ರಾಜಕೀಯ

ಜೆಡಿಎಸ್ ನ ಮತ್ತೊಂದು ಪ್ರಬಲ ವಿಕೆಟ್ ಪತನ!!?

ಸಮಗ್ರ ನ್ಯೂಸ್: ಜೆಡಿಎಸ್‌ ಪಕ್ಷದ ವಾಟ್ಸಾಪ್‌ ಗ್ರೂಪ್‌ನಿಂದ ಶಿವಲಿಂಗೇಗೌಡ ಎಕ್ಸಿಟ್‌ ಆಗಿದ್ದು, ಅವ್ರು ಸಧ್ಯದಲ್ಲೇ ಪಕ್ಷ ತೊರೆಯಲಿದ್ದಾರೆ ಎಂಬ ಗುಸುಗುಸು ಕೇಳಿ ಬರ್ತಿದೆ. ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಶಾಸಕರಾಗಿರುವ ಶಿವಲಿಂಗೇಗೌಡ ಜೆಡಿಎಸ್‌ನ ಪ್ರಮುಖ ವಾಟ್ಸಾಪ್‌ ಗ್ರೂಪ್‌ಗಳಿಂದ ಎಕ್ಸಿಟ್‌ ಆಗಿದ್ದು, ನಿನ್ನೆ ಸಂಜೆಯಿಂದ ಪಕ್ಷದ ಎಲ್ಲಾ ಗ್ರೂಪ್‌ಗಳಿಂದ ಎಕ್ಸಿಟ್‌ ಆಗುತ್ತಿದ್ದಾರೆ. ಇನ್ನು ಜೆಡಿಎಸ್‌ ನಾಯಕರ ಜೊತೆ ಶಿವಲಿಂಗೇಗೌಡ ಅಂತರ ಕಾಯ್ದುಕೊಳ್ಳುತ್ತಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಗೌಡರು ಶೀಘ್ರ ಜೆಡಿಎಸ್‌ ತೊರೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಜೆಡಿಎಸ್ ನ ಮತ್ತೊಂದು ಪ್ರಬಲ ವಿಕೆಟ್ ಪತನ!!? Read More »

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು| ಫೀಲ್ಡಿಗಿಳಿದ ಠಾಕ್ರೆ ಪತ್ನಿ| ಜಡೆಗಳಿಂದ ಜಗಳ ಮುಗಿಯುವುದೇ?

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಹೊಸ ಟ್ವಿಸ್ಟ್ ಒಂದು ಹೊರಬಿದ್ದಿದೆ. ಮೂಲಗಳ ಪ್ರಕಾರ ಬಂಡಾಯ ಶಾಸಕರ ಮನವೊಲಿಸಲು ಶಿವಸೇನೆ ಶತಪ್ರಯತ್ನ ನಡೆಸುತ್ತಿದೆ. ಇದರ ನಡುವೆ ಶಿವಸೇನೆಯ ಹಿರಿಯ ನಾಯಕರ ನಂತರ ಇದೀಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿ ಶಾಸಕರ ಮನವೊಲಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಉದ್ಧವ್‌ ಠಾಕ್ರೆ ಪತ್ನಿ ರಶ್ಮಿ ಠಾಕ್ರೆ ಶಾಸಕರನ್ನು ವಾಪಸ್ ಪಕ್ಷಕ್ಕೆ ಕರೆತರಲು ವಿಶೇಷ ಯೋಜನೆ ರೂಪಿಸಿದ್ದಾರೆ. ಮಾಹಿತಿ ಪ್ರಕಾರ, ಸಿಎಂ ಉದ್ಧವ್ ಠಾಕ್ರೆ ಅವರ

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು| ಫೀಲ್ಡಿಗಿಳಿದ ಠಾಕ್ರೆ ಪತ್ನಿ| ಜಡೆಗಳಿಂದ ಜಗಳ ಮುಗಿಯುವುದೇ? Read More »

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಭವಿಷ್ಯದ ರಾಜಕೀಯ ಹೋರಾಟ ಭಾನುವಾರ ಕಾನೂನು ವಲಯಕ್ಕೆ ಹೋಗಿದ್ದು, ಬಂಡಾಯ ಶಾಸಕ ಏಕನಾಥ್ ಶಿಂಧೆ ಅವರು ತಮ್ಮ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ ಕ್ರಮವನ್ನು ಸರ್ವೊಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ ನಡೆಯಲಿದೆ. ಉಪಸಭಾಪತಿ ನರಹರಿ ಝಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿ ಅಜಯ್ ಚೌಧರಿ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿರುವುದನ್ನು ಏಕನಾಥ್ ಶಿಂಧೆ ಬಣವು ಪ್ರಶ್ನಿಸಿದೆ

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ Read More »

