ರಾಜಕೀಯ

ಲೋಕಸಭಾ ಚುನಾವಣೆ: ಬಿಜೆಪಿಯೊಂದಿಗೆ ವಿಲೀನಗೊಂಡ ಎಐಎಸ್‍ಎಂಕೆ ಪಕ್ಷ

ಸಮಗ್ರ ನ್ಯೂಸ್: ತಮಿಳುನಾಡಿನ ನಟ ಆರ್ ಶರತ್ ಕುಮಾರ್ ನೇತೃತ್ವದ ಎಐಎಸ್‍ಎಂಕೆ ಪಕ್ಷ ಮುಂಬರುವ ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ದೊಂದಿಗೆ ವಿಲೀನಗೊಂಡಿದೆ. ಈ ಕುರಿತು ಮಾತನಾಡಿದ ನಟ ಆರ್ ಶರತ್ ಕುಮಾರ್, “ಇದು ಜನರಿಗಾಗಿ. ಇದು ರಾಷ್ಟ್ರಕ್ಕಾಗಿ. ನಾವು ರಾಷ್ಟ್ರದ ಹಿತದೃಷ್ಟಿಯಿಂದ ಮಾತ್ರ ಕೆಲಸ ಮಾಡಬೇಕಾಗಿದೆ ಮತ್ತು ಈ ನಿರ್ಧಾರದ ಬಗ್ಗೆ ನಮಗೆ ತುಂಬಾ ಸಂತೋಷ ಮತ್ತು ಹೆಮ್ಮೆ ಇದೆ” ಎಂದು ಹೇಳಿದರು. ಕೇಂದ್ರ ಸಚಿವ ಎಲ್ ಮುರುಗನ್, ರಾಷ್ಟ್ರೀಯ ಕಾರ್ಯದರ್ಶಿ […]

ಲೋಕಸಭಾ ಚುನಾವಣೆ: ಬಿಜೆಪಿಯೊಂದಿಗೆ ವಿಲೀನಗೊಂಡ ಎಐಎಸ್‍ಎಂಕೆ ಪಕ್ಷ Read More »

‘ಆನೆ‌ ಹೋಗುವಾಗ ನಾಯಿಗಳು ಬೊಗಳುವುದು ಸಹಜ’| ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತಕುಮಾರ್ ಹೆಗ್ಡೆ!!

ಸಮಗ್ರ ನ್ಯೂಸ್: ‘ವಿವಾದ ಸೃಷ್ಟಿಯಾದರೂ ದೃಢವಾಗಿ ನಿಲ್ಲುವುದು ನಿಜವಾದ ನಾಯಕತ್ವ. ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ತಲೆಕೆಡಿಸಿಕೊಳ್ಳಬಾರದು’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು. ಸಂವಿಧಾನ ತಿದ್ದುಪಡಿಗೆ ಬಿಜೆಪಿ 400 ಸೀಟು ಗೆಲ್ಲಬೇಕು ಎಂದು ಎರಡು ದಿನದ ಹಿಂದೆ ತಾವೇ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೆ ಸಂಸದರು ಮಾಧ್ಯಮಗಳ ವಿರುದ್ಧವೂ ವಾಗ್ದಾಳಿ ನಡೆಸಿದರು. ‘ಆನೆ ನಡೆದು ಹೋಗುವಾಗ ನಾಯಿಗಳು ಬೊಗಳುವುದು ಸಹಜ. ಅವು ಬೊಗಳಿದರೆ ಮಾತ್ರ ಆನೆಗೆ ಗತ್ತು ಬರುತ್ತದೆ’ ಎನ್ನುತ್ತ ತಮ್ಮನ್ನು ಆನೆಗೆ,

‘ಆನೆ‌ ಹೋಗುವಾಗ ನಾಯಿಗಳು ಬೊಗಳುವುದು ಸಹಜ’| ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತಕುಮಾರ್ ಹೆಗ್ಡೆ!! Read More »

ನಳಿನ್ ಗೆ ಟಿಕೆಟ್ ‌ಡೌಟಾ? ಗುಡಿಸಿ, ಒರೆಸುವ ಮಾತನಾಡಿದ ದ.ಕ ಸಂಸದ

ಸಮಗ್ರ ನ್ಯೂಸ್: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಈ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆಯನ್ನು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷ ನಿಂತ ನೀರಾಗಬಾರದು. ಹೊಸಬರು ಬರುತ್ತಿರಬೇಕು, ಚಲಾವಣೆಯಲ್ಲಿ ಇರಬೇಕು.

