ರಾಜಕೀಯ

ಸುಳ್ಯ: ಮಾಜಿ ಜಿ.ಪಂ ಸದಸ್ಯ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವು

ಸಮಗ್ರ ನ್ಯೂಸ್: ಮಾಜಿ‌ ಜಿ.ಪಂ ಸದಸ್ಯ, ಸುಳ್ಯದ ಪ್ರಭಾವಿ ನಾಯಕ, ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಇಂದು (ಮೇ. 18) ನಡೆದಿದೆ. ತುದಿಯಡ್ಕ ಬಳಿ ನದಿಯಲ್ಲಿ ಪಂಪ್ ವಾಲ್ ಪಿಟ್ ಸರಿಪಡಿಸುವ ಸಂದರ್ಭದಲ್ಲಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ: ಮಾಜಿ ಜಿ.ಪಂ ಸದಸ್ಯ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವು Read More »

ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ| ಮೇ.20 ಕ್ಕೆ ಪ್ರಮಾಣವಚನ

ಸಮಗ್ರ ನ್ಯೂಸ್: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆ ಬಿದ್ದಿದ್ದು, ಮೇ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮೇ 20 ರಂದು ಮಧ್ಯಾಹ್ನ 12.30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬುಧವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಂತರ ಸ್ಥಗಿತಗೊಳಿಸಲಾಗಿತ್ತು. ಶನಿವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮತ್ತೆ ಸಿದ್ಧತೆ ಕೈಗೊಳ್ಳಲಾಗಿದೆ.

ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ| ಮೇ.20 ಕ್ಕೆ ಪ್ರಮಾಣವಚನ Read More »

ಹಿಜಾಬ್ ಗೆ ನ್ಯಾಯ ಒದಗಿಸುತ್ತೇವೆ: ಯು.ಟಿ. ಖಾದರ್‌

ಸಮಗ್ರ ನ್ಯೂಸ್: ಶಾಲಾ ಕಾಲೇಜುಗಳ ಹಿಜಾಬ್‌ ನಿಷೇಧದ ವಿಚಾರ ಸುಪ್ರೀಂ ಕೋರ್ಟ್‌ನ ಮೆಟ್ಟಿಲಲ್ಲಿದೆ. ನ್ಯಾಯಾಲಯದ ತೀರ್ಪನ್ನು ಮರುಪರಿಶೀಲಿಸಿ ಆ ಪ್ರಕಾರ ಸಾಮರಸ್ಯ ಕಾಪಾಡುವಂತಹ ನಿರ್ಧಾರವನ್ನು ಹೊಸ ಸರ್ಕಾರ ತೆಗೆದುಕೊಳ್ಳಲಿದೆ’ ಎಂದು ಶಾಸಕ ಯು.ಟಿ.ಖಾದರ್‌ ಹೇಳಿದರು. ಮಂಗಳವಾರ ಮುಸ್ಲೀಮರ ಶೇ 4ರಷ್ಟು ಮೀಸಲಾತಿ ರದ್ದತಿ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ ‘ಈ ವಿಚಾರದಲ್ಲಿ ಹಿಂದಿನ ಸರ್ಕಾರ ದುರುದ್ದೇಶಪೂರಿತ ಹಾಗೂ ರಾಜಕೀಯ ಪ್ರೇರಿತ ನಿರ್ಧಾರ ತೆಗೆದುಕೊಂಡಿದೆ. ಹಿಂದುಳಿದ ವರ್ಗದ ಒಳಮೀಸಲಾತಿ ಜಾರಿಗೆ ತರುವ ವರದಿಯನ್ನು ಪಡೆಯದೆ ಶಾಶ್ವತ ಸ್ಥಾನ ಕಲ್ಪಿಸಲು ಸರ್ಕಾರ

ಹಿಜಾಬ್ ಗೆ ನ್ಯಾಯ ಒದಗಿಸುತ್ತೇವೆ: ಯು.ಟಿ. ಖಾದರ್‌ Read More »