ಶಿಕ್ಷಕರ ಮಕ್ಕಳಿಗೆ ಕನ್ನಡ ಮಾಧ್ಯಮ ಕಡ್ಡಾಯ – ಕಸಾಪ ಅಧ್ಯಕ್ಷ ಮಹೇಶ್ ಜೋಶಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲಾ ಶಿಕ್ಷಕರ ಮಕ್ಕಳಿಗೆ ಕನ್ನಡ ಮಾಧ್ಯಮ ಶಿಕ್ಷಣ ಕಡ್ಡಾಯ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಆಡಳಿತಾತ್ಮಕ ಆದೇಶವಾಗಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಹೇಳಿದ್ದಾರೆ. ಕನ್ನಡ ಶಾಲೆಗಳ ಸ್ಥಿತಿ ದುಸ್ಥಿತಿಗೆ ತಲುಪಿವೆ. ಇದೇ ರೀತಿ ಮುಂದುವರಿದರೆ 10 ವರ್ಷದಲ್ಲಿ ಕನ್ನಡ ಉಳಿಯುವುದಿಲ್ಲ. ಕನ್ನಡ ಸಂಘಟನೆಗಳು, ಕಸಾಪ ಯಾವುದೂ ಇರುವುದಿಲ್ಲ. ಕನ್ನಡ ಮಾಧ್ಯಮ ಕಡ್ಡಾಯ ವಿಚಾರವಾಗಿ ಸಾಹಿತಿ ಎಸ್. ಎಲ್. ಭೈರಪ್ಪ ನೇತೃತ್ವದ ಸಮಿತಿ ರಚಿಸಲಾಗಿದೆ. ಶಿಕ್ಷಕರು ಜನರ

ಶಿಕ್ಷಕರ ಮಕ್ಕಳಿಗೆ ಕನ್ನಡ ಮಾಧ್ಯಮ ಕಡ್ಡಾಯ – ಕಸಾಪ ಅಧ್ಯಕ್ಷ ಮಹೇಶ್ ಜೋಶಿ Read More »

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ. ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ Read More »

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಎನ್ ಡಿ ಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ಅವರು ಜಾರ್ಖಂಡ್ ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 64 ವರ್ಷದ ದ್ರೌಪದಿ ಮುರ್ಮು ಅವರು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಾಪೋಸಿ ಗ್ರಾಮದಲ್ಲಿ 1958 ರ

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ Read More »

ರಾಷ್ಟ್ರಪತಿ ಚುನಾವಣೆ| ಯಶವಂತ್ ಸಿನ್ಹಾ ಸ್ಪರ್ಧೆಗೆ ರೆಡಿ!

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆಯುತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ. ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಆಯ್ಕೆಯಾಗಬೇಕಿದ್ದರೆ ಪಕ್ಷದ ಸದಸ್ಯತ್ವ ತೊರೆಯಬೇಕು ಎಂದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಆಗ್ರಹಿಸಿದ್ದವು. ಹೀಗಾಗಿ ಪ್ರತಿಪಕ್ಷಗಳ ಸಭೆಗೂ ಮುನ್ನವೇ ಸಿನ್ಹಾ ಅವರು ಟಿಎಂಸಿ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ. ‘ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಕ್ಷದಲ್ಲಿ ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ಆಭಾರಿಯಾಗಿದ್ದೇನೆ. ರಾಷ್ಟ್ರೀಯ

ರಾಷ್ಟ್ರಪತಿ ಚುನಾವಣೆ| ಯಶವಂತ್ ಸಿನ್ಹಾ ಸ್ಪರ್ಧೆಗೆ ರೆಡಿ! Read More »

ಜನಪರ ಯೋಜನೆಗಳನ್ನು ನೀಡಿ ಡಬಲ್ ಇಂಜಿನ್ ಸರ್ಕಾರ ಯಶಸ್ವಿಯಾಗಿದೆ | ಮೈಸೂರಿನಲ್ಲಿ ಪ್ರಧಾನಿ ಮೋದಿ ತಿರುಗೇಟು

ಸಮಗ್ರ ನ್ಯೂಸ್: ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರ ಜನಪರ ಯೋಜನೆಗಳನ್ನು ನೀಡುವುದರಲ್ಲಿ ಯಶಸ್ವಿಯಾಗಿದೆ ಎಂದು ಹೇಳುವ ಮೂಲಕ ಟೀಕಾಕಾರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದರು. ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳೊಂದಿಗೆ ಸೋಮವಾರ ಸಂವಾದ ನಡೆಸಿ ನಂತರ ಅಖಿಲ ಭಾತರ ವಾಕ್ ಮತ್ತು ಶ್ರವಣ ಸಂಸ್ಥೆಯ ಉತ್ಕೃಷ್ಟ ಕಟ್ಟಡ ಲೋಕಾರ್ಪಣೆಗೊಳಿಸಿ ನಾಗನಹಳ್ಳಿ ಮೈಸೂರು ನೂತನ ರೈಲ್ವೆ ಕೋಚಿಂಗ್ ಕಾಂಪ್ಲೆಕ್ಸ್ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಮತ್ತು

