ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್
ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿ ಸಿದ್ದರಾಮಯ್ಯ ಅವರ ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದೆ.
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್ Read More »