ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ
ಸಮಗ್ರ ನ್ಯೂಸ್: ‘ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ಮುಂದುವರಿದರೆ ಕೇಂದ್ರದ ಯೋಜನೆಗಳು ಮುಂದುವರಿಯುತ್ತವೆ. ಒಂದು ವೇಳೆ ಸಿದ್ದರಾಮಯ್ಯನವರ ಸರ್ಕಾರ ಬಂದರೆ ಅವುಗಳಿಗೆ ಬ್ರೇಕ್ ಬೀಳುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು. ಹರಪನಹಳ್ಳಿ ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಭಾನುವಾರ ಮತಯಾಚಿಸಿ ಮಾತನಾಡಿದ ಅವರು, ‘ಡಬಲ್ ಎಂಜಿನ್ ಸರ್ಕಾರ ಮುಂದುವರಿದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಪ್ರಧಾನ ಮಂತ್ರಿ ಗರೀಬ್ ಅನ್ನ ಕಲ್ಯಾಣ ಯೋಜನೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ […]










