ರಾಜಕೀಯ

ವ್ಯಾಪಾರಕ್ಕಿಳಿದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡ್ತಿದೆಯಾ ಬಿಜೆಪಿ? ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ – ಕಾಂಗ್ರೆಸ್

ಸಮಗ್ರ ನ್ಯೂಸ್: ಆರ್ ಎಸ್ಎಸ್ ಹಾಗೂ ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ. ಪ್ರಚಾರದ ಹುಚ್ಚಿಗಾಗಿ ಕಳಪೆ ಮತ್ತು ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ. ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ. ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಆಗ್ರಹಿಸಿದೆ. ಬಿಜೆಪಿಗೆ ನಿಜವಾಗಿಯೂ […]

ವ್ಯಾಪಾರಕ್ಕಿಳಿದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡ್ತಿದೆಯಾ ಬಿಜೆಪಿ? ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ – ಕಾಂಗ್ರೆಸ್ Read More »

ರಾಜ್ಯದ ಕೋಮುದಳ್ಳುರಿಗೆ ಗೃಹಸಚಿವರ ತಲೆದಂಡ? ಇವರೇ ಮುಂದಿನ ಗೃಹಮಂತ್ರಿ

ಸಮಗ್ರ ನ್ಯೂಸ್: ಹಿಜಾಬ್ ವಿವಾದ, ಜಟ್ಕಾ ಹಲಾಲ್, ಮೈಕ್ ವಿವಾದ ಸೇರಿದಂತೆ ರಾಜ್ಯದಲ್ಲಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೋಮು ಸಂಬಂಧಿತ ವಿವಾದಗಳು ತೀವ್ರವಾಗಿದ್ದು, ಇದರ ಬೆನ್ನಲ್ಲೇ ಸರ್ಕಾರದ ಬಗ್ಗೆ ಸ್ವತಃ ಹಿಂದೂ ಕಾರ್ಯಕರ್ತರಿಗೆ ಅಸಮಾಧಾನ ಭುಗಿಲೆದ್ದಿದೆ. ಇನ್ನಷ್ಟು ತೀವ್ರವಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿರುವ ಹಿಂದೂ ಸಂಘಟನೆಯ ಕೆಲವು ಕಾರ್ಯಕರ್ತರು ಉತ್ತರ ಪ್ರದೇಶ ಮಾದರಿಯ ಕಠಿಣ ಕ್ರಮಗಳಿಗೆ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ತಲೆದಂಡವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ

ರಾಜ್ಯದ ಕೋಮುದಳ್ಳುರಿಗೆ ಗೃಹಸಚಿವರ ತಲೆದಂಡ? ಇವರೇ ಮುಂದಿನ ಗೃಹಮಂತ್ರಿ Read More »

ಕಾರ್ಯಕರ್ತರ ಸರಣಿ ಹತ್ಯೆ| ನಳಿನ್ ಕುಮಾರ್ ಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಗೇಟ್ ಪಾಸ್?

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಪ್ರಕರಣಗಳು ಬಿಜೆಪಿಯ ನೆಮ್ಮದಿಯನ್ನೇ ಕಸಿದುಕೊಂಡಿದೆ. ಹಿಂದುತ್ವಕ್ಕಾಗಿ ತಳಮಟ್ಟದಿಂದ ದುಡಿಯುವ ಕಾರ್ಯಕರ್ತರ ಹತ್ಯೆಯಿಂದ ಸಹಜವಾಗಿಯೇ ಕಾರ್ಯಕರ್ತರ ಆಕ್ರೋಶ ಹೆಚ್ಚಿದೆ. ಈ ಮಧ್ಯೆ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಸೇರಿದಂತೆ ಯಾವುದೇ ವಿಚಾರದಲ್ಲೂ ಶಾಂತಿ ಸುವ್ಯವಸ್ಥೆ ಹಾಗೂ ಕಾನೂನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಹಿಂದೂ ಕಾರ್ಯಕರ್ತರನ್ನು ಮುಟ್ಟಿ ನೋಡಿ ಎಂದ ಅಬ್ಬರಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೇಲಂತೂ ವಿಶೇಷವಾಗಿ

ಕಾರ್ಯಕರ್ತರ ಸರಣಿ ಹತ್ಯೆ| ನಳಿನ್ ಕುಮಾರ್ ಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಗೇಟ್ ಪಾಸ್? Read More »

ದಕ್ಷಿಣ ಕನ್ನಡ ಕೊಲೆ ವಿಚಾರದಲ್ಲಿ ಸಿಎಂಗೆ ಖಡಕ್ ಸೂಚನೆ ಕೊಟ್ಟ ಶಾ!

