ರಾಜಕೀಯ

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ

ಸಮಗ್ರ ನ್ಯೂಸ್: ಸಪ್ಟೆಂಬರ್​ 2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರಿ ಸಮಾವೇಶಕ್ಕೆ ವಿಶಾಲ ಜರ್ಮನ್ ಪೆಂಡಾಲ್ ಅಳವಡಿಸಲು ಮತ್ತು ವೇದಿಕೆ ಸಹಿತ ಇಡೀ ಸಭಾಂಗಣ ಪೂರ್ತಿ ನೆಲದಿಂದ ಎತ್ತರದಲ್ಲಿ ಇರುವಂತೆ ಸಿದ್ಧತೆ ಆರಂಭವಾಗಿದೆ. ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ ಫ್ಲ್ಯಾಟ್‌ಫಾರಂ ರಚಿಸಲಾಗುತ್ತದೆ. ಇದರಿಂದಾಗಿ ಒಂದು ವೇಳೆ ಮಳೆ ಬಂದರೂ […]

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ Read More »

ಕುಕ್ಕೆ: ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ – ಸಚಿವ ವಿ.ಸೋಮಣ್ಣ

ಸಮಗ್ರ ನ್ಯೂಸ್: ‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ವಸತಿ ಯೋಜನೆಯಡಿ 5 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಕ್ಕೆ, 1 ಲಕ್ಷ ಮನೆಗಳನ್ನು ನಗರ ಪ್ರದೇಶಕ್ಕೆ ನೀಡಿದ್ದಾರೆ. 2.34 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಗ್ರಾಮೀಣ ಭಾಗದಲ್ಲಿ ಆರಂಭವಾಗಿದೆ’ ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಅವರು ಸುದ್ದಿಗಾರರ ಜತೆ ಮಾತನಾಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳೂ ಸೇರಿದಂತೆ ಒಟ್ಟು

ಕುಕ್ಕೆ: ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ – ಸಚಿವ ವಿ.ಸೋಮಣ್ಣ Read More »

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ

ಸಮಗ್ರ ನ್ಯೂಸ್: ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಕಾಂಗ್ರೆಸ್ ನಲ್ಲಿ ದೇಶ ಮಟ್ಟದಲ್ಲಿ ನಾಯಕನ ವರ್ಚಸ್ಸು, ಖ್ಯಾತಿ ಗಳಿಸಿರುವ ನಾಯಕ ಇಲ್ಲದ ಕಾರಣ ಅವರನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಮನವೊಲಿಸಲಾಗುವುದು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಬಿಟ್ಟರೆ ಯಾರಿದ್ದಾರೆ ಹೇಳಿ, ನನಗೆ ಬೇರೊಬ್ಬರು ಕಾಣಿಸುತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದಾಳತ್ವ ವಹಿಸಿಕೊಳ್ಳಲು ಸಿದ್ಧರಿಲ್ಲ ಎಂಬ ವರದಿಗಳ ಕುರಿತು, ಖರ್ಗೆ ಅವರು “ಪಕ್ಷಕ್ಕಾಗಿ, ದೇಶಕ್ಕಾಗಿ,

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ Read More »

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ವಿಧಿವಶ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರು ಅನಾರೋಗ್ಯದಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಹೊಸಹಳ್ಳಿಯಲ್ಲಿರುವ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ರಾಮೇಗೌಡ ಅವರಿಗೆ 69 ವರ್ಷ ವಯಸ್ಸಾಗಿತ್ತು, ಮೃತರು ಪತ್ನಿ ರುಕ್ಮಿಣಿ ಮಕ್ಕಳಾದ ರವಿ ರಘು ಮಗಳು ನಾಗರತ್ನ (ಬೋರಮ್ಮ) ಸೇರಿದಂತೆ ಕುಟುಂಬದ ಬಳಗವನ್ನು ಅಗಲಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ವಿಧಿವಶ Read More »

ಸೆ. ೧೨ರಿಂದ ಕರ್ನಾಟಕ ವಿಧಾನಸಭೆ ‌ಮುಂಗಾರು ಅಧಿವೇಶನ

ಸಮಗ್ರ ನ್ಯೂಸ್: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ನಿರ್ಧರಿಸಿದೆ. ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಸಲು ನಿರ್ಧರಿಸಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ

ಸೆ. ೧೨ರಿಂದ ಕರ್ನಾಟಕ ವಿಧಾನಸಭೆ ‌ಮುಂಗಾರು ಅಧಿವೇಶನ Read More »

ಪತನದ ಭೀತಿಯಲ್ಲಿ ದೆಹಲಿಯ ಆಪ್ ಸರ್ಕಾರ| ಹಲವು ಶಾಸಕರು ನಾಟ್ ರೀಚೇಬಲ್!!

