ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ;ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು: ಪ್ರಧಾನಿ ನಡೆಯನ್ನು ಹೊಗಳಿ, ಕಿಚಾಯಿಸಿದ ಸಿದ್ದು
ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಜೈಕಿಸಾನ್ ಎಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೃಷಿ ಕಾಯ್ದೆ ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ವಾಧಿಕಾರಿ […]