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ: ಕಟೀಲ್ ವಾಗ್ದಾಳಿ

ಸಮಗ್ರ ನ್ಯೂಸ್‌: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ, ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹೊಸಕೋಟೆ ಕ್ಷೇತ್ರ ದ ಡಿ ಶೆಟ್ಟಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೋತ್ಸವ ನೆಪದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಪಟಾಕಿ ಸಿಡಿಸಬೇಡಿ ಎಂದಿದ್ದಕ್ಕೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ದಾಳಿಯಾಗಿದೆ. ಹೊಸಕೋಟೆ ಕ್ಷೇತ್ರದ ಡಿ ಶೆಟ್ಟಹಳ್ಳಿ ವಾಸಿ ಕೃಷ್ಣಪ್ಪ ಮತ್ತು

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ: ಕಟೀಲ್ ವಾಗ್ದಾಳಿ Read More »

ನಳಿನ್ ಕುಮಾರ್,ಸದಾನಂದ ಗೌಡರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ಆರೋಪಿಗಳಿಗೆ ರಕ್ತ ಒಸರುವಷ್ಟು ಥಳಿಸಿದ ಪೊಲೀಸರು |ನಡೆಯಲಾಗದ ಸ್ಥಿತಿಯಲ್ಲಿ ಕಾರ್ಯಕರ್ತರು

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಬಾಸುಂಡೆ ಬರುವ ರೀತಿ ಥಳಿಸಿದ್ದು ಪೊಲೀಸರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಏಳು ಮಂದಿ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಪಕ್ಷದ ಸೋಲಿನ ಬಗ್ಗೆ ಆಕ್ರೋಶಗೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 2 ಆರೋಪಿಗಳನ್ನು ಪೊಲೀಸರು

ನಳಿನ್ ಕುಮಾರ್,ಸದಾನಂದ ಗೌಡರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ಆರೋಪಿಗಳಿಗೆ ರಕ್ತ ಒಸರುವಷ್ಟು ಥಳಿಸಿದ ಪೊಲೀಸರು |ನಡೆಯಲಾಗದ ಸ್ಥಿತಿಯಲ್ಲಿ ಕಾರ್ಯಕರ್ತರು Read More »

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ|ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ|ಡಿಕೆಶಿಗೆ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ರೇಸ್​ನಲ್ಲಿ ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಜಯವಾಗಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಸಿದ್ದು ನಿವಾಸದಲ್ಲಿ ಬಿಗಿಭದ್ರತೆಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ|ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ|ಡಿಕೆಶಿಗೆ ಭರವಸೆ Read More »

ರಮಾನಾಥ ರೈ ನಿವೃತ್ತಿಯಾಗಲು ಬಿಡುವುದಿಲ್ಲ – ಖಾದರ್

ಸಮಗ್ರ ನ್ಯೂಸ್: ರಮಾನಾಥ ರೈ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮಾಜಿ‌ ಸಚಿವ ಯು ಟಿ‌ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ರಮಾನಾಥ ರೈ ಅವರು ಅತ್ಯಂತ ಹಿರಿಯ ನಾಯಕರು. ಜಿಲ್ಲೆಯ ಅಭಿವೃದ್ಧಿ ಗೆ ಅಪಾರವಾದ ಕೊಡುಗೆಯನ್ನು ಕೊಟ್ಟವರು. ಅತ್ಯಂತ ಪ್ರಾಮಾಣಿಕ ರಾಜಕೀಯ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ನಿವೃತ್ತಿ ಯಾಗಲು ಜನತೆ ಮತ್ತು ಪಕ್ಷ ಎಂದಿಗೂ ಬಿಡುವುದಿಲ್ಲ. ರಾಜಕೀಯ ದಲ್ಲಿ ಯಾವಾಗಲೂ

ರಮಾನಾಥ ರೈ ನಿವೃತ್ತಿಯಾಗಲು ಬಿಡುವುದಿಲ್ಲ – ಖಾದರ್ Read More »

