ರಾಜಕೀಯ

ಲೋಕಸಭಾ ಚುನಾವಣೆ ತಾತ್ಕಾಲಿಕ ದಿನಾಂಕ‌ ಪ್ರಕಟಿಸಿದ ಚು. ಆಯೋಗ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ತಾತ್ಕಾಲಿಕ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ. ಚುನಾವಣಾ ಯೋಜಕರ ಪ್ರಾರಂಭ ಮತ್ತು ಅಂತಿಮ ದಿನಾಂಕಗಳನ್ನು ಲೆಕ್ಕಾಚಾರ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಅನುವು ಮಾಡಿಕೊಡಲು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಘೋಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಲೋಕಸಭಾ ಚುನಾವಣೆ ತಾತ್ಕಾಲಿಕ ದಿನಾಂಕ‌ ಪ್ರಕಟಿಸಿದ ಚು. ಆಯೋಗ Read More »

ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ/ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಸಮಗ್ರ ನ್ಯೂಸ್: ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆ ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಉದ್ಘಾಟನೆ ನಡೆಸಲಿದ್ದಾರೆ. ನಂತರ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಪ್ರಮುಖರ ಪ್ರಕ್ರಿಯೆಗೆ ಚಾಲನೆ ಕೊಡುವ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ಸಭೆಯ ಬಳಿಕ ಪ್ರಮುಖರು ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ

ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ/ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ Read More »

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೃಜೇಶ್ ಚೌಟ ಆಯ್ಕೆ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಾರ್ಟಿ(BJP) ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಆಯ್ಕೆಯಾಗಿದ್ದಾರೆ. ಕ್ಯಾಪ್ಟನ್ ಬೃಜೇಶ್ ಚೌಟಾ ಮಾಜಿ ಸೈನಿಕರಾಗಿ, ರಾಜಕೀಯ ಚಿಂತಕನಾಗಿ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಮತ್ತು ನಿರ್ವಹಣಾ ತಜ್ಞರಾಗಿದ್ದಾರೆ. ಕ್ಯಾಪ್ಟನ್ ಚೌಟ ಅವರು ಭಾರತೀಯ ಸೇನೆಯ ಮಾನವ ಸಂಪನ್ಮೂಲ, ಭದ್ರತೆ, ಕಾರ್ಯಾಚರಣೆಗಳು, ಆಡಳಿತ ಮತ್ತು ಲಾಜಿಸ್ಟಿಕ್ಸ್‌ನ ಸ್ವತಂತ್ರ ನಿರ್ವಹಣೆಯಲ್ಲಿ ಏಳು ವರ್ಷಗಳ ಅನುಭವವನ್ನು ಹೊಂದಿರುವ ಸ್ನೇಹಪರ ಮತ್ತು ಸಮರ್ಥ ವೃತ್ತಿಪರರಾಗಿದ್ದಾರೆ. ಮಂಗಳೂರು ಕಂಬಳದ ರುವಾರಿಗಳು ಆಗಿರುತ್ತಾರೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೃಜೇಶ್ ಚೌಟ ಆಯ್ಕೆ Read More »

ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ

ಸಮಗ್ರ ನ್ಯೂಸ್: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ 10 ಜನರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ನಾಲ್ವರು, 10 ಜನ ರಾಜ್ಯ ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ. ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಿ. ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್ ಟಿ ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್ಸಿ ಮೋರ್ಚಾ ಅಧ್ಯಕ್ಷರಾಗಿ ಶಾಸಕ ಸಿಮೆಂಟ್ ಮಂಜು, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾ ಅಧ್ಯಕ್ಷರಾಗಿ

ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ Read More »

ಸಂಸತ್ ನಲ್ಲಿ ಸ್ಪ್ರೇ ದಾಳಿ ಪ್ರಕರಣ… ಬಾಗಲಕೋಟೆ ನಿವೃತ್ತ Dysp ಪುತ್ರ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ದೆಹಲಿ ಪೊಲೀಸರು ಪ್ರಕರಣದಲ್ಲಿ ಬಂಧಿಯಾಗಿದ್ದ ಮೈಸೂರು ಮೂಲದ ಮನೋರಂಜನ್​ ಅವರ ಸಂಬಂಧಿಕರನ್ನ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಡಿವೈಎಸ್​ಪಿ ಪುತ್ರನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಲೋಕಸಭೆಯಲ್ಲಿ ಮನೋರಂಜನ್ ಹಾಗೂ ಇತರರಿಂದ ಸ್ಪ್ರೇ ದಾಳಿ ಪ್ರಕರಣದ ಲಿಂಕ್​ ಬಾಗಲಕೋಟೆಗೂ ಸಾಗಿದ್ದು, ಬಾಗಲಕೋಟೆ ನಿವೃತ್ತ ಡಿವೈಎಸ್ ಪಿ ಮಗ ಸಾಯಿಕೃಷ್ಣ ಎಂಬಾತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಯಿಕೃಷ್ಣ

