ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ಜೀವ ಬೆದರಿಕೆ – ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಮಂಗಳೂರಿನ ಸ್ಥಳೀಯ ನ್ಯೂಸ್ ಚಾನೆಲ್ ಒಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಚರ್ಚಾ ಕಾರ್ಯಾಕ್ರಮದಲ್ಲಿ ಪೋನ್ ಮೂಲಕ ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ ಬೆದರಿಕೆ ಒಡ್ಡಿದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು ಪೊಲೀಸ್ ಆಯುಕ್ತರಿಗೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಅವರು ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಕಾಂಗ್ರೇಸ್ ಪಕ್ಷದ ವಕ್ತಾರೆ ಲಾವಣ್ಯ ಬಲ್ಲಾಳ್ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ, ಮಂಗಳೂರು ಪೊಲೀಸ್ […]