ಕಾಂಗ್ರೆಸ್ ಹೈಕಮಾಂಡ್ ಗೆ ಬಿಸಿತುಪ್ಪವಾದ ಸಿಎಂ ಆಯ್ಕೆ| ಡಿ ಕೆ ಶಿವಕುಮಾರ್ ಮತ್ತು‌ ಸಿದ್ದರಾಮಯ್ಯ ‌ಮಧ್ಯೆ ಬಿಗ್ ಫೈಟ್

ಸಮಗ್ರ ನ್ಯೂಸ್: ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ತೀವ್ರ ಪೈಪೋಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬೆಂಬಲವನ್ನು ಪಡೆದ ನಂತರ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್‌ ಗಿಂತ ಸಿಎಂ ಸ್ಥಾನಕ್ಕೆ ಹತ್ತಿರವಾಗಿದ್ದಾರೆ. ಆದರೆ, ಮುಖ್ಯಮಂತ್ರಿ ವಿಚಾರದಲ್ಲಿ ಕಾಂಗ್ರೆಸ್ ಉನ್ನತ ನಾಯಕತ್ವ ಇನ್ನೂ ಭಿನ್ನಾಭಿಪ್ರಾಯ ಹೊಂದಿದೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತಿದ್ದಾರೆ. ಬಹುತೇಕ ಶಾಸಕರು ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕಿ

ಕಾಂಗ್ರೆಸ್ ಹೈಕಮಾಂಡ್ ಗೆ ಬಿಸಿತುಪ್ಪವಾದ ಸಿಎಂ ಆಯ್ಕೆ| ಡಿ ಕೆ ಶಿವಕುಮಾರ್ ಮತ್ತು‌ ಸಿದ್ದರಾಮಯ್ಯ ‌ಮಧ್ಯೆ ಬಿಗ್ ಫೈಟ್ Read More »

ಕಲ್ಲಪಳ್ಳಿ : ವಿಜೃಂಭನೆಯಿಂದ ನಡೆದ ಒತ್ತೆಕೊಲ

ಸಮಗ್ರ ನ್ಯೂಸ್: ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಮೇ 15 ಮತ್ತು 16ರಂದು ಕಲ್ಲಪಳ್ಳಿಯ ಕೂಟುಪಿಲಾವು ಎಂಬಲ್ಲಿ ವಿಜೃಂಭನೆಯಿಂದ ನಡೆಯಿತು. ಕೂಟುಪಿಲಾವು ಶ್ರೀ ವಿಷ್ಣುಮೂರ್ತಿ ಸೇವಾಸಂಘದ ವತಿಯಿಂದ ನಡೆದ ಶ್ರೀ ವಿಷ್ಣುಮೂರ್ತಿ ಒತ್ತೆಕೋಲದಲ್ಲಿ ಸಾವಿರಾರು ಭಕ್ತರು ಶ್ರೀ ದೇವರ ಕೃಪೆಗೆ ಪಾತ್ರರಾದರು.

ಕಲ್ಲಪಳ್ಳಿ : ವಿಜೃಂಭನೆಯಿಂದ ನಡೆದ ಒತ್ತೆಕೊಲ Read More »

ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು|ಸುಳ್ಯ ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಸಭೆ

ಸಮಗ್ರ ನ್ಯೂಸ್: ಸುಳ್ಯ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರಿಗೆ ಅಭಿನಂದನಾ ಸಭೆ ಸುಳ್ಯದ ಬೂಡು ಕೇರ್ಪಳ ಬಂಟರ ಭವನದಲ್ಲಿ ಮಂಗಳವಾರ ನಡೆಯಿತು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದ ಭಾಗೀರಥಿ ಮುರುಳ್ಯ ಅವರು ಬಾರೀ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸುಳ್ಯ ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಬೀತು ಪಡಿಸಲಾಗಿದೆ

ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು|ಸುಳ್ಯ ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಸಭೆ Read More »