ಬದುಕಿರುವಾಗಲೇ ರೆಡಿಯಾಯ್ತು ಗುಬ್ಬಿ ಶಾಸಕ ಶ್ರೀನಿವಾಸ್ ತಿಥಿಕಾರ್ಡ್| ಜಾಲತಾಣಗಳಲ್ಲಿ ಹರಡಿದ ಜೆಡಿಎಸ್ ಕಾರ್ಯಕರ್ತರ ಕಿಚ್ಚು!!
ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಯಲ್ಲಿ ಗುಬ್ಬಿ ಶ್ರೀನಿವಾಸ್ ಗೌಡ ಹಾಗೂ ಕೋಲಾರ ಶ್ರೀನಿವಾಸ್ ಅಡ್ಡಮತದಾನ ಮಾಡಿದ್ದು, ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಎಚ್ಡಿ ಕುಮಾರಸ್ವಾಮಿ ಸೇರಿದಂತೆ ಕಾರ್ಯಕರ್ತರು ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಬಿಡದೇ ಜೆಡಿಎಸ್ ಕಾರ್ಯಕರ್ತರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್ ತಯಾರಿಸಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. […]