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿಯನ್ನು ನೀಡಿದ್ದು, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಪಕ್ಷದಲ್ಲಿನ ಸಚಿವರನ್ನು, ಶಾಸಕರನ್ನು , ಮತ್ತು ಪದಾಧಿಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಮೂರು ಕೊಲೆಗಳು ಆಗಿವೆ. ಇದರಿಂದಾಗಿ ಪಕ್ಷದ ಇಮೇಜ್‌ಗೆ ಡ್ಯಾಮೇಜ್ ಆಗುತ್ತಿದೆ. ಮಸೂದ್ , ಪ್ರವೀಣ್, ಫಾಜಿಲ್ ಕೊಲೆಗಳ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ ಆರೋಪಿಗಳನ್ನು ಶ್ರೀಘ್ರದಲ್ಲಿಯೇ ಬಂಧಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಮಿತ್ ಶಾ ಸೂಚನೆಯನ್ನು ನೀಡಿದ್ದಾರೆ. ಯಾವುದೇ

ದಕ್ಷಿಣ ಕನ್ನಡ ಕೊಲೆ ವಿಚಾರದಲ್ಲಿ ಸಿಎಂಗೆ ಖಡಕ್ ಸೂಚನೆ ಕೊಟ್ಟ ಶಾ! Read More »

ಕರಾವಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಲಿ : ಪಿಎಫ್ಐ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ನಡೆದ ಯುವಕರ ಸರಣಿ ಕೊಲೆಗಳ ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂದು ಪಿಎಫ್ಐ ರಾಜ್ಯ ಕಾರ್ಯಕಾರಿಣಿ ಆಗ್ರಹಿಸಿದೆ. ಕರಾವಳಿ ಕರ್ನಾಟಕದಲ್ಲಿ ಕೆಲ ದಿನಗಳ ಹಿಂದೆ 10 ದಿನಗಳ ಅಂತರದಲ್ಲಿ ಮೂವರು ಯುವಕರ ಹತ್ಯೆ ನಡೆದಿದೆ. ಈ ಎಲ್ಲಾ ಕೊಲೆ ಪ್ರಕರಣಗಳನ್ನು ಸಮಾನವಾಗಿ ಹಾಗೂ ಗಂಭೀರವಾಗಿ ಪರಿಗಣಿಸಬೇಕಾಗಿದ್ದ ಬಿಜೆಪಿ ಸರಕಾರ ತನ್ನ ಪಕ್ಷದ ಕಾರ್ಯಕರ್ತನ ಕೊಲೆಗೆ ಮಾತ್ರ ಅತಿಯಾದ ಪ್ರಾಮುಖ್ಯತೆ ನೀಡುತ್ತಿದೆ ಮತ್ತು ಸಂಘ ಪರಿವಾರ ನಡೆಸಿದ ಅಮಾಯಕ ಮುಸ್ಲಿಮ್ ಯುವಕರ ಹತ್ಯೆ ಘಟನೆಗಳನ್ನು ಕ್ಷುಲ್ಲಕವಾಗಿ

ಕರಾವಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಲಿ : ಪಿಎಫ್ಐ Read More »

ಮಾಜಿ ಸಿಎಂ ಸಿದ್ದರಾಮಯ್ಯರ ಬರ್ತ್ ಡೇ ಆಚರಣೆ| ಸರಿಯಾಗಿ 12 ಗಂಟೆಗೆ ಕೇಕ್ ಕಟ್

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ಮಧ್ಯರಾತ್ರಿ ಹುಬ್ಬಳ್ಳಿ ಖಾಸಗಿ ಹೊಟೇಲ್ ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಸರಿಯಾಗಿ 12 ಗಂಟೆಗೆ ಜನ್ಮದಿನ ಆಚರಣೆ ಮಾಡಿದರು. ಕೇಕ್ ಕತ್ತರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ತಿನ್ನಿಸಿದರು. ಈ ವೇಳೆ ಡಿಕೆಶಿ ಕೂಡಾ ಸಿದ್ದರಾಮಯ್ಯಗೆ ಕೇಕ್ ತಿನ್ನಿಸಿ ಶುಭ ಹಾರೈಸಿದರು. ಜನ್ಮದಿನ ಆಚರಣೆ ವೇಳೆ ಹಲವು ನಾಯಕರು ಭಾಗಿಯಾಗಿದ್ದರು. ಪಕ್ಷದ