ಜನಪರ ಯೋಜನೆಗಳನ್ನು ನೀಡಿ ಡಬಲ್ ಇಂಜಿನ್ ಸರ್ಕಾರ ಯಶಸ್ವಿಯಾಗಿದೆ | ಮೈಸೂರಿನಲ್ಲಿ ಪ್ರಧಾನಿ ಮೋದಿ ತಿರುಗೇಟು Read More »

ಜು.18 ರಾಷ್ಟ್ರಪತಿ ಚುನಾವಣೆ| ದೇವೇಗೌಡ ಅಭ್ಯರ್ಥಿ ಸಾಧ್ಯತೆ

ಸಮಗ್ರ ನ್ಯೂಸ್: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆಯುತ್ತಿರುವ ಸಮಾನ ಮನಸ್ಕ ಪಕ್ಷಗಳ ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿಗೆ ದೇವೇಗೌಡರ ಹೆಸರು ಬಲವಾಗಿ ಕೇಳಿಬಂದಿದೆ. ದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್‌ ಸೇರಿ ಸುಮಾರು ಹದಿನಾರು ಪಕ್ಷಗಳ ಮುಖಂಡರು ಭಾಗಿಯಾಗಿದ್ದಾರೆ. ಇದರಲ್ಲಿ ಎಲ್ಲರೂ ದೇವೇಗೌಡರ ಹೆಸರು ಪ್ರಸ್ತಾಪಿಸಿದ್ದಾರೆ. ಹೀಗಾಗಿ, ಬಿಜೆಪಿಗೆ ವಿರುದ್ಧವಾಗಿ ದೇವೇಗೌಡರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಕಂಡುಬರುತ್ತಿದೆ. ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೆಸರು ರಾಷ್ಟ್ರಪತಿ ಹುದ್ದೆಗೆ ಕೇಳಿಬಂದಿತ್ತು. ಆದ್ರೆ ನನಗೆ ಆ ಬಗ್ಗೆ ಆಸಕ್ತಿ ಇಲ್ಲ ಎಂದು

ಜು.18 ರಾಷ್ಟ್ರಪತಿ ಚುನಾವಣೆ| ದೇವೇಗೌಡ ಅಭ್ಯರ್ಥಿ ಸಾಧ್ಯತೆ Read More »

ಮುಂದಿನ ಚುನಾವಣೆಯಲ್ಲಿ ಎಸ್.ಅಂಗಾರಗೆ ಗೇಟ್‌ಪಾಸ್!?
ಸಚಿವರಾಗಿಯೂ ಕ್ಷೇತ್ರದಲ್ಲಿ ಕೆಲಸ ಮಾಡ್ತಿಲ್ಲವಂತೆ ಸುಳ್ಯ ಶಾಸಕ!!

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತದಲ್ಲಿ 6 ಬಾರಿಯ ಶಾಸಕರಾಗಿ ಇದೀಗ ಸಚಿವರಾಗಿರುವ ಎಸ್ ಅಂಗಾರರು ಮುಂದಿನ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುತ್ತಿಲ್ಲ ಎಂಬ ಸುದ್ದಿಗಳು ಸ್ವಪಕ್ಷದಲ್ಲೇ ಕೇಳಿ ಬರುತ್ತಿದೆ. ಹಾಗಿದ್ದರೆ ಮುಂದೆ ಬಿಜೆಪಿಯಿಂದ ಸುಳ್ಯ ‌ಕ್ಷೇತ್ರದಲ್ಲಿ ಸ್ಷರ್ದಿಸುವವರು ಯಾರು? ಎಂಬ ಕುತೂಹಲ ಮೂಡಿದೆ. ೧೯೯೪ರಿಂದ ಸುಳ್ಯ ಕ್ಷೇತ್ರದ ಶಾಸಕರಾಗಿರುವ ಅಂಗಾರರು ಜನಾನುರಾಗಿ ಹಾಗೂ ಅಜಾತ ಶತ್ರು ಎಂದೇ ಖ್ಯಾತರು. ಸರಳ ಸಜ್ಜನಿಕೆಯ ಅವರ ವ್ಯಕ್ತಿತ್ವ ಅಲ್ಲಿನ ಜನಸ್ತೋಮಕ್ಕೆ ಮೆಚ್ಚುಗೆಯಾದುದರಿಂದಲೇ ಅವರು ಹೀಗೆ ಸತತವಾಗಿ ಗೆಲುವಿನ ನಗೆ

ಮುಂದಿನ ಚುನಾವಣೆಯಲ್ಲಿ ಎಸ್.ಅಂಗಾರಗೆ ಗೇಟ್‌ಪಾಸ್!?
ಸಚಿವರಾಗಿಯೂ ಕ್ಷೇತ್ರದಲ್ಲಿ ಕೆಲಸ ಮಾಡ್ತಿಲ್ಲವಂತೆ ಸುಳ್ಯ ಶಾಸಕ!!
Read More »