ನಳಿನ್ ಗೆ ಟಿಕೆಟ್ ‌ಡೌಟಾ? ಗುಡಿಸಿ, ಒರೆಸುವ ಮಾತನಾಡಿದ ದ.ಕ ಸಂಸದ Read More »

ಮುರಿದು ಬಿದ್ದ ಬಿಜೆಪಿ – ಜೆಜೆಪಿ ಮೈತ್ರಿ| ಹರಿಯಾಣ ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಅವರು ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ನೀಡಿದ್ದಾರೆ ಅಂತ ತಿಳಿದುಬಂದಿದೆ. ಮನೋಹರ್ ಲಾಲ್ ಖಟ್ಟರ್ ಅವರು ರಾಜೀನಾಮೆ ಹಿನ್ನಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕರ್ಣದಿಂದ ಕಣಕ್ಕಿಳಿಸಬಹುದು ಮತ್ತು ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರನ್ನು ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬಹುದು ಎಂದು ಮೂಲಗಳು ತಿಳಿಸಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ

ಮುರಿದು ಬಿದ್ದ ಬಿಜೆಪಿ – ಜೆಜೆಪಿ ಮೈತ್ರಿ| ಹರಿಯಾಣ ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ Read More »

ಲೋಕಸಭೆ ಚುನಾವಣೆಗೆ ಖಂಡಿತ ಸ್ಪರ್ಧಿಸುತ್ತೇನೆ: ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ಮುಂಬರುವ ಲೋಕಸಭೆ ಚುನಾವಣೆಗೆ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಐಸಿಎಆರ್-ಸಿಪಿಸಿಆರ್‍ಐ ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ರಾಜಕೀಯದಲ್ಲಿ ಅಸಮಾಧಾನ ಸಾಮಾನ್ಯ. ಗೆಲುವು ಖಚಿತವಾದ ಕ್ಷೇತ್ರದಿಂದ ಆಕಾಂಕ್ಷಿಗಳು ಟಿಕೆಟ್ ಬಯಸಿದ್ದಾರೆ. ಇದು ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾವೆಲ್ಲರೂ ಬದ್ಧರಾಗಿದ್ದೇವೆ ಮತ್ತು ಪಕ್ಷದ ಕೇಂದ್ರ ಸಂಸದೀಯ ಮಂಡಳಿಯ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು

ಲೋಕಸಭೆ ಚುನಾವಣೆಗೆ ಖಂಡಿತ ಸ್ಪರ್ಧಿಸುತ್ತೇನೆ: ಶೋಭಾ ಕರಂದ್ಲಾಜೆ Read More »

ಬಿಜೆಪಿಗೆ ಕಗ್ಗಂಟಾಗಿದೆ ಕೆಲವು ಕ್ಷೇತ್ರ… ಹಾಲಿ ಸಂಸದರಿಗೆ ಟಿಕೆಟ್ ಡೌಟ್..?

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಈಗಾಗಲೆ ತಯಾರಿ ನಡೆದಿದು, ಬಿಜೆಪಿ ಮೊದಲ ಪಟ್ಟಿಯು ಬಿಡುಗಡೆಯಾಗಿದೆ. ಆದರೆ ಈಗ ಕೆಲ ಕ್ಷೇತ್ರಗಳು ಕಗ್ಗಂಟಾಗಿದ್ದು, ಅಸಮಾಧಾನ ಬೆಂಕಿಯಿಂದ ಬೇಯುತ್ತಿರೋ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲು ಮಹತ್ವದ ಸಭೆ ನಡೆಸಲಾಗಿದೆ. ನಿನ್ನೆ ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳ 150 ಅಭ್ಯರ್ಥಿಗಳ ಎರಡನೇ ಪಟ್ಟಿ ಬಗ್ಗೆ ಚರ್ಚಿಸಲಾಗಿದೆ. ಅದರಲ್ಲೂ ರಾಜ್ಯದಲ್ಲಿ ಕಗ್ಗಂಟಾಗಿರುವ ಕೆಲ ಕ್ಷೇತ್ರಗಳನ್ನ ಬಿಟ್ಟು ಸಿಂಗಲ್ ಹೆಸರು ಇರುವ ಕ್ಷೇತ್ರಗಳನ್ನ ಫೈನಲ್

ಬಿಜೆಪಿಗೆ ಕಗ್ಗಂಟಾಗಿದೆ ಕೆಲವು ಕ್ಷೇತ್ರ… ಹಾಲಿ ಸಂಸದರಿಗೆ ಟಿಕೆಟ್ ಡೌಟ್..? Read More »

ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡದಂತೆ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಸಮಗ್ರ ನ್ಯೂಸ್ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಇಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದು, ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಈ ಬಾರಿ ಟಿಕೆಟ್ ಕೊಡದಂತೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಯಡಿಯೂರಪ್ಪ ಅವರು ಟಿಕೆಟ್ ಫೈನಲ್ ಆಗುವ ಮೊದಲೇ ಶೋಭಾ ಕರಂದ್ಲಾಜೆಗೆ ಟಿಕೆಟ್ ಎಂದು ಹೇಳಿದ್ದು, ಯಡಿಯೂರಪ್ಪ ಅವರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಉಡುಪಿ ಭಾಗದವರಿಗೇ

ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡದಂತೆ ಬಿಜೆಪಿ ಕಾರ್ಯಕರ್ತರ ಆಕ್ರೋಶ Read More »

ಟೈಮ್ಸ್ ನೌ ಮತ್ತು ಇಟಿಜಿಯ ಚುನಾವಣಾ ಪೂರ್ವ ಸಮೀಕ್ಷೆ/ 400 ರ ಸಮೀಪ ತಲುಪಲಿದೆ ಎನ್‍ಡಿಎ

ಸಮಗ್ರ ನ್ಯೂಸ್: ಟೈಮ್ಸ್ ನೌ ಸುದ್ದಿವಾಹಿನಿ ಇಟಿಜಿ ಜೊತೆಗೂಡಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಇದರ ಅನ್ವಯ ಬಿಜೆಪಿ 358-398 ಸ್ಥಾನ ಮತ್ತು ಕಾಂಗ್ರೆಸ್ 28-48 ಸ್ಥಾನ ಗೆಲ್ಲಲಿದೆ ಎಂಬ ವರದಿ ಪ್ರಕಟಗೊಂಡಿದೆ. ಲೋಕಸಭಾ ಚುನಾವಣೆಗೆ ಯಾವುದೇ ಸಮಯದಲ್ಲಿ ದಿನಾಂಕ ಘೋಷಣೆಯಾಗಬಹುದು ಎಂಬ ಹೊತ್ತಿನಲ್ಲೇ ಈ ವರದಿ ಪ್ರಕಟವಾಗಿದ್ದು, ಇದು ಬಿಜೆಪಿಯ ಈ ಬಾರಿಯ ಕನಸಾದ 400 ಸ್ಥಾನಕ್ಕೆ ಬಹುತೇಕ ಸಮೀಪವಿದೆ. ವರದಿ ಅನ್ವಯ ಪಶ್ಚಿಮ ಬಂಗಾಳದಲ್ಲಿ ಎನ್‍ಡಿಎ 20-24, ಟಿಎಂಸಿ 17-21, ಇಂಡಿಯಾ 0-2;ತಮಿಳುನಾಡು: ಇಂಡಿಯಾ

ಟೈಮ್ಸ್ ನೌ ಮತ್ತು ಇಟಿಜಿಯ ಚುನಾವಣಾ ಪೂರ್ವ ಸಮೀಕ್ಷೆ/ 400 ರ ಸಮೀಪ ತಲುಪಲಿದೆ ಎನ್‍ಡಿಎ Read More »

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ/ ಪಕ್ಷ ತೊರೆದ ಮನೀಶ್ ಖಂಡೂರಿ

ಸಮಗ್ರ ನ್ಯೂಸ್: 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಿಲೀಸ್ ಮಾಡಿದ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ಅವರ ಪುತ್ರ ಮನೀಶ್ ಖಂಡೂರಿ ಪಕ್ಷ ತೊರೆದಿದ್ದಾರೆ. ಈ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲಾ ಸಂಬಂಧಿತ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ. ಯಾವುದೇ ವೈಯಕ್ತಿಕ ಲಾಭದ ನಿರೀಕ್ಷೆ ಇಲ್ಲದೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮನೀಷ್ ಬರೆದುಕೊಂಡಿದ್ದಾರೆ. 2019ರಲ್ಲಿ ಕಾಂಗ್ರೆಸ್

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ/ ಪಕ್ಷ ತೊರೆದ ಮನೀಶ್ ಖಂಡೂರಿ Read More »

ಲೋಕಸಭಾ ಚುನಾವಣೆ: ಕರ್ನಾಟಕ ಸೇರಿ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣು ಗೋಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಕರ್ನಾಟಕದ 7 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಖಚಿತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್​ ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಲೋಕಸಭಾ ಚುನಾವಣೆ: ಕರ್ನಾಟಕ ಸೇರಿ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ Read More »