ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ| ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ
ಸಮಗ್ರ ನ್ಯೂಸ್: ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಹಾಗೂ ಬಿಪಿಎಲ್, ಎಪಿಎಲ್ ಸೇರಿದಂತೆ ಯಾವುದೇ ಷರತ್ತುಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ನಾಳೆ ಸಿಎಂ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು. ನಾವು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಷರತ್ತು ಹಾಕಿಲ್ಲ. ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ಖಚಿತ ಎಂದು ತಿಳಿಸಿದ್ದಾರೆ. ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ […]










