ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ
ಬೆಂಗಳೂರು: ಯಡಿಯೂರಪ್ಪ ಸಂಪುಟದಲ್ಲಿ ಸಚಿವೆಯಾಗಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಬೊಮ್ಮಾಯಿ ಸಂಪುಟದಲ್ಲಿ ಮತ್ತೆ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದು ಪ್ರತಿಪಕ್ಷಗಳ ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಬಾರಿಯ ಯಡಿಯೂರಪ್ಪ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದ ಜೊಲ್ಲೆ, ಅಂಗನವಾಡಿಗೆ ಪೂರೈಕೆಯಾಗುತ್ತಿದ್ದ ಮೊಟ್ಟೆ ಖರೀದಿ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದ, ನಿಪ್ಪಾಣಿ ಶಾಸಕಿ ಶಶಿಕಲಾ ಅವರ ಭ್ರಷ್ಟಾಚಾರ ವಿಡಿಯೋ ಕೂಡ ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ಸಿಕ್ಕಿತ್ತು. ಇದರಲ್ಲಿ […]