ಮಾಜಿ ಸಿಎಂ ಸಿದ್ದರಾಮಯ್ಯರ ಬರ್ತ್ ಡೇ ಆಚರಣೆ| ಸರಿಯಾಗಿ 12 ಗಂಟೆಗೆ ಕೇಕ್ ಕಟ್ Read More »

ಮುಂದಿನ ಚುನಾವಣೆಯಲ್ಲೂ ಮೋದಿಯೇ ಪ್ರಧಾನಿ ಅಭ್ಯರ್ಥಿ – ಅಮಿತ್ ಷಾ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಜೆಡಿಯು ಮೈತ್ರಿಯು 2024ರ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರಿಯುತ್ತದೆ. ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿ ಯಾಗಿರುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪ್ರಧಾನಿ ಅಭ್ಯರ್ಥಿ ಯಾರಾಗಿರಬೇಕು ಎನ್ನುವುದು ಬಿಸಿಬಿಸಿ ಚರ್ಚೆಯ ವಿಚಾರವಾಗಿತ್ತು. ಹೊಸಬರಿಗೆ

ಮುಂದಿನ ಚುನಾವಣೆಯಲ್ಲೂ ಮೋದಿಯೇ ಪ್ರಧಾನಿ ಅಭ್ಯರ್ಥಿ – ಅಮಿತ್ ಷಾ Read More »

ಕೊಲೆಯಾದ ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ; 5 ಲಕ್ಷ ನೆರವು ನೀಡಿಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾದ ಯುವಕ ಮಸೂದ್ ಅವರ ಕಳಂಜದ ನಿವಾಸಕ್ಕೆ ತೆರಳಿದರು. ಈ ವೇಳೆ ಮನೆಯವರಿಗೆ ಸಾಂತ್ವನ ಹೇಳಿದ ಅವರು 5 ಲಕ್ಷ ಅರ್ಥಿಕ ನೆರವು ನೀಡಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

ಕೊಲೆಯಾದ ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ; 5 ಲಕ್ಷ ನೆರವು ನೀಡಿಕೆ Read More »

ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ| ಸಾಂತ್ವನದೊಂದಿಗೆ 5 ಲಕ್ಷ ಚೆಕ್ ವಿತರಣೆ| ಎನ್ಐಎ ಗೆ ಕೇಸ್ ಹಸ್ತಾಂತರವೇ ಮೂರ್ಖತನ

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಿದರು. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ 5 ಲಕ್ಷ ರೂಪಾಯಿಗಳ ಚೆಕ್ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಮತ್ತು ಅವರ ತಾಯಿ ಹೆಸರಲ್ಲಿ 5 ಲಕ್ಷ ಚೆಕ್ ನೀಡಿದ್ದಾರೆ. ಮೃತ ಮಸೂದ್ ಕುಟುಂಬಕ್ಕೂ ಶಾಂತಿ ಸಿಗಬೇಕು. ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು. ಆಗ ನಮಗೆ

ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ| ಸಾಂತ್ವನದೊಂದಿಗೆ 5 ಲಕ್ಷ ಚೆಕ್ ವಿತರಣೆ| ಎನ್ಐಎ ಗೆ ಕೇಸ್ ಹಸ್ತಾಂತರವೇ ಮೂರ್ಖತನ Read More »

ಮಂಗಳೂರು: ನಾಳೆ(ಆ.1) ಹತ್ಯೆಗೊಳಗಾದ ಸಂತ್ರಸ್ತರ ಮನೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ. ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್‌, ಪ್ರವೀಣ್‌ ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿವೆ. ನಂತರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವರು.

ಮಂಗಳೂರು: ನಾಳೆ(ಆ.1) ಹತ್ಯೆಗೊಳಗಾದ ಸಂತ್ರಸ್ತರ ಮನೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ Read More »