ಸಮಗ್ರ ನ್ಯೂಸ್: ದೇಶವನ್ನು ಸಂಪೂರ್ಣವಾಗಿ ಕೇಸರಿಮಯ ಮಾಡಲು ಬಿಜೆಪಿಯು ಇನ್ನಿಲ್ಲದ ರಣತಂತ್ರವನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬಳಕೆ ಮಾಡುತ್ತಲೇ ಇದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರ ಉರುಳಿಸಿದ್ದು, ಇದೇ ಮಾದರಿಯನ್ನು ದೆಹಲಿಗೆ ಅಳವಡಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಬಿಹಾರದಲ್ಲಿಯೂ ಇಂತಹದ್ದೊಂದು ಪ್ರಯತ್ನವನ್ನೂ ಬಿಜೆಪಿ ಮಾಡಿತ್ತು ಆದರೆ ಯಶಸ್ವಿಯಾಗುವಲ್ಲಿ ಸೋತಿತ್ತು. ಇದೀಗ ಬಿಜೆಪಿಯ ಕಣ್ಣು ದೆಹಲಿ ಸರ್ಕಾರದ ಮೇಲೆ ಬಿದ್ದಿದೆಯೇ ಎಂಬ ಅನುಮಾನ ಮೂಡಿದೆ. ಬಿಜೆಪಿಯು ನಮ್ಮ ಶಾಸಕರನ್ನು ಸೆಳೆದುಕೊಳ್ಳುತ್ತಿದೆ ಎಂದು ಆಮ್​ ಆದ್ಮಿ

ಪತನದ ಭೀತಿಯಲ್ಲಿ ದೆಹಲಿಯ ಆಪ್ ಸರ್ಕಾರ| ಹಲವು ಶಾಸಕರು ನಾಟ್ ರೀಚೇಬಲ್!! Read More »

ಕಾಂಗ್ರೆಸ್ ಗೆ ಬಿಗ್ ಶಾಕ್; ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಗುಲಾಂ ನಬಿ ಆಜಾದ್

ಸಮಗ್ರ ನ್ಯೂಸ್: ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಶಾಕ್ ನೀಡಿದ್ದಾರೆ ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ G23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ಅವರು ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಪ್ರಮುಖ

ಕಾಂಗ್ರೆಸ್ ಗೆ ಬಿಗ್ ಶಾಕ್; ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಗುಲಾಂ ನಬಿ ಆಜಾದ್ Read More »

ಮಂಗಳೂರಿಗೆ ಮೋದಿ ಭೇಟಿ ಹಿನ್ನಲೆ| ಅಧಿಕಾರಿಗಳಿಂದ ಮಹತ್ವದ ಸಭೆ

ಸಮಗ್ರ ನ್ಯೂಸ್: ಸೆಪ್ಟೆಂಬರ್​ 2 ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ನಗರ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಕೇಂದ್ರದ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ನವಮಂಗಳೂರು ಬಂದರಿನಲ್ಲಿ ಪ್ರಧಾನಿ ಮೋದಿ 3,600 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳೊಂದಿಗೂ ಸಭೆಯ ಸಿದ್ಧತೆ, ಭದ್ರತೆ ಬಗ್ಗೆ ಚರ್ಚಿಸಲಾಯಿತು..

ಮಂಗಳೂರಿಗೆ ಮೋದಿ ಭೇಟಿ ಹಿನ್ನಲೆ| ಅಧಿಕಾರಿಗಳಿಂದ ಮಹತ್ವದ ಸಭೆ Read More »

ಮಂಗಳೂರಿಗೆ ಮೋದಿ ಭೇಟಿ ವೇಳೆ ಸಂಸದ ನಳಿನ್ ವಿರುದ್ದ ಜನಾಕ್ರೋಶಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ 2.ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಂಗಳೂರು ನಗರ ಹೊರವಲಯದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಸ್ವಾಗತಕ್ಕೆ ಹಿಂದುತ್ವದ ಭದ್ರಕೋಟೆ ಸಜ್ಜಾದರೂ ಇದೇ ಮೊದಲ ಬಾರಿಗೆ ಸ್ವಾಗತದ ಜೊತೆಗೆ ಬದಲಾವಣೆಯ ಅಭಿಯಾನ ಜೋರಾಗಿದೆ. ಬಿಜೆಪಿ ಕಾರ್ಯಕರ್ತರ ನೆಚ್ಚಿನ ‘ಪೋಸ್ಟ್ ಕಾರ್ಡ್’ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಮಂಗಳೂರಿಗೆ ಮೋದಿ ಭೇಟಿ ವೇಳೆ ಸಂಸದ ನಳಿನ್ ವಿರುದ್ದ ಜನಾಕ್ರೋಶಕ್ಕೆ ಸಿದ್ದತೆ Read More »

ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದರಾ ಸಿದ್ದರಾಮಯ್ಯ| ಮತ್ತೊಂದು ವಿವಾದ ಶುರು

ಸಮಗ್ರ ನ್ಯೂಸ್: ಮಾಂಸಹಾರ ಸೇವಿಸಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಮತ್ತೊಂದು ವಿವಾದ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಮಡಿಕೇರಿಗೆ ನೆರೆ ಸಂಕಷ್ಟಗಳನ್ನು ವೀಕ್ಷಿಸಲು ಸಿದ್ದರಾಮಯ್ಯ ಭೇಟಿ ನೀಡಿದ್ದರು. ಆ ವೇಳೆ ವಿಧಾನಪರಿಷತ್‍ನ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಅವರ ಮನೆಯಲ್ಲಿ ಸಿದ್ದರಾಮಯ್ಯ ಮತ್ತು ಇತರ ಮುಖಂಡರು ಊಟ ಮಾಡಿದ್ದರು. ಸಂಜೆ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಮಾಂಸಾಹಾರ ಊಟ ಮಾಡಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ತೀವ್ರ ಚರ್ಚೆಗೂ

ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದರಾ ಸಿದ್ದರಾಮಯ್ಯ| ಮತ್ತೊಂದು ವಿವಾದ ಶುರು Read More »