ಸಂಸತ್ ನಲ್ಲಿ ಸ್ಪ್ರೇ ದಾಳಿ ಪ್ರಕರಣ… ಬಾಗಲಕೋಟೆ ನಿವೃತ್ತ Dysp ಪುತ್ರ ಪೊಲೀಸ್ ವಶಕ್ಕೆ Read More »

ಅಮಾನತಾಗಿರುವ ಸಂಸದರು ಸಂಸತ್ತಿನ ಚೇಂಬರ್, ಲಾಬಿ ಹಾಗೂ ಗ್ಯಾಲರಿಗೆ ಪ್ರವೇಶಿಸುವಂತಿಲ್ಲ/ ಲೋಕಸಭಾ ಕಚೇರಿ ಆದೇಶ

ಸಮಗ್ರ ನ್ಯೂಸ್: ಸಂಸತ್ತಿನಿಂದ ಅಮಾನತಾಗಿರುವ ಸಂಸದರು ಸಂಸತ್ತಿನ ಚೇಂಬರ್, ಲಾಬಿ ಹಾಗೂ ಗ್ಯಾಲರಿಗೆ ಪ್ರವೇಶಿಸುವಂತಿಲ್ಲ ಎಂದು ಲೋಕಸಭಾ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಕುರಿತ ಚರ್ಚೆಗೆ ಒತ್ತಾಯಿಸಿ ಉಭಯ ಸದನಗಳಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿನ ವಿವಿಧ ಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು. ಅಮಾನತುಗೊಂಡ ಎಲ್ಲಾ ಸಂಸದರಿಗೆ ಯಾವುದೇ ಸಂಸದೀಯ ಸಮಿತಿಯ ಸಭೆಗೆ ಹಾಜರಾಗಲು ಅವರಿಗೆ ಅವಕಾಶವಿರಲ್ಲ. ಸಂಸತ್ತಿನ ಮೊಗಸಾಲೆ, ಕೋಣೆ ಹಾಗೂ ಗ್ಯಾಲರಿಗೆ ಪ್ರವೇಶ ನಿಬರ್ಂಧಿಸಲಾಗಿದೆ. ಅಮಾನತು

ಅಮಾನತಾಗಿರುವ ಸಂಸದರು ಸಂಸತ್ತಿನ ಚೇಂಬರ್, ಲಾಬಿ ಹಾಗೂ ಗ್ಯಾಲರಿಗೆ ಪ್ರವೇಶಿಸುವಂತಿಲ್ಲ/ ಲೋಕಸಭಾ ಕಚೇರಿ ಆದೇಶ Read More »

ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಟ್ರಂಪ್ ಅನರ್ಹ/ ಅಮೆರಿಕದ ಇತಿಹಾಸದಲ್ಲೇ ಮೊದಲ ಬಾರಿಗೆ ಅನರ್ಹಗೊಂಡ ದಾಖಲೆ

ಸಮಗ್ರ ನ್ಯೂಸ್: ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಲೊರಾಡೊ ಕೋರ್ಟ್ ಅನರ್ಹಗೊಳಿಸಿದ್ದು, ಅಮೆರಿಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಾಜೀ ಅಧ್ಯಕ್ಷರೊಬ್ಬರನ್ನು ಚುನಾವಣೆಯಿಂದಲೇ ಅನರ್ಹಗೊಂಡ ದಾಖಲೆ ನಿರ್ಮಾಣವಾಗಿದೆ. ಕ್ಯಾಪಿಟಲ್ ಹಿಲ್ ದಂಗೆಯಲ್ಲಿ ಟ್ರಂಪ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆದೇಶ ಪ್ರಕಟವಾಗಿದ್ದು, ಜ.4ರೊಳಗೆ ಟ್ರಂಪ್ ಮೇಲ್ಮನವಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ತೀರ್ಪನ್ನು ಪ್ರಶ್ನಿಸಿ ಟ್ರಂಪ್ ವಕ್ತಾರರು ಆಕ್ರೋಶ ವ್ಯಕ್ತಪಡಿಸಿದ್ದು, ಮೇಲ್ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಟ್ರಂಪ್ ಅನರ್ಹ/ ಅಮೆರಿಕದ ಇತಿಹಾಸದಲ್ಲೇ ಮೊದಲ ಬಾರಿಗೆ ಅನರ್ಹಗೊಂಡ ದಾಖಲೆ Read More »

