ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್/ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹುದ್ದೆಗಳಿಗೆ ನೇಮಕಾತಿ
ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕ ಕಚೇರಿಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಡಳಿತ ಸಹಾಯಕ/ ಗುಮಾಸ್ತ, ಸ್ವಾಗತಕಾರರು, ಡಾಟಾ ಎಂಟ್ರಿ ಆಪರೇಟರ್ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಪದವಿ, 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿದ್ದು, ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಕಂಪ್ಯೂಟರ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. […]