ರಾಜಕೀಯ

ಮತ್ತೆ ಚುನಾವಣಾ ಕಣಕ್ಕೆ ಇಳಿದ ಕೇಜ್ರಿವಾಲ್‌/ ನಾಳೆ ಹರಿಯಾಣದಲ್ಲಿ ಬೃಹತ್‌ ರೋಡ್‌ ಶೋ

ಸಮಗ್ರ ನ್ಯೂಸ್‌: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಸೆಪ್ಟೆಂಬರ್ 20 ರಂದು ಜಗಧ್ರಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಗುರುವಾರ ತಿಳಿಸಿದ್ದಾರೆ. ಕೇಜ್ರಿವಾಲ್ ಅವರು ಹರಿಯಾಣದ 11 ಜಿಲ್ಲೆಗಳ 13 ಕಡೆ ನಡೆಯುವ ಸಮಾವೇಶಗಳಲ್ಲೂ ಭಾಗಿಯಾಗಲಿದ್ದಾರೆ. ಶೀಘ್ರದಲ್ಲೇ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಪಾಠಕ್ ಹೇಳಿದ್ದಾರೆ. 90 ಸದಸ್ಯ ಬಲದ ಹರಿಯಾಣ […]

ಮತ್ತೆ ಚುನಾವಣಾ ಕಣಕ್ಕೆ ಇಳಿದ ಕೇಜ್ರಿವಾಲ್‌/ ನಾಳೆ ಹರಿಯಾಣದಲ್ಲಿ ಬೃಹತ್‌ ರೋಡ್‌ ಶೋ Read More »

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌

ಸಮಗ್ರ ನ್ಯೂಸ್‌: ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಬಿಜೆಪಿಯ ಪ್ರಸ್ತಾಪವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದು, ಇದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷವು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ನಂಬುವುದಿಲ್ಲ, ಪ್ರಾಯೋಗಿಕವಾಗಿ ಅದು ಸಾಧ್ಯವಿಲ್ಲ. ಅವರು ಎಲ್ಲಾ ರಾಜ್ಯ ಪಕ್ಷಗಳನ್ನು ಸಡಿಲಿಸಲು ಬಯಸುತ್ತಾರೆ. ಅವರು ರಾಷ್ಟ್ರೀಯ ಪಕ್ಷಗಳು ಮಾತ್ರ ಉಳಿಯಬೇಕು ಎಂದು ಅವರು ಭಾವಿಸುತ್ತಾರೆ. ಫೆಡರಲ್ ರಚನೆಯಲ್ಲಿ ನೀವು ಅದನ್ನು ಮಾಡಲು ಸಾಧ್ಯವಿಲ್ಲ ಅವರು ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಶಿವಕುಮಾ‌ರ್ ತಿಳಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌ Read More »

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಜೀವ ಬೆದರಿಕೆ ಮತ್ತು ಜಾತಿನಿಂದನೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಅಂದರಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಇದೀಗ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು Read More »

ದೆಹಲಿಯ ಮುಂದಿನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ

ಸಮಗ್ರ ನ್ಯೂಸ್: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ದೆಹಲಿಯ ಮುಂದಿನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ Read More »

ಅನ್ನದಾತರಿಗೆ ಗುಡ್ ನ್ಯೂಸ್| ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸೂಚನೆ

ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕೃಷಿ ಪಂಪ್ಸೆಟ್

ಅನ್ನದಾತರಿಗೆ ಗುಡ್ ನ್ಯೂಸ್| ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸೂಚನೆ Read More »

ಕೇಜ್ರಿವಾಲ್‌ಗೆ ಸಿಗದ ಬಿಡುಗಡೆ ಭಾಗ್ಯ/ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಸಮಗ್ರ ನ್ಯೂಸ್‌: ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 11 ರಂದು ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಬಂಧನವನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಿದೆ. ಈ ಹಿಂದೆ ಅವರಿಗೆ ನೀಡಲಾಗಿದ್ದ ಕಸ್ಟಡಿ ಅವಧಿ ಮುಗಿದ ನಂತರ, ಶಾ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಸರೆನ್ಸಿಂಗ್ ಮೂಲಕ ರೊಸ್ ಅವೆನ್ಯೂ ಕೋರ್ಟ್‌ ಗೆ ಹಾಜರಾದರು.

ಕೇಜ್ರಿವಾಲ್‌ಗೆ ಸಿಗದ ಬಿಡುಗಡೆ ಭಾಗ್ಯ/ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸ್ತಿಪಟು ವಿನೇಶ್ ಫೋಗೇಟ್ ಬುಧವಾರ ನಾಮಪತ್ರ ಸಲ್ಲಿಸಿದರು. ವಿನೇಶ್ ಅವರೊಂದಿಗೆ ಕಾಂಗ್ರೆಸ್ ನಾಯಕ ಮತ್ತು ರೋಹ್ಮಕ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಸೋನಿಪತ್ ಸಂಸದ ಸತ್ಪಾಲ್ ಬ್ರಹ್ಮಚಾರಿ ಇದ್ದರು. ನಾನು ರಾಜಕೀಯಕ್ಕೆ ಬರುತ್ತಿರುವುದು ನನ್ನ ಅದೃಷ್ಟ. ನಾವು ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಜುಲಾನಾ ಜನರು ನನಗೆ ನೀಡುತ್ತಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಗೆಲುವು ಖಚಿತ ಎಂದು ನಾಮಪತ್ರ ಸಲ್ಲಿಸಿದ ಬಳಿಕ

ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್ Read More »

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ/ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗೊಳಿಸಿದೆ. ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರವು ನಮ್ಮ ಪಕ್ಷಕ್ಕೆ ಅಗತ್ಯವಾಗಿದೆ. ನಾವು ಯಾವಾಗಲೂ ಈ ಪ್ರದೇಶವನ್ನು ಭಾರತದೊಂದಿಗೆ ಇರಲು ಬಯಸುತ್ತೇವೆ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರಕ್ಕೆ ಬಂದರೆ ‘ಮಾ ಸಮ್ಮಾನ್ ಯೋಜನೆ’ ಅಡಿಯಲ್ಲಿ ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ವರ್ಷಕ್ಕೆ ₹ 18,000 ನೀಡುವುದಾಗಿ ಬಿಜೆಪಿ ಭರವಸೆ

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ/ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ Read More »

ರಾಜ್ಯಪಾಲರ ವಿರುದ್ದ ನಾಲಿಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ

ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರವಾಗಿ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಇದೀಗ ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ ನಾಲಿಗೆ ಹರಿಬಿಟ್ಟಿದ್ದಾರೆ. ವಾಗ್ದಾಳಿ ಬರದಲ್ಲಿ ಅಸಬಂದ್ದ ಪದ ಬಳಸಿದ್ದು, ‘ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಟ್ಟಾಳನ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟೀಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗೋಕೆ

ರಾಜ್ಯಪಾಲರ ವಿರುದ್ದ ನಾಲಿಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ Read More »

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್

ಸಮಗ್ರ ನ್ಯೂಸ್: ರಾಜ್ಯದ ಅಭಿವೃದ್ದಿಯ ಹರಿಕಾರ, ಗ್ಯಾರೆಂಟಿಗಳ ಸರದಾರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಇಲ್ಲದೆ ಈ ನಾಡಿನ 2 ನೇ ಬಾರಿಯ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮತ್ತು ಕೇಂದ್ರ ಸರಕಾರವು ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ಘಟಕ ಖಂಡಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಗೀತಾ ಕೋಲ್ಚಾರ್ ರವರು ಖಂಡಿಸಿದ್ದಾರೆ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್ Read More »