ಕಮಲ ಎಸೆದು ಕೈ ಹಿಡಿದ ಜಗದೀಶ್ ಶೆಟ್ಟರ್
ಸಮಗ್ರ ನ್ಯೂಸ್: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ದೊರಕದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ವರಿಷ್ಠರ ಸಂಧಾನಕ್ಕೆ ಮಣಿಯದ ಶೆಟ್ಟರ್ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಗ್ಗೆ 9.30ಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಶೆಟ್ಟರ್ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಕಮಲ ಎಸೆದು ಕೈ ಹಿಡಿದ ಜಗದೀಶ್ ಶೆಟ್ಟರ್ Read More »