ಬ್ರಿಟೀಷರ ಕಾಲದ ಮೂರು ಕ್ರಿಮಿನಲ್ ವಿಧೇಯಕಗಳಿಗೆ ಗುಡ್ ಬೈ| ಲೋಕಸಭೆಯಲ್ಲಿ ಕ್ರಿಮಿನಲ್ ತಿದ್ದುಪಡಿ ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ಬ್ರಿಟಿಷರ ಕಾಲದ ಕ್ರಿಮಿನಲ್​ ಕಾನೂನುಗಳನ್ನು ಬದಲಿಸುವ ಮೂರು ಹೊಸ ಮಸೂದೆಗಳು ಇಂದು ಲೋಕಸಭೆಯಲ್ಲಿ ಪಾಸ್ ಆಗಿವೆ. ಭಾರತೀಯ ನ್ಯಾಯ (ಎರಡನೇ) ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ (ಎರಡನೇ)-2023 ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, “ಬಡವರಿಗೆ ನ್ಯಾಯ ದೊರಕಿಸಿಕೊಡುವುದು ದೊಡ್ಡ ಸವಾಲಾಗಿದೆ. ವರ್ಷಗಳಿಂದ ‘ತಾರೀಖ್ ಪೆ ತಾರೀಖ್’ ಮುಂದುವರಿಯುತ್ತಲೇ ಇದೆ. ಪೊಲೀಸರು ನ್ಯಾಯಾಂಗ ವ್ಯವಸ್ಥೆಯನ್ನು ಹೊಣೆಗಾರರನ್ನಾಗಿ ಮಾಡುತ್ತಾರೆ. ಸರ್ಕಾರವು ಪೊಲೀಸ್

ಬ್ರಿಟೀಷರ ಕಾಲದ ಮೂರು ಕ್ರಿಮಿನಲ್ ವಿಧೇಯಕಗಳಿಗೆ ಗುಡ್ ಬೈ| ಲೋಕಸಭೆಯಲ್ಲಿ ಕ್ರಿಮಿನಲ್ ತಿದ್ದುಪಡಿ ಮಸೂದೆ ಅಂಗೀಕಾರ Read More »

ಕಲಾಪಕ್ಕೆ ಅಡ್ಡಿ/ ಮತ್ತೆ 49 ಸಂಸದರ ಅಮಾನತು

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ನಿನ್ನೆ 79 ವಿಪಕ್ಷ ಸಂಸದರನ್ನು ಸಂಸತ್‍ನಿಂದ ಅಮಾನತುಗೊಳಿಸಲಾಗಿದ್ದು, ಇಂದು ಮತ್ತೆ 49 ವಿಪಕ್ಷ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. ಇದೀಗ ಅಧಿವೇಶನದಲ್ಲಿ ಅಮಾನತುಗೊಂಡ ಒಟ್ಟು ಸದಸ್ಯರ ಸಂಖ್ಯೆ 141ಕ್ಕೆ ಏರಿಕೆ ಆಗಿದೆ. ನ್ಯಾಷನಲ್ ಕಾನ್ಸರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಕಾರ್ತಿ ಚಿದಂಬರಂ, ಎನ್‍ಸಿಪಿಯ ಸುಪ್ರಿಯಾ ಸುಳೆ ಸೇರಿದಂತೆ 49 ಎಂಪಿಗಳನ್ನು ಅಮಾನತು ಮಾಡಲಾಗಿದೆ.

ಕಲಾಪಕ್ಕೆ ಅಡ್ಡಿ/ ಮತ್ತೆ 49 ಸಂಸದರ ಅಮಾನತು Read More »

ಒಂದು ರಾಷ್ಟ್ರ, ಒಂದು ಚುನಾವಣೆ/ ಇಂದು ಪ್ರಗತಿ ಪರಿಶೀಲನಾ ಸಭೆ

ಸಮಗ್ರ ನ್ಯೂಸ್: ಒಂದು ರಾಷ್ಟ್ರ, ಒಂದು ಚುನಾವಣೆ ಹಿನ್ನಲೆಯಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ರಚನೆಯಾಗಿರುವ ಉನ್ನತ ಮಟ್ಟದ ಸಮಿತಿಯು ಇಂದು ಸಭೆ ಸೇರಲಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ಕಲ್ಪನೆಗೆ ರಾಜಕೀಯ ಪಕ್ಷಗಳ ಪ್ರತಿಕ್ರಿಯೆ ಸೇರಿದಂತೆ ಇದುವರೆಗೆ ಆಗಿರುವ ಪ್ರಗತಿಯನ್ನು ಪರಿಶೀಲಿಸಲಿದೆ. ಇದು ಅನೌಪಚಾರಿಕ ಸಭೆಯಾಗಿದ್ದು ಯಾವುದೇ ಲಿಖಿತ ಅಜೆಂಡಾವನ್ನು ಪ್ರಸಾರ ಮಾಡಿಲ್ಲವಾದರೂ, ರಾಜಕೀಯ ಪಕ್ಷಗಳಿಂದ ಪಡೆದ ಪ್ರತಿಕ್ರಿಯೆಗಳನ್ನು ಚರ್ಚಿಸಬಹುದು ಎಂದು ಮೂಲಗಳು ತಿಳಿಸಿವೆ. ಸಮಿತಿಯು ತನ್ನ ಮೊದಲ ಸಭೆಯಲ್ಲಿ ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು

ಒಂದು ರಾಷ್ಟ್ರ, ಒಂದು ಚುನಾವಣೆ/ ಇಂದು ಪ್ರಗತಿ ಪರಿಶೀಲನಾ ಸಭೆ Read More »