ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಆಗಮಿಸಿದ ಕಲ್ಲಡ್ಕ ಪ್ರಭಾಕರ ಭಟ್| ‘ಪ್ರಭಾಕರ ಭಟ್ ಗೋ ಬ್ಯಾಕ್’ ಘೋಷಣೆ| ಮಂಗಳೂರು ವಿಶ್ವವಿದ್ಯಾಲಯದಲ್ಲಿ ರೊಚ್ಚಿಗೆದ್ದ ಕ್ಯಾಂಪಸ್ ಫ್ರಂಟ್|
ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಅತಿಥಿ ಆಹ್ವಾನಿಸಿರುವುದನ್ನು ವಿರೋಧಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( CFI) ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ‘ಪ್ರಭಾಕರ ಭಟ್ ಗೋ ಬ್ಯಾಕ್’ ಎಂದು ಘೋಷಣೆ ಕೂಗಿದರು. ಪ್ರತಿಭಟನೆಯ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಲಾಯಿತು. ‘ದ್ವೇಷ ಭಾಷಣವನ್ನು ನಿರಂತರವಾಗಿ ಮಾಡುತ್ತಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು […]