪಿ ನಾಯಕರು ಸಂಪರ್ಕ ಮಾಡಿರಲಿಲ್ಲ. ಧೀರಜ್ ಜೊತೆಗೆ ಸುನೀಲ್ ಬೋಸ್

ಕಾಂಗ್ರೆಸ್ ಪಕ್ಷ‌ಕ್ಕೆ ಸೇರ್ಪಡೆಯಾದ ಧೀರಜ್ ಪ್ರಸಾದ್ Read More »

ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ತೇಜಸ್ವಿನಿ ಗೌಡ

ಸಮಗ್ರ ನ್ಯೂಸ್: ಬಿಜೆಪಿ ಮಾಜಿ MLC ತೇಜಸ್ವಿನಿ ಗೌಡ ಮೊನ್ನೆಯಷ್ಟೆ ಬಿಜೆಪಿ MLC ಸ್ಥಾನಕ್ಕೆ ರಾಜೀನಾಮೆ ನೀಡಿ ದರು, ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಲ್ಲೆ ಬಿಜೆಪಿಗೆ‌ ಇದೊಂದು ರೀತಿಯ ಆಘಾತವುಂಟಾಗಿದೆ. ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಜೈರಾಮ್ ರಮೇಶ್, ಪವನ್ ಖೇರಾ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ನಂತರ ಮಾತನಾಡಿದ ಅವರು, ಬಿಜೆಪಿಯಲ್ಲಿ ವ್ಯಭಿಚಾರಿಗಳು, ಭ್ರಷ್ಟಾಚಾರಿಗಳ ಪರವಾಗಿ ವಕ್ತಾರಿಕೆ ಮಾಡಿದ್ದೇನೆ. ದೆಹಲಿಯಲ್ಲಿ ಕಾಂಗ್ರೆಸ್ ಸೇರಬೇಕೆಂಬುದು ಹೈಕಮಾಂಡ್ ತೀರ್ಮಾನ ಅದಕ್ಕಾಗಿ ಇಲ್ಲಿ ಬಂದು ಸೇರಿದ್ದೇನೆ ಎಂದರು.

ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ತೇಜಸ್ವಿನಿ ಗೌಡ Read More »

ಏ. 19-ಜೂ.1 ರವರೆಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಕೈಗೊಳ್ಳುವಂತಿಲ್ಲ| ಚುನಾವಣಾ ಆಯೋಗ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯ ಸಿದ್ಧತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಈಗಾಗಲೇ ನೂರಾರು ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ್ದು, ಪ್ರಚಾರ ಆರಂಭಿಸಿದ್ದಾರೆ. ಇದರ ನಡುವೆ ಏಪ್ರಿಲ್‌ 19ರಿಂದ ಜೂನ್‌ 1ರವರೆಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಕೈಗೊಳ್ಳುವಂತಿಲ್ಲ ಎಂದ ಚುನಾವಣಾ ಆಯೋಗವು ಆದೇಶಿಸಿದೆ. ಮೊದಲ ಹಂತದ ಮತದಾನ ನಡೆಯುವ ಏಪ್ರಿಲ್‌ 19ರ ಬೆಳಗ್ಗೆ 7 ಗಂಟೆಯಿಂದ ಚುನಾವಣೆ ಮುಗಿಯುವ ಜೂನ್‌ 1ರ ಸಂಜೆ 6.30ರವರೆಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಕೈಗೊಳ್ಳುವಂತಿಲ್ಲ. ಚುನಾವಣೆಯಲ್ಲಿ ಪಕ್ಷಗಳಿಗೆ ಬೆಂಬಲ, ಅಭಿಪ್ರಾಯ ಸಂಗ್ರಹ

ಏ. 19-ಜೂ.1 ರವರೆಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಕೈಗೊಳ್ಳುವಂತಿಲ್ಲ| ಚುನಾವಣಾ ಆಯೋಗ Read More »

ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 26ರಂದು ರಾತ್ರಿ 11.30ರ ಸುಮಾರಿಗೆ ಜಯಪ್ರಕಾಶ್ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಹೋಗಿರುವುದಾಗಿ ಕಾಪು ಪೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು.

ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು Read More »