ನ.26ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ| ವಿವಿಧ ಧಾರ್ಮಿಕ, ಸಾಂಸ್ಕೃತಿಕ, ವೈದಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ ಕುಡುಮಪುರ
ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ನ.30 ರ ವರೆಗೆ ನಡೆಯಲಿದೆ. ನ.26ರಂದು 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಮಾಜಿ ವಿ.ಪ.ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವರು. […]